ಮಂಗಳೂರು ಹಿಂಸಾಚಾರ: ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ

ಮಂಗಳೂರು, ಡಿ.30: ಮಂಗಳೂರು ಹಿಂಸಾಚಾರದ ಬಗ್ಗೆ ಸರಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಿರುವುದರಿಂದ ಇಂದು ಮ್ಯಾಜಿಸ್ಟೇಟ್ ತನಿಖೆ ಆರಂಭವಾಗಿದೆ
ಮಂಗಳೂರು ಹಿಂಸಾಚಾರದ ತನಿಖೆಯನ್ನು ರಾಜ್ಯ ಸರಕಾರ ಮ್ಯಾಜಿಸ್ಟೇಟ್ ತನಿಖೆಗೆ ನೀಡಿದ್ದು, ಉಡುಪಿ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು. ಅದರಂತೆ ಇಂದು ಮಂಗಳೂರಿಗೆ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ತನಿಖೆ ಆರಂಭಿಸಿದ್ದಾರೆ.
ಜಗದೀಶ್ ಅವರು ದ.ಕ ಜಿಲ್ಲಾಧಿಕಾರಿ ಕಚೇರಿ ಗೇಟ್ ಬಳಿಯಿಂದ ಸ್ಟೇಟ್ ಬ್ಯಾಂಕ್ ಪರಿಸರ ಬಳಿ, ನೆಲ್ಲಿಕಾಯಿ ರಸ್ತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story









