ಸಿಎಎ-ಎನ್‌ಆರ್‌ಸಿ ವಿರೋಧಿಸಿ ರಾಜ್ಯಾದ್ಯಂತ 'ರಂಗೋಲಿ' ಪ್ರತಿಭಟನೆ: ಡಾ.ಪುಷ್ಪಾ ಅಮರನಾಥ್

ಮೈಸೂರು, ಡಿ.34: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‍ಆರ್‍ಸಿ ವಿರೋಧಿಸಿ ಕರ್ನಾಟಕ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸುವ ಮೂಲಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.
ನಗರದ ಪರ್ತಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜ.2ರಂದು ಮೊದಲ ಬಾರಿಗೆ ಮೈಸೂರಿನಿಂದ ಈ ಪ್ರತಿಭಟನೆ ಪ್ರಾರಂಭ ಮಾಡಲಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಈ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಪೊಲೀಸರಲ್ಲಿ ಮನವಿ ಮಾಡಲಾಗಿದೆ. ಆದರೆ ಇನ್ನೂ ಅವರಿಂದ ಅನುಮತಿ ದೊರಕಿಲ್ಲ. ನಮ್ಮ ಹಕ್ಕನ್ನು ಪ್ರತಿಭಟಿಸಲ ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Next Story





