ಚಿನ್ನಾಭರಣ ಕಳವು ಆರೋಪ: ಮಹಿಳೆ ಸೆರೆ

ಬೆಂಗಳೂರು, ಡಿ.27: ಮನೆ ಮಾಲಕರ ಚಿನ್ನಾಭರಣ ಕಳವು ಮಾಡಿದ ಆರೋಪದಡಿ ಮಹಿಳೆಯೊಬ್ಬಾಕೆಯನ್ನು ಇಲ್ಲಿನ ವಿದ್ಯಾರಣ್ಯಪುರ ಠಾಣಾ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಸವಿತಾ ಎಂಬಾಕೆ ಬಂಧಿತ ಆರೋಪಿಯಾಗಿದ್ದು, ವಿದ್ಯಾರಣ್ಯಪುರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿಯಾದ ಶಿಖಾ ದೇವರಾಜ ಎಂಬುವರ ಮನೆಯಲ್ಲಿ ಕಳೆದ ಕೆಲ ವರ್ಷಗಳಿಂದ ಸವಿತಾ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಶಿಖಾ ಹಾಗೂ ಕುಟುಂಬಸ್ಥರು ಮನೆಯಲ್ಲಿ ಇಲ್ಲದ ವೇಳೆ, 45 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿ, ಪರಾರಿಯಾಗಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story





