Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ...

ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಕ್ಕೆ ಹೊಸ ಗಡುವು !

ನವಯುಗ್ ಕಂಪನಿ ನಿರ್ದೇಶಕ- ಸಿಬ್ಬಂದಿ ವಿರುದ್ಧ ಎಫ್‌ಐಆರ್

ವಾರ್ತಾಭಾರತಿವಾರ್ತಾಭಾರತಿ31 Dec 2019 5:54 PM IST
share
ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಕ್ಕೆ ಹೊಸ ಗಡುವು !

ಮಂಗಳೂರು, ಡಿ. 31: ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿರುವ ಪಂಪ್‌ವೆಲ್ ಮೇಲ್ಸೇತುವೆಯ ಕಾಮಗಾರಿ ಸಂಸದರು ಈ ಹಿಂದೆ ನೀಡಿರುವ ಹೇಳಿಕೆಯಂತೆ ಜನವರಿ ಮೊದಲ ವಾರದಲ್ಲಿ ಪೂರ್ಣಗೊಳ್ಳದಿರುವುದು ಖಚಿತವಾಗಿದೆ. ಈ ನಡುವೆಯೇ, ಗುತ್ತಿಗೆ ವಹಿಸಿರುವ ಕಂಪನಿ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ಮತ್ತೊಂದು ಹೊಸ ಲಿಖಿತ ಗಡುವು ನೀಡಿದೆ!

ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನವಯುಗ್ ಸಂಸ್ಥೆಯ ಪ್ರತಿನಿಧಿಗಳ ಸಭೆಯಲ್ಲಿ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಹೊಸ ಲಿಖಿತ ಭರವಸೆಯನ್ನು ನವಯುಗ್ ಸಂಸ್ಥೆ ನೀಡಿದೆ.

ಗುತ್ತಿಗೆದಾರ ಕಂಪನಿಯ ವಿರುದ್ಧ ತೀವ್ರ ಹತಾಶೆಯನ್ನು ವ್ಯಕ್ತಪಡಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಕಳೆದ ಎರಡು ವರ್ಷಗಳಿಂದ ಕಂಪನಿಗೆ ಸಾಲದ ನೆರವಿನ ಜತೆಗೆ ಎಲ್ಲಾ ರೀತಿಯ ಸಹಕಾರವನ್ನೂ ನೀಡಿದ್ದರೂ ಕಂಪನಿಯು ತನ್ನ ಲಿಖಿತ ಭರವಸೆ ಈಡೇರಿಸುವಲ್ಲಿ ವಿಫಲವಾಗಿರುವ ಬಗ್ಗೆ ‘‘ಸಂಸದರಾಗಿ ಇನ್ನು ತಮ್ಮಿಂದೇನು ಮಾಡಲು ಸಾಧ್ಯ’’ ಎಂಬ ಅಸಹಾಯಕತೆ ಯನ್ನೂ ಸಭೆಯಲ್ಲಿ ವ್ಯಕ್ತಪಡಿಸಿದ ಘಟನೆ ನಡೆಯಿತು.

ಕಂಪನಿಯು ಕಳೆದ ಸುಮಾರು ಎರಡು ವರ್ಷಗಳಿಂದೀಚೆಗೆ ನೀಡಲಾದ 6ನೆ ಗಡುವು ಇದಾಗಿದೆ. ಕಳೆದ ಅಕ್ಟೋಬರ್‌ನಲ್ಲಿ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವ ಲಿಖಿತ ಭರವಸೆಯನ್ನು ಕಂಪನಿ ನೀಡಿತ್ತು. ಮಾತ್ರವಲ್ಲದೆ, ಒಂದು ವೇಳೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಕಂಪನಿಯ ಮುಖ್ಯಸ್ಥರು ಸಭೆಯಲ್ಲಿ ತಿಳಿಸಿದ್ದರು. ಆದರೆ ಮತ್ತೆ ಸಮಯ ಕೇಳುತ್ತಿದ್ದಾರೆ. ಹಾಗಾಗಿ ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳುತ್ತಾ ಇನ್ನು ಮುಂದೆ ಇದರ ಉಸ್ತುವಾರಿಯನ್ನು ನೀವು ವಹಿಸಿ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿಗೆ ಮೇಲುಸ್ತುವಾರಿ ವಹಿಸಿಕೊಳ್ಳುವಂತೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆಯ ಇಂಜಿನಿಯರ್, ಕಂದಾಯ ಇಲಾಖೆಯ ತಹಶೀಲ್ದಾರ್ ಮೂಲಕ ದಿನನಿತ್ಯದ ಕಾಮಗಾರಿಯ ನಿಗಾ ವಹಿಸಿ ಮುಂದಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಿಂಧು ರೂಪೇಶ್‌ಗೆ ಸಂಸದ ನಳಿನ್ ನಿರ್ದೇಶನ ನೀಡಿದರು.
ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸುವ ಲಿಖಿತ ಪತ್ರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಯೋಜನಾಧಿಕಾರಿ ಹಾಗೂ ನವಯುಗ್ ಸಂಸ್ಥೆಯ ನಿರ್ದೇಶಕರ ಸಹಿಯೊಂದಿಗೆ ಜಿಲ್ಲಾಧಿಕಾರಿಗೆ ಈ ಸಂದರ್ಭ ನೀಡಲಾಯಿತು. ಈಗಾಗಲೇ ಸಾರ್ವಜನಿಕ ಹಿತಾಸಕ್ತಿಯಡಿ ಕಂಪನಿಯ ನಿರ್ದೇಶಕರು ಹಾಗೂ ಸಿಬ್ಬಂದಿ ಮೇಲೆ ಕ್ರಿಮಿನಲ್ ಪ್ರಕರಣದಡಿ ದಾಖಲಾಗಿರುವ ಎಫ್‌ಐಆರ್ ಪ್ರತಿಯನ್ನು ಡಿಸಿಪಿ ಅರುಣಾಂಶಗಿರಿ ಅವರಿಗೆ ನೀಡಿ, ಮುಂದಿನ ಕ್ರಮ ಕೈಗೊಳ್ಳಿ ಎಂದು ಸಂಸದ ನಳಿನ್ ಕುಮಾರ್ ಸೂಚಿಸಿದರು.

ಜ.1ರಿಂದ ತಲಪಾಡಿ ಟೋಲ್ ನೀಡದೆ ವಾಹನ ಸಂಚಾರ !
ಜನರ ಭಾವನೆ ಜತೆ ನಾವಿದ್ದೇವೆ ಎಂದ ಸಂಸದ- ಶಾಸಕರು

ಇತ್ತ ಪಂಪ್‌ವೆಲ್ ಮೇಲ್ಸೇತುವೆ ಲೋಕಾರ್ಪಣೆಗೊಳ್ಳುವುದು ವಿಳಂಬಗೊಳ್ಳುತ್ತಿರುವಂತೆಯೇ ಸಾರ್ವಜನಿಕ ವಾಹನಗಳು ಸೇರಿದಂತೆ ವಾಹನ ಚಾಲಕರು ತಲಪಾಡಿಯಲ್ಲಿ ಟೋಲ್ ನೀಡದೆ ಸಂಚರಿಸಲು ನಿರ್ಧರಿಸಿದ್ದಾರೆ. ಸಂಸದನಾಗಿ ಜನರ ಭಾವನೆಗಳ ಜತೆ ನಾವಿದ್ದೇವೆ ಎಂದು ಹೇಳುವ ಮೂಲಕ ಇಂದು ನಡೆದ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ವೇದವ್ಯಾಸ ಕಾಮತ್‌ರವರು ಟೋಲ್ ನೀಡದೆ ಸಂಚಾರ ಮಾಡುವ ಜನರ ತೀರ್ಮಾನನ್ನು ಪರೋಕ್ಷವಾಗಿ ಬೆಂಬಲಿಸಿದರು.

ದ.ಕ. ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಹಾಗೂ ಸೇರಿದ್ದ ವಿವಿಧ ವಾಹನ ಚಾಲಕ ಮಾಲಕರ ಸಂಘಗಳ ಪ್ರತಿನಿಧಿಗಳು ಜನವರಿ 1ರಿಂದ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಲಪಾಡಿ ಟೋಲ್‌ನಲ್ಲಿ ಶುಲ್ಕ ನೀಡದೆ ಸಂಚರಿಸುವುದಾಗಿ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ, ಡಿಸಿಪಿ ಅರುಣಾಂಶಗಿರಿ ಉಪಸ್ಥಿತರಿದ್ದರು.

ಜನರಿಗಾಗಿ ನಾವು ಕೇಸು ಹಾಕಿಸಿಕೊಳ್ಳಲೂ ಸಿದ್ಧ

ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ವೇದವ್ಯಾಸ ಕಾಮತ್‌ರವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನವಯುಗ್ ಕಂಪನಿಯ ಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾ, ಗಡುವಿನ ಮೇಲೆ ಗಡುವನ್ನು ಕೇಳುತ್ತಾ ಸಾಗುತ್ತಿದ್ದೀರಿ. ಸಂಸದರು ನಿಮಗೆ ಸಾಲದ ನೆರವನ್ನೂ ಒದಗಿಸಿದ್ದಾರೆ. ಪಂಪ್‌ನಿಂದ ಡೀಸೆಲ್ ವ್ಯವಸ್ಥೆಯನ್ನೂ ವಾಹನಗಳಿಗೆ ಮಾಡಿದ್ದಾರೆ. ಆದರೆ ನಿಮ್ಮ ಕೆಲಸವನ್ನು ನೀವು ಮಾಡದೆ ಇದೀಗ ಜನರು ನಮ್ಮನ್ನು ಪ್ರಶ್ನಿಸುವಂತಾಗಿದೆ. ಹಾಗಾಗಿ ಜನರು ಟೋಲ್‌ನಲ್ಲಿ ಹಣ ನೀಡದೆ ಸಂಚರಿಸಲಿ. ನಾವು ಅವರ ಜತೆಗಿದ್ದೇವೆ. ನಮ್ಮ ಜನತೆಗಾಗಿ ನಾವು ಪ್ರಕರಣ ಎದುರಿಸಲೂ ಸಿದ್ಧ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X