Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಸಹಕಾರ ಚಳುವಳಿ-ಜನಜಾಗೃತಿ ಸಭೆಗೆ...

ಅಸಹಕಾರ ಚಳುವಳಿ-ಜನಜಾಗೃತಿ ಸಭೆಗೆ ಅನುಮತಿ: ಗೃಹಸಚಿವ ಬಸವರಾಜ ಬೊಮ್ಮಾಯಿ

ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ31 Dec 2019 9:17 PM IST
share
ಅಸಹಕಾರ ಚಳುವಳಿ-ಜನಜಾಗೃತಿ ಸಭೆಗೆ ಅನುಮತಿ: ಗೃಹಸಚಿವ ಬಸವರಾಜ ಬೊಮ್ಮಾಯಿ

ಮಂಗಳೂರು, ಡಿ.31: ಎನ್‌ಆರ್‌ಸಿ ಮತ್ತು ಸಿಎಎ ಕುರಿತಂತೆ ಪರವಾಗಿ ‘ಅಸಹಕಾರ ಚಳುವಳಿ’ ಮತ್ತು ವಿರೋಧವಾಗಿ ಜನಜಾಗೃತಿ ಸಭೆಗಳು ನಡೆಸಲು ಸಂಘಟನೆಗಳಿಂದ ಬೇಡಿಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅನುಮತಿ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಮುಸ್ಲಿಂ ಸೆಂಟ್ರಲ್ ಕಮಿಟಿಯ ಮುಖಂಡರು ಜ.4ರಂದು ‘ಅಸಹಕಾರ ಚಳುವಳಿ’ ನಡೆಸಲು ಮತ್ತು ಬಿಜೆಪಿ ರಾಜ್ಯ ಘಟಕವು ಜ.12ರಂದು ‘ಜನಜಾಗೃತಿ ಸಭೆ’ ನಡೆಸಲು ಮುಂದಾಗಿವೆ. ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಳಿಕ ಯಾವೊಂದು ಅಹಿತಕರ ಘಟನೆ ನಡೆದಿಲ್ಲ. ಆದರೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ಪರಿಸ್ಥಿತಿ ತಿಳಿಯಾಗು ವವರೆಗೆ ಈ ಎರಡೂ ಸಭೆಗಳನ್ನು 10 ದಿನಗಳ ಕಾಲ ಮುಂದೂಡುವಂತೆ ಮನವಿ ಮಾಡಿದ್ದೇನೆ. ಈ ಬಗ್ಗೆ ಸಕಾರಾತ್ಮಕ ಸ್ಪಂದನೆ ಸಿಗುವ ವಿಶ್ವಾಸವಿದೆ ಎಂದು ಬಸವರಾಜ ಬೊಮ್ಮಾಯಿ ನುಡಿದರು.

ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆಯ ವೇಳೆ ಅಮಾಯಕರ ಬಂಧನವಾಗಿದೆ ಎಂದು ಆರೋಪಿಸಿ ಹಲವರು ದೂರು ನೀಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ತಿಳಿಸಿದ್ದೇನೆ. ನ್ಯಾಯಾಂಗ ಬಂಧನ ದಲ್ಲಿರುವವರು ಅಮಾಯಕರು ಆಗಿದ್ದರೆ ಕಾನೂನು ರೀತಿಯಲ್ಲಿ ಅವರಿಗೆ ನ್ಯಾಯ ಒದಗಿಸಲಾಗುವುದು. ಅದಲ್ಲದೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೂ ನಿದೇರ್ಶನ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೋಲಿಬಾರ್ ಸಂತ್ರಸ್ತರಿಗೆ ಪರಿಹಾರ ವಾಪಸ್ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಪ್ರಕರಣದ ತನಿಖೆ ನಡೆಯು ತ್ತಿದೆ. ತನಿಖಾ ವರದಿಯ ಆಧಾರದಲ್ಲಿ ಈ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಹಾಗೂ ಸಮು ದಾಯಗಳ ಬಗ್ಗೆ ಸೌಹಾರ್ದ ವಾತಾವರಣ ಕಲ್ಪಿಸಲು ಸೂಚಿಸಿದ್ದೇನೆ ಎಂದರು.

ಗಲಭೆಯ ಬಳಿಕ ನಡೆಯುವ ಶಾಂತಿಸಭೆಗಳು ಅರ್ಥ ಕಳೆದುಕೊಳ್ಳುತ್ತಿವೆ. ಇದರಿಂದ ಯಾವ ಪ್ರಯೋಜನವೂ ಕಂಡುಬರುತ್ತಿಲ್ಲ ಎಂದು ಪತ್ರಕರ್ತರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಗೃಹ ಸಚಿವರು ವಾರ್ಡ್ ಮಟ್ಟದಲ್ಲಿ ಶಾಂತಿ ಸಭೆ ನಡೆಸಲು ಸೂಚಿಸಿ ದ್ದೇನೆ ಎಂದರು.

ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಿಷೇಧಕ್ಕೆ ಚಿಂತನೆ: ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರೆ ಟ್ರಾಫಿಕ್ ಸಮಸ್ಯೆ ತೀವ್ರವಾಗುತ್ತಿದೆ. ಆ ಹಿನ್ನಲೆಯಲ್ಲಿ ಡಿಸಿ ಕಚೇರಿ ಮುಂದೆ ಪ್ರತಿಭಟನೆಗೆ ಅವಕಾಶ ನೀಡದಿರಲು ಈ ಹಿಂದೆ ನಿರ್ಧರಿಸಲಾಗಿತ್ತು. ಈ ಬಗ್ಗೆ ಸರಕಾರದ ನಿಲುವು ಏನು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಬೆಂಗಳೂರಿನ ಮಾದರಿಯಲ್ಲೇ ಮಂಗಳೂರಿನಲ್ಲಿ ನಿರ್ದಿಷ್ಟ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡುವ ಬಗ್ಗೆ ಚರ್ಚೆ ಮಾಡಲಾಗುವುದು. ಆ ಬಳಿಕ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಿಷೇಧ ಹೇರಲು ಚಿಂತನೆ ನಡೆಸಲಾಗುವುದು ಎಂದರು.

ಪರಿಹಾರ ವಿತರಣೆಗೆ ಸಂಬಂಧಿಸಿ ನಿಯಮಾವಳಿ: ಗೋಲಿಬಾರ್ ಮತ್ತಿತರ ಸಂದರ್ಭ ಬಲಿಯಾದ ಅಥವಾ ಗಾಯಾಳುಗಳ ಕುಟುಂಬಗಳಿಗೆ ಪರಿಹಾರ ಧನ ವಿತರಣೆಗೆ ಸಂಬಂಧಿಸಿ ಗೊಂದಲ ಸೃಷ್ಟಿಯಾಗುವುದನ್ನು ತಪ್ಪಿಸಲು ಸೂಕ್ತ ನಿಯಮಾವಳಿಯನ್ನು ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾದ ಯುಟಿ ಖಾದರ್, ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಸಂಜೀವ ಮಠಂದೂರು, ಹರೀಶ್ ಪೂಂಜಾ, ಎಸ್. ಅಂಗಾರ, ರಾಜೇಶ್ ನಾಯಕ್ ಉಳೆಪ್ಪಾಡಿಗುತ್ತು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X