Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಪೊಲೀಸ್ ಅಧಿಕಾರಿ,...

ಚಿಕ್ಕಮಗಳೂರು: ಪೊಲೀಸ್ ಅಧಿಕಾರಿ, ಪೇದೆಗಳಿಗೆ ನೈಟ್‍ಬೀಟ್ ಕರ್ತವ್ಯ ಕಡ್ಡಾಯ; ಎಸ್ಪಿ ಹರೀಶ್ ಪಾಂಡೆ

ಹೊಸವರ್ಷಚರಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ►

ವಾರ್ತಾಭಾರತಿವಾರ್ತಾಭಾರತಿ28 Dec 2019 9:41 PM IST
share
ಚಿಕ್ಕಮಗಳೂರು: ಪೊಲೀಸ್ ಅಧಿಕಾರಿ, ಪೇದೆಗಳಿಗೆ ನೈಟ್‍ಬೀಟ್ ಕರ್ತವ್ಯ ಕಡ್ಡಾಯ; ಎಸ್ಪಿ ಹರೀಶ್ ಪಾಂಡೆ

ಚಿಕ್ಕಮಗಳೂರು, ಡಿ.28: ಹೊಸವರ್ಷಾಚರಣೆ ವೇಳೆ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ನಗರ ವ್ಯಾಪ್ತಿಯಲ್ಲಿದ್ದ 5-6 ನೈಟ್‍ಬೀಟ್ ವ್ಯವಸ್ಥೆಯನ್ನು 15ಕ್ಕೇರಿಸಲಾಗಿದೆ. ಇಲಾಖೆಯ ಉಪವಿಭಾಗಗಳಲ್ಲೂ ಇದನ್ನೂ ಜಾರಿ ಮಾಡಲಾಗುತ್ತಿದ್ದು, ಪ್ರತೀ ಪೊಲೀಸ್ ಪೇದೆ, ಅಧಿಕಾರಿಗಳು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ನೈಟ್ ಬೀಟ್ ಮಾಡಲೇಬೇಕಾದ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅಳವಡಿಸಿಕೊಂಡಿದೆ. ಈ ವ್ಯವಸ್ಥೆ ಹೊಸವರ್ಷಾಚರಣೆ ನಂತರವೂ ನಿರಂತರವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ತಿಳಿಸಿದ್ದಾರೆ.

ಶನಿವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಸಮಸ್ಯೆಗಳಿರುವ ಸಿಬ್ಬಂದಿಯನ್ನು ಹೊರತು ಪಡಿಸಿ ಎಲ್ಲ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳೂ ನೈಟ್ ಬೀಟ್ ಕರ್ತವ್ಯ ನಿರ್ವಹಿಸಲೇಬೇಕು. ತಾನೂ ಕೂಡ ನೈಟ್‍ಬೀಟ್ ಕರ್ತವ್ಯ ನಿರ್ವಹಿಸಬೇಕು ಎಂದ ಅವರು, ನಗರ ವ್ಯಾಪ್ತಿಯಲ್ಲಿ ಈ ಹಿಂದೆ ರಾತ್ರಿ ವೇಳೆ ಚೆಕ್‍ಪೋಸ್ಟ್ ಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಈ ಹೊಸ ನೈಟ್ ಬೀಟ್ ವ್ಯವಸ್ಥೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿರುವ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಲಾ ಎರಡರಂತೆ ಒಟ್ಟು ನಾಲ್ಕು ಚೆಕ್‍ಪೋಸ್ಟ್ ಗಳು ರಾತ್ರಿ ವೇಳೆ ಕಾರ್ಯನಿರ್ವಹಿಸುತ್ತಿದ್ದು, ಇವು ನಿರ್ದಿಷ್ಟ ಸ್ಥಳದಲ್ಲೇ ಕಾರ್ಯನಿರ್ವಹಿಸದೇ ಆಗಾಗ್ಗೆ ಸ್ಥಳ ಬದಲಾಯಿಸುತ್ತ ಕಾರ್ಯನಿರ್ವಹಿಸಲಿವೆ ಎಂದು ಅವರು ಮಾಹಿತಿ ನೀಡಿದರು.

ನೈಟ್‍ಬೀಟ್ ಚೆಕ್‍ಪೋಸ್ಟ್ ಗಳನ್ನು ಸಂಚಾರ ನಿಯಂತ್ರಣದ ಉದ್ದೇಶದಿಂದ ಕಾರ್ಯನಿರ್ವಹಿಸದೇ ಸಂಪೂರ್ಣವಾಗಿ ಶಂಕಾಸ್ಪದ ವಾಹನಗಳ ತಪಾಸಣೆ, ಅನುಮಾನಾಸ್ಪದ ವ್ಯಕ್ತಿಗಳ ತಪಾಸಣಾ ಕಾರ್ಯವನ್ನು ಮಾಡಲಿವೆ ಎಂದ ಎಸ್ಪಿ ಹರೀಶ್ ಪಾಂಡೆ, ಹೊಸವರ್ಷದ ಸಂದರ್ಭದಲ್ಲಿ ಮದ್ಯಪಾನ ಮಾಡಿ ವಾಹನ ಓಡಿಸುವ ಚಾಲಕರ ತಪಾಸಣೆಗಾಗಿ ನೈಟ್‍ಬೀಟ್‍ನ ಎಲ್ಲ ಸಿಬ್ಬಂದಿಗೆ ಆಲ್ಕೋಹಾಲಿಕ್ ಬ್ರೀಥ್ ಅನಲೈಸರ್‍ಗಳನ್ನು ನೀಡಲಾಗಿದೆ. ಇದರೊಂದಿಗೆ ವಾಹನಗಳನ್ನು ನಿಲ್ಲಿಸದೇ ಅತೀ ವೇಗದಲ್ಲಿ ಸಂಚರಿಸುವ ವಾಹನಗಳ ಪೊಟೊ, ವಿಡಿಯೋ ಚಿತ್ರೀಕರಣಕ್ಕಾಗಿ ಎಲ್ಲ ಸಿಬ್ಬಂದಿಗೆ ಕ್ಯಾಮರಾಗಳನ್ನೂ ಒದಗಿಸಲಾಗಿದೆ. ಇದಲ್ಲದೇ ಹೊಸ ವರ್ಷಾಚರಣೆಯ ಸಡಗರದಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ಮಾಡುವ ವಾಹನಗಳನ್ನು ನಗರದ ವಿವಿಧೆಡೆ ಇರುವ 60 ಸಿಸಿ ಕ್ಯಾಮರಾಗಳ ಮೂಲಕ ಕಂಟ್ರೋಲ್‍ರೂಂನಲ್ಲೇ ಪರಿಶೀಲನೆ ಮಾಡಲಾಗುತ್ತದೆ. ಪ್ರತಿದಿನ 10ರಿಂದ 12 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗುತ್ತಿದ್ದು, ಹೊಸ ವರ್ಷಾಚರಣೆ ವೇಳೆ ಈ ಪ್ರಕರಣಗಳ ಸಂಖ್ಯೆ ಹೆಚ್ಚಲಿದ್ದು, ಈ ಕಾರಣಕ್ಕೆ ನೈಟ್‍ಬೀಟ್‍ನ ಎಲ್ಲ ಸಿಬ್ಬಂದಿಗೂ ಮದ್ಯಪಾನ ತಪಾಸಣಾ ಸಾಧನಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಹೋಂಸ್ಟೇಗಳಿಗೆ ಧ್ವನಿ ವರ್ಧಕಗಳ ಬಳಕೆಗೆ ಅನುಮತಿ ನೀಡಿಲ್ಲ. ಮದ್ಯ ಸರಬರಾಜು ಮಾಡಲೂ ಅವಕಾಶವಿಲ್ಲ. ರೆಸಾರ್ಟ್‍ಗಳಲ್ಲಿ ಧ್ವನಿವರ್ಧಕಗಳ ಬಳಕೆ ಪರವಾನಿಗೆ ಅತ್ಯಗತ್ಯ ಎಂದ ಅವರು, ಈ ಸಂಬಂಧ ಹೋಂಸ್ಟೇಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಅಧಿಕೃತ ಕ್ಲಬ್‍ಗಳಲ್ಲಿ ಪ್ರತೀ ವರ್ಷ ಧ್ವನಿ ವರ್ಧಕಗಳ ಬಳಕೆಗೆ ಷರತ್ತು ಬದ್ಧವಾಗಿ ಅನುಮತಿ ನೀಡಲಾಗುತ್ತಿದ್ದು, ಈ ಅದರಂತೆಯೇ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಲಾಗಿದೆ. ಹೊಸ ಕ್ಲಬ್‍ಗಳಿಗೆ ಅವಕಾಶ ನೀಡಿಲ್ಲ ಎಂದು ಎಸ್ಪಿ ತಿಳಿಸಿದರು.

ಜಿಲ್ಲೆಗೆ ಮತ್ತೆರೆಡು ಹೈವೇ ಪ್ಯಾಟ್ರೋಲ್ ವಾಹನಗಳು: ಜಿಲ್ಲೆಯಲ್ಲಿ ಇದುವರೆಗೆ 7 ಹೈವೇ ಪ್ಯಾಟ್ರೋಲ್ ವಾಹನಗಳು ಕಾರ್ಯ ನಿರ್ವಹಿಸುತ್ತಿವೆ. ಇರುವ ವಾಹನಗಳು ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ, ಕಡೂರು ಭಾಗಗಳಲ್ಲಿ ಅಫಘಾತಗಳ ಸಂಖ್ಯೆ ಹೆಚ್ಚಿರುವ ಕಾರಣಕ್ಕೆ ಅಲ್ಲಿನ ಹೆದ್ದಾರಿಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಮಲೆನಾಡು ವ್ಯಾಪ್ತಿಯಲ್ಲಿ ಹೈವೇ ಪ್ಯಾಟ್ರೋಲ್ ವಾಹನಗಳ ಕೊರತೆ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಮತ್ತೆ ಎರಡು ವಾಹನಗಳನ್ನು ಮಂಜೂರು ಮಾಡಲಾಗಿದೆ. ಈ ಎರಡೂ ವಾಹನಗಳು ಮಲೆನಾಡು ಭಾಗದಲ್ಲೇ ಕಾರ್ಯನಿರ್ವಹಿಸಲಿವೆ. 

ಹೈ ಪ್ಯಾಟ್ರೋಲ್ ವಾಹನಗಳ ಪೊಲೀಸರು ಅಪಘಾತ ನಿರ್ವಹಣೆ ಸೇರಿದಂತೆ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳನ್ನೂ ದಾಖಲಿಸಲಿದ್ದಾರೆ. ಕಳೆದೊಂದು ವರ್ಷದಿಂದ ಹೈವೇ ಪ್ಯಾಟ್ರೋಲ್ ವಾಹನಗಳು 185 ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿವೆ. ಅಲ್ಲದೇ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ.60ರಷ್ಟು ಪ್ರಕರಣಗಳನ್ನು ದಾಖಲಿಸಿದ್ದು, ಅಪಘಾತ ಪ್ರಕರಣಗಳೂ ಕಡಿಮೆಯಾಗಿವೆ. ಹೈವೇ ಪ್ಯಾಟ್ರೋಲ್ ವಾಹನಗಳು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಹೈವೇ ಪ್ಯಾಟ್ರೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆಂಬ ದೂರಿದೆ. ಈ ಸಂಬಂಧ ಸಿಬ್ಬಂದಿಗೆ ಸೂಕ್ತ ತರಬೇತಿ ಕಾರ್ಯಾಗಾರವನ್ನೂ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರೀಶ್ ಪಾಂಡೆ ಹೇಳಿದರು.

ನಗರ ವ್ಯಾಪ್ತಿಯಲ್ಲಿನ ಎಐಟಿ ಸರ್ಕಲ್, ಲೋಟಸ್ ಹೊಟೇಲ್ ವೃತ್ತ ಹಾಗೂ ಬೋಳ ರಾಮೇಶ್ವರ ದೇವಾಲಯ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಪ್ರಸ್ತಾವ ಅನುಮೋದನೆಯಾಗಿದೆ. ಇದಕ್ಕಾಗಿ ಅನುದಾನವೂ ಮಂಜೂರಾಗಿದೆ. ಆದರೆ ಎಐಟಿ ವೃತ್ತದಲ್ಲಿ ರಾ.ಹೆದ್ದಾರಿ ಹಿನ್ನೆಲೆಯಲ್ಲಿ ಸಿಗ್ನಲ್ ಅಳವಡಿಕೆ ಕೆಲಸ ವಿಳಂಬವಾಗಿದೆ. ಹೆದ್ದಾರಿ ಅಗಲೀಕರಣ ಕಾಮಗಾರಿ ಮುಗಿಯುತ್ತಿದ್ದಂತೆ ಸಿಗ್ನಲ್ ಅಳವಡಿಕೆ ಕೆಲಸ ಆರಂಭಿಸಲಾಗುವುದು.

- ಹರೀಶ್ ಪಾಂಡೆ, ಎಸ್ಪಿ 

ಬಿಜೆಪಿ ಮುಖಂಡ ಅನ್ವರ್ ಹತ್ಯೆ ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿಲ್ಲ. ಈ ಸಂಬಂಧ ಇಲಾಖೆ ಅತ್ಯಂತ ಮುತುವರ್ಜಿಯಿಂದ ಕೆಲಸ ಮಾಡುತ್ತಿದೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಪ್ರಕರಣವನ್ನು ಅತ್ಯಂತ ಸೂಕ್ಷ್ಮವಾಗಿ ತನಿಖೆ ಮಾಡುತ್ತಿರುವುದರಿಂದ ಆರೋಪಿಗಳ ಬಂಧನ ನಿಧಾನವಾಗಿದೆಯಾದರೂ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ.

- ಹರೀಶ್ ಪಾಂಡೆ, ಎಸ್ಪಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X