ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗಬಾರದು: ಅಧಿಕಾರಿಗಳಿಗೆ ಸೂಚಿಸಿದ ಡಿಸಿಎಂ ಗೋವಿಂದ ಕಾರಜೋಳ
ವಿಜಯಪುರ, ಡಿ. 28: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶನಿವಾರ ಆಲಮಟ್ಟಿ ಅಣೆಕಟ್ಟಿಗೆ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟಿನಲ್ಲಿ ಪ್ರಸ್ತುತ 107 ಟಿಎಂಸಿ ಹಾಗೂ ನಾರಾಯಣಪುರ ಅಣೆಕಟ್ಟಿನಲ್ಲಿ 30 ಟಿಎಂಸಿ ನೀರು ಸಂಗ್ರಹವಿದೆ ಎಂದು ವಿವರಿಸಿದರು.
ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಿದಂತೆ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯಲು ನೀರು ಪೂರೈಕೆ ಮಾಡಬೇಕು. ಅಲ್ಲದೆ, ನೀರು ಯಾವುದೇ ಕಾರಣಕ್ಕೂ ಪೋಲಾಗದಂತೆ ಮತ್ತು ದುರುಪಯೋಗ ಆಗದಂತೆ ಎಚ್ಚರ ವಹಿಸಬೇಕು ಎಂದು ಅವರು ಸೂಚಿಸಿದರು.
Next Story





