ರಿಕ್ಷಾ ಪಲ್ಟಿ: ಚಾಲಕ ಮೃತ್ಯು
ಬ್ರಹ್ಮಾವರ, ಡಿ.28: ನೀಲಾವರ ಗ್ರಾಮದ ಪಡು ನೀಲಾವರ ವಿಶ್ವಾಂಭರ ಕ್ಯಾಶೂ ಫ್ಯಾಕ್ಟರಿ ಸಮೀಪ ಡಿ.27ರಂದು ಅಪರಾಹ್ನ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬಸವ ಪೂಜಾರಿ ಎಂದು ಗುರುತಿಸಲಾಗಿದೆ. ನೀಲಾವರ ಕಡೆ ಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಆಟೋರಿಕ್ಷಾ, ಚಾಲಕನ ನಿಯಂತ್ರಣ ತಪ್ಪಿರಸ್ತೆಗೆ ಪಲ್ಟಿಯಾಗಿ ಬಿತ್ತೆನ್ನಲಾಗಿದೆ. ಇದರ ಪರಿಣಾಮ ರಿಕ್ಷಾದ ಅಡಿಯಲ್ಲಿ ಸಿಲುಕಿಕೊಂಡ ಚಾಲಕ ಬಸವ ಪೂಜಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





