Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.1ರಂದು ಪಂಪ್‌ವೆಲ್ ಫ್ಲೈಓವರ್ ಅಣಕು...

ಜ.1ರಂದು ಪಂಪ್‌ವೆಲ್ ಫ್ಲೈಓವರ್ ಅಣಕು ಉದ್ಘಾಟನೆ: ಕಾಂಗ್ರೆಸ್

ನಿಗದಿತ ಅವಧಿಗೆ ಉದ್ಘಾಟನೆಗೊಳ್ಳದ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ31 Dec 2019 1:47 PM IST
share
ಜ.1ರಂದು ಪಂಪ್‌ವೆಲ್ ಫ್ಲೈಓವರ್ ಅಣಕು ಉದ್ಘಾಟನೆ: ಕಾಂಗ್ರೆಸ್

ಮಂಗಳೂರು, ಡಿ.31: ಹತ್ತು ವರ್ಷಗಳ ಹಿಂದೆ ಆರಂಭಗೊಂಡ ಪಂಪ್‌ವೆಲ್ ಮೇಲ್ಸೇತುವೆ (ಫ್ಲೈಓವರ್) ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಇರುವ ಹಿನ್ನೆಲೆಯಲ್ಲಿ ಜನವರಿ 1ರಂದು ಸಂಜೆ ಇದರ ಅಣಕು ಉದ್ಘಾಟನೆ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.

ಫ್ಲೈಓವರ್ ಕಾಮಗಾರಿ ಪ್ರಗತಿಯ ಬಗ್ಗೆ ಪರಿಶೀಲಿಸಲು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ ದ.ಕ. ಜಿಲ್ಲಾ ಕಾಂಗ್ರೆಸ್‌ನ ಸತ್ಯಶೋಧನಾ ಸಮಿತಿಯಲ್ಲಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಜನವರಿ ಪ್ರಥಮ ವಾರದಲ್ಲಿ ಫ್ಲೈಓವರ್ ಲೋಕಾರ್ಪಣೆಯಾಗುತ್ತದೆ ಎಂದು ದ.ಕ. ಸಂಸದರು ಜನರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ನಿಗದಿಪಡಿಸಿದ ಗಡುವಿನ ಪ್ರಕಾರ ಈ ಮೇಲ್ಸೇತುವೆಯ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಮೂಲಕ ಜನವರಿ 1ರಂದು ಸಂಜೆ ಮೇಲ್ಸೇತುವೆಯ ಅಣಕು ಉದ್ಘಾಟನೆ ನಡೆಯಲಿದೆ ಎಂದು ಐವನ್ ಡಿಸೋಜ ತಿಳಿಸಿದ್ದಾರೆ.

ಸತ್ಯಶೋಧನಾ ಸಮಿತಿಯಲ್ಲಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಜನರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೊರತಾದ ಹೇಳಿಕೆಯನ್ನು ನೀಡಿ ಸಂಸದರು ಕಾಲ ಕಳೆಯುತ್ತಿದ್ದಾರೆ ಎಂದು ಟೀಕಿಸಿದರು.

ಹತ್ತು ವರ್ಷಗಳಿಂದ ನಡೆಯುತ್ತಿದ್ದರೂ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಯನ್ನು ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇಂತಹ ಸಂಗತಿಗಳ ಬಗ್ಗೆ ಸಂಸದರು ಗಮನಹರಿಸದೆ ಅಭಿವೃದ್ದಿ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಜನವರಿ ಅಂತ್ಯದೊಳಗೆ ಉದ್ಘಾಟನೆಯಾಗದಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ಮತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
ಮಾಜಿ ಶಾಸಕ ಜೆ.ಆರ್.ಲೋಬೊ ಮಾತನಾಡಿ, ಅಸಮರ್ಪಕ ಮೇಲ್ಸೇತುವೆಯ ಕಾಮಗಾರಿಯೂ ಅಸಮರ್ಪಕವಾಗಿದೆ.

ನಿಗದಿತ ಎತ್ತರವಿಲ್ಲದ ಕಾರಣ ಮೇಲ್ಸೇತುವೆಯಡಿಯಲ್ಲಿ ಆಳ ಮಾಡಲು ಹೊರಟಿದ್ದಾರೆ. ಪಡೀಲ್ ಕೆಳ ಸುರಂಗ ಮಾರ್ಗವೂ ಸಮರ್ಪಕವಾಗಿಲ್ಲ. ಮಂಗಳೂರು-ಕಾರ್ಕಳ ಹೆದ್ದಾರಿ ಕಾಮಗಾರಿ ಮಂಜೂರಾದರೂ ಪ್ರಗತಿ ಇಲ್ಲ. ನಂತೂರು, ಕೆಪಿಟಿ ವೃತ್ತದ ಯೋಜನೆ ನನೆಗುದಿಗೆ ಬಿದ್ದಿದೆ ಎಂದು ಟೀಕಿಸಿದರು.

ಈ ಸಂದರ್ಭ ಜಿಲ್ಲಾ ಮಾಜಿ ಸಚಿವ ಕೆ.ಅಭಯ ಚಂದ್ರ ಜೈನ್, ಮನಪಾ ಸದಸ್ಯರಾದ ಶಶಿಧರ ಹೆಗ್ಡೆ, ನವೀನ್ ಡಿಸೋಜ, ಸಮಿತಿಯ ಸದಸ್ಯರಾದ ನಾಗೇಂದ್ರ, ವಿಶ್ವಾಸ್ ದಾಸ್, ಅಬ್ದುರ್ರವೂಫ್, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X