ಕ್ರಿಕೆಟ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ: ಆರು ಮಂದಿಗೆ ಗಾಯ
ಶಿವಮೊಗ್ಗ, ಡಿ. 30: ಕ್ರಿಕೆಟ್ ಆಟದ ವಿಚಾರದಲ್ಲಿ ಯುವಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ಕನಕ ಮಂಟಪದ ಮೈದಾನದಲ್ಲಿ ಭಾನುವಾರ ನಡೆದಿದೆ.
ಘಟನೆಯಲ್ಲಿ ಸುಮಾರು ಆರು ಮಂದಿಗೆ ಗಾಯವಾಗಿದೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಐವರು ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಓರ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಗುಂಪುಗಳ ನಡುವೆ ಈ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರುಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story





