ಚೂರಿ ಇರಿದು ಯುವಕನ ಕೊಲೆ

ಬೆಂಗಳೂರು, ಡಿ.27: ಮದ್ಯದ ಅಮಲಿನಲ್ಲಿದ್ದ ವ್ಯಾಪಾರಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಜಿ ಹಳ್ಳಿಯ ಹಳೇ ಬಾಗಲೂರಿನ ನಿವಾಸಿ ಸೂರ್ಯ (29) ಮೃತ ವ್ಯಾಪಾರಿ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ರಾತ್ರಿ ಶ್ಯಾಂಪುರ ರೈಲ್ವೆ ಗೇಟ್ ಬಳಿಗೆ ಸೂರ್ಯನನ್ನು ಕರೆದುಕೊಂಡು ಹೋಗಿರುವ ದುಷ್ಕರ್ಮಿಗಳು, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಸೂರ್ಯನನ್ನು ನೋಡಿದ ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ದೇವರಜೀವನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Next Story





