"ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿ ಮರೆ ಮಾಚಲು ಹೊಸ ಕಾಯ್ದೆಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರ"
ಜ್ಞಾನಪ್ರಕಾಶ್ ಸ್ವಾಮೀಜಿ

ಸ್ವಾಮೀಜಿಕೊಳ್ಳೇಗಾಲ, ಡಿ.28:ದೇಶದಲ್ಲಿ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿ, ಹೆಚ್ಚಾಗಿರುವ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನು ಮರೆ ಮಾಚಲು ಕೇಂದ್ರ ಸರ್ಕಾರ ಹೊಸ ಹೊಸ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ ಎಂದು ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.
ಪಟ್ಟಣದ ಎಂಜಿಎಸ್‍ವಿ ಕಾಲೇಜು ಮೈದಾನದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತಾನಾಡಿ ಸಂಸದ ತೇಜಸ್ವಿ ಸೂರ್ಯ ಅವರ ಪಂಕ್ಚರ್ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಸಿಎಎ ಕಾಯ್ದೆ ವಿರೋಧಿಸಿ ಮಾತಾನಾಡುತ್ತಿದ್ದ ಅವರು ಧರ್ಮದ ಹೆಸರಿನಲ್ಲಿ ದೇವರ ಹೆಸರಿನಲ್ಲಿ ದೇಶ ಒಡೆಯುವವರು ದೇಶ ದ್ರೋಹಿಗಳು. ದೇಶಕ್ಕಾಗಿ ರಕ್ತ ಸುರಿಸಿದ ನಾವು ದೇಶ ದ್ರೋಹಿಗಳಲ್ಲ. ನಮ್ಮ ಪೌರತ್ವ ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಡಾ.ಬಾಬಾಸಾಹೇಬ್ ಅವರ ಸಂವಿಧಾನ ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರಿಲ್ಲದ ಭಾರತ ಯಾವುದೇ ಕಾರಣದಿಂದಲೂ ವಿಶ್ವಗುರುವಾಗಲು ಸಾಧ್ಯವಿಲ್ಲ. ಸಂವಿಧಾನ ಇರುವವರೆಗೂ ನಮ್ಮನ್ನು ಯಾರೂ ಏನು ಮಾಡಲು ಆಗಲ್ಲ ಎಂದು ಅವರು ಹೇಳಿದರು.





