ಮಟ್ಕಾ ದಂಧೆ ಮೇಲೆ ದಾಳಿ: ನಾಲ್ವರ ಬಂಧನ

ಬೆಂಗಳೂರು, ಡಿ.27: ಹಣ ಪಣವಾಗಿ ಕಟ್ಟಿಕೊಂಡು ಮಟ್ಕಾ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ, ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ನಿವಾಸಿಗಳಾದ ಸೈಯದ್ ಖಾಸಿಂ, ಮುಬಾರಕ್, ಅನ್ವರ್, ರಿಯಾಝ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ನಗರದ ನೀಲ್ಸಂದ್ರ ಜಜಾರ್ ಬೀದಿ ವ್ಯಾಪ್ತಿಯಲ್ಲಿ ಒಬ್ಬ ವ್ಯಕ್ತಿಯು ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕಲ್ಯಾಣಿ ಮಟ್ಕಾ ಎಂಬ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಿ, ತನಿಖೆ ಮುಂದುವರೆಸಲಾಗಿದೆ.
Next Story





