Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.19ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ...

ಜ.19ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ : ಡಾ. ರಾಮಕೃಷ್ಣ ರಾವ್

1.49 ಲಕ್ಷ ಮಕ್ಕಳಿಗೆ ಲಸಿಕೆ

ವಾರ್ತಾಭಾರತಿವಾರ್ತಾಭಾರತಿ31 Dec 2019 9:10 PM IST
share
ಜ.19ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ : ಡಾ. ರಾಮಕೃಷ್ಣ ರಾವ್

ಮಂಗಳೂರು, ಡಿ.31: ದ.ಕ. ಜಿಲ್ಲೆಯಲ್ಲಿ ಜ.19ರಿಂದ 22ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ 184 ವಾಹನಗಳ ಅವಶ್ಯಕತೆ ಇದೆ. ಪಲ್ಸ್ ಪೋಲಿಯೋ ಲಸಿಕಾ ಗುಣಮಟ್ಟ ಕಾಪಾಡಲು ಲಸಿಕೆ ಹಾಕುವ ಐದು ದಿನ ಮುಂಚಿತವಾಗಿ ಮತ್ತು ಕಾರ್ಯಕ್ರಮದ ದಿನಗಳಂದು ಜಿಲ್ಲೆಯಾದ್ಯಂತ ಸತತವಾಗಿ 2 ಗಂಟೆಗಳಿಗಿಂತ ಹೆಚ್ಚು ಕಾಲ ವಿದ್ಯುತ್ ಸ್ಥಗಿತಗೊಳಿಸದಂತೆ ತಮ್ಮ ಅಧೀನ ಕಚೇರಿ ಗಳಿಗೆ ಸೂಚಿಸಬೇಕೆಂದು ಮೆಸ್ಕಾಂ ಅಧಿಕಾರಿಗೆ ತಿಳಿಸಿದರು.

ಲಸಿಕಾ ಕಾರ್ಯಕ್ರಮಕ್ಕೆ ಅಂಗನವಾಡಿ ಕೇಂದ್ರಗಳಲ್ಲಿ ಬೂತ್‌ಗಳನ್ನು ತೆರೆಯಲು ಅಗತ್ಯ ಕ್ರಮ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬೇಕು. ಅಂಗನವಾಡಿ ವ್ಯಾಪ್ತಿಯಲ್ಲಿ ಬರುವ ತಾಯಂದಿರಿಗೆ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಣೆ ನಡೆಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಡಿಎಚ್‌ಒ ಮನವಿ ಮಾಡಿದರು.

ಜತೆಗೆ, ನಗರಸಭೆ ವತಿಯಿಂದ ಅಗತ್ಯವಾದ ಕುಡಿಯುವ ನೀರು, ಆಹಾರ, ಸ್ಥಳೀಯ ಸಾರಿಗೆ ಇತ್ಯಾದಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅವರು ಸೂಚಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕರು ತಮ್ಮ ಅಧೀನದಲ್ಲಿ ಬರುವ ಶುಶ್ರೂಷಕ ತರಬೇತಿಯ ವಿದ್ಯಾರ್ಥಿ ಗಳನ್ನು ಲಸಿಕದಾರರನ್ನಾಗಿ ನಿಯೋಜನೆ ಮಾಡಬೇಕು ಎಂದು ಹೇಳಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪೋಲಿಯೋ ಬೂತ್‌ಗಳನ್ನು ತೆರೆಯಲು ಸೂಕ್ತವಾದ ಶಾಲಾ ಕೊಠಡಿಗಳ ವ್ಯವಸ್ಥೆ ಮಾಡ ಬೇಕು. ಕಾರ್ಯಕ್ರಮದ ಬಗ್ಗೆ ಎಲ್ಲ ಶಾಲೆಗಳಿಗೆ, ನರ್ಸರಿ ಶಾಲೆಗಳಿಗೆ, ಶಿಶು ಮಂದಿರಗಳಿಗೆ ಹಾಗೂ ಶಾಲೆಗಳಲ್ಲಿ ನಡೆಯುವ ಪೋಷಕ-ಶಿಕ್ಷಕ ಸಭೆಯಲ್ಲಿ ಪೋಷಕರಿಗೆ ಮಾಹಿತಿ ನೀಡಬೇಕು ಎಂದು ಎಲ್ಲ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿಕಂದರ್ ಪಾಷ, ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಇಸುಬು ಡಿ., ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ, ಲೇಡಿಗೋಷನ್ ಆಸ್ಪತ್ರೆಯ ಪ್ರಭಾರ ವೈದ್ಯಕೀಯ ಅಧೀಕ್ಷಕಿ ಡಾ.ಶಕುಂತಲಾ, ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿ ಡಾ.ಮಂಜಯ್ಯ ಶೆಟ್ಟಿ ಮತ್ತು ಇತರ ಇಲಾಖಾ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು, ನರ್ಸಿಂಗ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಸರಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಖಾಸಗಿ ನರ್ಸಿಂಗ್ ಹೋಂ ಮಾಲಕರು ಮತ್ತು ಮಕ್ಕಳ ತಜ್ಞರು ತಮ್ಮ ಸಂಪರ್ಕಕ್ಕೆ ಬರುವ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕುವಂತೆ ವ್ಯವಸ್ಥೆ ಮಾಡಬೇಕು.
- ಡಾ.ರಾಮಕೃಷ್ಣ ರಾವ್, ಜಿಲ್ಲಾ ಆರೋಗ್ಯಾಧಿಕಾರಿ

1.49 ಲಕ್ಷ ಮಕ್ಕಳಿಗೆ ಲಸಿಕೆ

2020-21ನೇ ಸಾಲಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಐದು ವರ್ಷದೊಳಗಿನ 1,49,713 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ನಿವಾಸಿ ಹಾಗೂ ವಲಸೆ ಸೇರಿ 22,80,499 ಜನಸಂಖ್ಯೆಯಿದ್ದು, 4,56,843 ಮನೆಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು.

ಕಾರ್ಯಕ್ರಮದ ಯಶಸ್ಸಿಗೆ 921 ಲಸಿಕಾ ಕೇಂದ್ರ, 31 ಟ್ರಾನ್ಸಿಟ್ ಲಸಿಕಾ ಕೇಂದ್ರ, 6 ಸಂಚಾರಿ ತಂಡ, 3,820 ಸಿಬ್ಬಂದಿಯನ್ನು ಲಸಿಕೆ ನೀಡಲು ಹಾಗೂ ಮೇಲ್ವಿಚಾರಕರನ್ನಾಗಿ 187 ಮಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X