ಪ್ರಿಯಾಂಕಾ ಗಾಂಧಿ ಜೊತೆ ಪೊಲೀಸರ ಅನುಚಿತ ವರ್ತನೆ: ಆದಿತ್ಯನಾಥ್ ಸರಕಾರ ವಜಾಕ್ಕೆ ಕಾಂಗ್ರೆಸ್ ಆಗ್ರಹ

ಹೊಸದಿಲ್ಲಿ, ಡಿ. 29: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಉತ್ತರಪ್ರದೇಶ ಪೊಲೀಸರು ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಕಾಂಗ್ರೆಸ್ ರವಿವಾರ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಸುಶ್ಮಿತಾ ದೇವ್, ‘‘ಪ್ರತಿಭಟನಾಕಾರರ ಮೇಲೆ ಹಲ್ಲೆ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಅನುಚಿತವಾಗಿ ನಡೆದುಕೊಂಡಿರುವುದನ್ನು ನಾವು ಖಂಡಿಸುತ್ತೇವೆ. ಈ ಸರಕಾರವನ್ನು ವಜಾಗೊಳಿಸಬೇಕು ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು’’ ಎಂದು ಹೇಳಿದರು.
ಅನಂತರ ಪಕ್ಷ ಘಟನೆ ಕುರಿತಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಿತು.
Next Story