ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ
ಬೆಂಗಳೂರು, ಡಿ.31: ಪ್ರಸಕ್ತ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಯ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜ.30ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಹಾಗೂ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಸಾರ್ವಜನಿಕ ಓದುಗರಿಗೆ ಒದಗಿಸಲು ಅನುಕೂಲವಾಗುವಂತೆ ಆಸಕ್ತಿಯುಳ್ಳ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳು ಪುಸ್ತಕವನ್ನು ಆಯ್ಕೆಗೆ ಸಲ್ಲಿಸುವಾಗ ತಮ್ಮ ಅನುಮತಿ ಪತ್ರದೊಂದಿಗೆ ಸದರಿ ಪುಸ್ತಕದ ಸಾಫ್ಟ್ ಕಾಪಿಯನ್ನು ಸಿ.ಡಿ ರೂಪದಲ್ಲಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 080-22864990, 22867358 ಸಂಪರ್ಕಿಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆ ಪ್ರಕಟನೆ ತಿಳಿಸಿದೆ.
Next Story





