ಸುರತ್ಕಲ್: ನೀರು ತುಂಬಿದ್ದ ಬಕೆಟ್ಗೆ ಬಿದ್ದ ಮಗು ಮೃತ್ಯು

ಸಾಂದರ್ಭಿಕ ಚಿತ್ರ
ಮಂಗಳೂರು, ಡಿ.31: ನೀರು ತುಂಬಿದ್ದ ಬಕೆಟ್ ಒಳಗೆ ಮಗುವೊಂದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಕಡಂಬೋಡಿಯಲ್ಲಿ ಮಂಗಳವಾರ ನಡೆದಿದೆ.
ಒಂಬತ್ತು ತಿಂಗಳ ಮಗು ಯಶ್ ಬಕೆಟ್ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ.
ಮಧ್ಯಪ್ರದೇಶ ಮೂಲದ ಕುಟುಂಬ ಇಲ್ಲಿನ ಎಂಆರ್ಪಿಎಲ್ನಲ್ಲಿ ಕೆಲಸಕ್ಕೆ ಬಂದಿದ್ದು ಕಡಂಬೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ತಾಯಿ ಬೆಳಗಿನ ಕೆಲಸ ಮುಗಿಸಿ ಮಲಗಿದ್ದ ವೇಳೆ ಮಗು ಯಶ್ ಆಟವಾಡುತ್ತಿತ್ತು. ಆದರೆ ಆಯತಪ್ಪಿ ನೀರಿದ್ದ ಬಕೆಟ್ಗೆ ಕವುಚಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





