ಜ.3ರಿಂದ ಎರಡನೆ ಹಂತದ ಮಿಷನ್ ಇಂದ್ರಧನುಷ್
ಉಡುಪಿ ಡಿ.31: ಉಡುಪಿ ಜಿಲ್ಲೆಯಲ್ಲಿ ಜ.3ರಿಂದ ಎರಡನೆ ಹಂತದ ಮಿಷನ್ ಇಂದ್ರಧನುಷ್ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಜಿಲ್ಲಾ ಲಸಿಕಾ ಕಾರ್ಯ ಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡು ತಿದ್ದರು. ಜಿಲ್ಲೆಯಲ್ಲಿ ಮೊದನೇ ಹಂತದಲ್ಲಿ 321 ಮಕ್ಕಳಿಗೆ ಮತ್ತು 78 ಗರ್ಭಿಣಿಯರಿಗೆ ಲಸಿಕೆ ನೀಡುವ ಮೂಲಕ ಶೇ.98.73ರಷ್ಟು ಗುರಿ ಸಾಧಿಸಿಸಲಾಗಿದೆ ಎಂದರು.
ಎರಡನೇ ಹಂತದಲ್ಲಿ ಲಸಿಕೆಯಿಂದ ವಂಚಿತವಾಗಿರುವ 0-2 ವರ್ಷದೊಳ ಗಿನ 102 ಮಕ್ಕಳು 28 ಗರ್ಭಿಣಿಯರಿಗೆ ಲಸಿಕೆ ನೀಡುವ ಗುರಿ ಹೊಂದ ಲಾಗಿದೆ ಎಂದ ಅವರು, ವಲಸೆ ಕಾರ್ಮಿಕರು ವಾಸಿಸುವ ಕಡೆಗಳಲ್ಲಿ ಗಮನ ಕೇಂದ್ರಿಕರಿಸಲಾಗುವುದು. ನಗರಸಭೆ ಅಧಿಕಾರಿಗಳು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳು ವಲಸೆ ಕಾರ್ಮಿಕರು ವಾಸಿಸುವ ಸ್ಥಳಗಳಲ್ಲಿ ಲಸಿಕೆಗಳನ್ನು ಪಡೆ ಯುವ ಕುರಿತು ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಅರಿವು ಮೂಡಿಸಬೇಕು ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರು ಲಸಿಕಾ ದಿನದಂದು ತಮ್ಮ ವ್ಯಾಪ್ತಿ ಯಲ್ಲಿನ 0-2 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರನ್ನು ಲಸಿಕಾ ಕೇಂದ್ರಗಳಿಗೆ ಕರೆ ತರಬೇಕು ಹಾಗೂ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸು ವಂತೆ ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸಭೆಯಲ್ಲಿ ಡಿಎಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಕುಟುಂಬ ಕಲ್ಯಾಣಾಧಿ ಕಾರಿ ಡಾ.ರಾಮರಾವ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ.ಸತೀಶ್ ಚಂದ್ರ ಮೊದಲಾದ ವರು ಉಪಸ್ಥಿತರಿದ್ದರು.







