Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಆರೋಗ್ಯ ನಗರ’ವಾಗಿ ರಾಮನಗರ ಅಭಿವೃದ್ಧಿ:...

‘ಆರೋಗ್ಯ ನಗರ’ವಾಗಿ ರಾಮನಗರ ಅಭಿವೃದ್ಧಿ: ಡಾ.ಸಿ.ಎನ್.ಅಶ್ವಥ್ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ28 Dec 2019 7:39 PM IST
share
‘ಆರೋಗ್ಯ ನಗರ’ವಾಗಿ ರಾಮನಗರ ಅಭಿವೃದ್ಧಿ: ಡಾ.ಸಿ.ಎನ್.ಅಶ್ವಥ್ ನಾರಾಯಣ

ಬೆಂಗಳೂರು, ಡಿ.27: ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದರು.

ಶನಿವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಶ್ನೆಯೇ ಇಲ್ಲ. ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಹೆಚ್ಚು ಸೌಲಭ್ಯಗಳನ್ನು ಒದಗಿಸುವುದರ ಮೂಲಕ ರಾಮನಗರವನ್ನು ‘ಆರೋಗ್ಯ ನಗರ’ವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಆರೋಗ್ಯ ಪ್ರವಾಸೋದ್ಯಮಕ್ಕೆ ಇದರಿಂದ ಉತ್ತೇಜನ ದೊರೆಯಲಿದೆ. ರಾಜ್ಯದ ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಇಲ್ಲವೋ ಅಂತಹ ಕಡೆ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿಯನ್ನು ದೇಶದಿಂದ ಮುಕ್ತ ಮಾಡುವುದಾಗಿ ಹೇಳಿದ್ದಾರೆ. ಬೇರೆಯವರನ್ನು ಮುಕ್ತ ಮಾಡಲು ಹೊರಟಿರುವ ಅವರೇ ಮುಕ್ತವಾಗಿದ್ದಾರೆ. ಅಸ್ತಿತ್ವ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ, ಎಂತಹ ಪರಿಸ್ಥಿತಿಯಲ್ಲಿ ಯಾರನ್ನು ಬೇಕಾದರೂ ಸೇರುತ್ತದೆ ಎಂದು ಅವರು ಟೀಕಿಸಿದರು.

ಕಾಂಗ್ರೆಸ್ ಪಕ್ಷದ್ದು ಅವಕಾಶವಾದದ ರಾಜಕಾರಣವಾಗಿದೆ. ಅದಕ್ಕೆ ಯಾವುದೇ ಸಿದ್ಧಾಂತ, ಚಿಂತನೆ, ದೂರದೃಷ್ಟಿ ಯಾವುದೂ ಇಲ್ಲ. ಭಾರತಕ್ಕೆ ತನ್ನದೇ ಸಂಸ್ಕೃತಿ, ಆಚಾರ-ವಿಚಾರವಿದೆ. ಕಾಂಗ್ರೆಸ್ ನಾಯಕರು ದೇಶದ ಸಂಸ್ಕೃತಿ ವಿರುದ್ಧ ಮತ್ತು ದೇಶದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಅಶ್ವತ್ಥ ನಾರಾಯಣ ಆಗ್ರಹಿಸಿದರು.

ನೆರೆಯ ದೇಶಗಳಲ್ಲಿ ಹಿಂಸೆ, ದೌರ್ಜನ್ಯ ಎದುರಿಸಿ ಭಾರತಕ್ಕೆ ಬಂದಿರುವ ಅಲ್ಲಿನ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. ಆದರೆ, ಅದಕ್ಕೂ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು.

ಕನಕಪುರದ ಕಪಾಲಬೆಟ್ಟ ಸಾಧು-ಸಂತರು ಧ್ಯಾನ ಮಾಡಿದ ಪವಿತ್ರ ಸ್ಥಳವಾಗಿದೆ. ಇಂತಹ ಸ್ಥಳದಲ್ಲಿ ಬೇರೊಂದು ಧರ್ಮಕ್ಕೆ ಸೇರಿದವರ ಪ್ರತಿಮೆಯನ್ನು ಸ್ಥಾಪಿಸುವುದು ಸರಿಯಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಪ್ರತಿಮೆ ಸ್ಥಾಪಿಸಲು ಉದ್ದೇಶಿಸಿರುವ ಜಾಗ ಗೋಮಾಳಕ್ಕೆ ಸೇರಿದ್ದು ಎನ್ನಲಾಗಿದ್ದು, ಈ ಕುರಿತು ವರದಿ ಬಂದ ನಂತರ ಜಾಗವನ್ನು ವಶಕ್ಕೆ ಪಡೆಯುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅಶ್ವಥ್ ನಾರಾಯಣ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X