ಪೇಜಾವರ ಶ್ರೀ ನಿಧನ: ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್ ಸಂತಾಪ

ಮಂಗಳೂರು: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಶತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀಗಳು ಎಳವೆಯಲ್ಲಿಯೇ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಿ, ಪೇಜಾವರ ಮಠಾಧೀಶರಾದವರು. ಅಷ್ಟಮಠಗಳ ಪರಂಪರೆಯಲ್ಲಿ ಅತಿ ಹೆಚ್ಚು ಬಾರಿ ಉಡುಪಿ ಪರ್ಯಾಯದ ನೇತೃತ್ವ ವಹಿಸಿದ ಹೆಗ್ಗಳಿಕೆ ಶ್ರೀಗಳದ್ದು. ಆಧ್ಯಾತ್ಮಿಕ ಸಾಧನೆಯೊಂದಿಗೆ ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡವರು ಅಲ್ಲದೆ ದೇಶದ ಆಧ್ಯಾತ್ಮಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದ ಸವ್ಯಸಾಚಿ ಸ್ವಾಮೀಜಿ, ಪಕ್ಷ, ಜಾತಿ, ಮತ, ಲಿಂಗ, ಪಂಥ, ಧರ್ಮಗಳ ಎಲ್ಲೆಯನ್ನು ಮೀರಿ ಸರ್ವಜನಾದರಣೀಯರೆನಿಸಿಕೊಂಡಿದ್ದರು. ಎಲ್ಲರಿಂದಲೂ ಸಮಾನವಾಗಿ ಗೌರವಕ್ಕೆ ಭಾಜನರಾಗಿದ್ದರು.
ಶ್ರೀಕೃಷ್ಣನು ಅವರ ಆತ್ಮಕ್ಕೆ ಮೋಕ್ಷ ಕರುಣಿಸಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಕ್ತಾದಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
Next Story





