Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂಸೆ, ದ್ವೇಷ ಸಾಧನೆಗೆ ಭಾರತದಲ್ಲಿ...

ಹಿಂಸೆ, ದ್ವೇಷ ಸಾಧನೆಗೆ ಭಾರತದಲ್ಲಿ ಜಾಗವಿಲ್ಲ: ಆದಿತ್ಯನಾಥ್‌ ಗೆ ಪ್ರಿಯಾಂಕಾ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ30 Dec 2019 10:27 PM IST
share
ಹಿಂಸೆ, ದ್ವೇಷ ಸಾಧನೆಗೆ ಭಾರತದಲ್ಲಿ ಜಾಗವಿಲ್ಲ: ಆದಿತ್ಯನಾಥ್‌ ಗೆ ಪ್ರಿಯಾಂಕಾ ತಿರುಗೇಟು

ಹೊಸದಿಲ್ಲಿ, ಡಿ.30: ಭಾರತದಲ್ಲಿ ವೈರತ್ವ, ಹಿಂಸಾಚಾರ ಮತ್ತು ದ್ವೇಷಸಾಧನೆಗೆ ಜಾಗವಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಇದಿರೇಟು ನೀಡಿದ್ದಾರೆ.

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ತಮ್ಮ ಸರಕಾರ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂಬ ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ, ಉತ್ತರಪ್ರದೇಶದ ಮುಖ್ಯಮಂತ್ರಿ ಹಾಗೂ ಅಲ್ಲಿನ ಪೊಲೀಸರು ಇಬ್ಬರೂ ತಪ್ಪು ಕಾರ್ಯ ಮಾಡುವುದರಲ್ಲಿ ಸಹಭಾಗಿಗಳಾಗಿದ್ದಾರೆ ಎಂದರು.

ದಿಲ್ಲಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ನನ್ನ ಸುರಕ್ಷತೆ ದೊಡ್ಡ ವಿಷಯವೇನಲ್ಲ. ಸುರಕ್ಷತೆಗೆ ಭದ್ರತೆಯ ಅಗತ್ಯವೂ ಇಲ್ಲ. ನಾವೀಗ ಮಾತನಾಡುತ್ತಿರುವುದು ಜನಸಾಮಾನ್ಯರ, ನಾಗರಿಕರ ಸುರಕ್ಷತೆಯ ಬಗ್ಗೆ. 5,500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಅವರನ್ನು ಥಳಿಸಲಾಗುತ್ತಿದೆ. ಈ ತಪ್ಪು ಕಾರ್ಯದಲ್ಲಿ ಪೊಲೀಸರು ಮತ್ತು ಆಡಳಿತ ಇಬ್ಬರೂ ಸಹಭಾಗಿಗಳಾಗಿದ್ದಾರೆ” ಎಂದರು.

ಯೋಗೀಜಿ(ಆದಿತ್ಯನಾಥ್) ಕೇಸರಿ ಬಟ್ಟೆಯನ್ನು ಧರಿಸುತ್ತಾರೆ. ಇದು ಈ ದೇಶದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಚೇತನಕ್ಕೆ ಸಂಬಂಧಿಸಿದ ಬಣ್ಣವಾಗಿದೆ. ಇದು ಹಿಂದು ಧರ್ಮದ ಸಂಕೇತವಾಗಿದೆ. ಅವರು ಆ ಧರ್ಮವನ್ನು ಅನುಸರಿಸಬೇಕು. ಆ ಧರ್ಮದಲ್ಲಿ ವೈರತ್ವ, ಪ್ರತೀಕಾರ ಮತ್ತು ಹಿಂಸೆಗೆ ಜಾಗವಿಲ್ಲ ಎಂದು ಪ್ರಿಯಾಂಕಾ ಹೇಳಿದರು.

ಪೌರತ್ವ ವಿರೋಧಿ ಪ್ರತಿಭಟನೆಯಲ್ಲಿ ಇಬ್ಬರು ಮೃತಪಟ್ಟಿರುವ ಬಿಜ್ನೂರ್‌ಗೆ ತೆರಳಿ ಅಲ್ಲಿ ಮೃತರ ಕುಟುಂಬದವರನ್ನು ಭೇಟಿಯಾಗಿದ್ದೇನೆ. ಇಬ್ಬರೂ ಯುವಕರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳದ ಅಮಾಯಕರು. ಒಬ್ಬ ಕಾಫಿ ಮಾರುವ ಹುಡುಗ, ಮತ್ತೊಬ್ಬ ಯುವಕ, 20 ವರ್ಷದ ಸುಲೈಮಾನ್ ಐಎಎಸ್ ಕಲಿಯಬೇಕೆಂಬ ಆಕಾಂಕ್ಷೆ ಹೊಂದಿದ್ದ. ಈತ ನಮಾಝ್ ಮಾಡಲು ಹೋಗಿದ್ದಾಗ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಅಂಬೇಡ್ಕರ್‌ರ ತತ್ವದ ಅನುಯಾಯಿಯಾಗಿರುವ ಐಪಿಎಸ್ ಅಧಿಕಾರಿಯನ್ನು ಅವರ ಮನೆಯಿಂದಲೇ ಬಂಧಿಸಲಾಗಿದೆ. ರಾಜ್ಯದಲ್ಲಿ ಬಂಧಿತರಾದವರಲ್ಲಿ ಸುಮಾರು 1,100ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿರದ ಅಮಾಯಕರು ಎಂಬುದನ್ನು ಸರಕಾರದ ಹೇಳಿಕೆಯೇ ತಿಳಿಸುತ್ತದೆ ಎಂದು ಪ್ರಿಯಾಂಕಾ ಆರೋಪಿಸಿದರು.

ಪ್ರಿಯಾಂಕಾ ಗಾಂಧಿ ಹೇಳಿಕೆಯನ್ನು ಖಂಡಿಸಿರುವ ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ, ಆದಿತ್ಯನಾಥ್ ಸಂಪ್ರದಾಯಸ್ಥ ಹಿಂದೂ ಕುಟುಂಬದವರು. ಕೇಸರಿ ಬಣ್ಣದ ಬಗ್ಗೆ ಕಾಂಗ್ರೆಸ್‌ಗೆ ಏನೂ ತಿಳಿದಿಲ್ಲ ಎಂಬುದು ಅವರ ಹೇಳಿಕೆಯಿಂದಲೇ ಸ್ಪಷ್ಟವಾಗಿದೆ. ಕೇಸರಿ ಹಿಂಸಾಚಾರದ ಸಂಕೇತವಲ್ಲ. ಕಾಂಗ್ರೆಸ್‌ನವರು ವೋಟ್ ಬ್ಯಾಂಕಿನ ಬಗ್ಗೆ ಗಮನವಿಟ್ಟು ಈಗ ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡಿದವರ ರಕ್ಷಣೆಗೆ ನಿಂತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ

ಈ ಮಧ್ಯೆ, ಉತ್ತರಪ್ರದೇಶ ಪೊಲೀಸರ ಕಾನೂನುಬಾಹಿರ ನಡವಳಿಕೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಮತ್ತು ಉತ್ತರಪ್ರದೇಶ ಸರಕಾರ ಹಾಗೂ ಪೊಲೀಸರ ಹಿಂಸಾತ್ಮಕ ಮತ್ತು ಕ್ರಿಮಿನಲ್ ಕೃತ್ಯಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಉ.ಪ್ರದೇಶದ ರಾಜ್ಯಪಾಲರಿಗೆ ಪತ್ರ ಬರೆದಿರುವುದಾಗಿ ಕಾಂಗ್ರೆಸ್ ಪಕ್ಷ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X