Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಉತ್ತರ ಕೊಡಿ ಮೋದಿ’: ಪ್ರಧಾನಿಗೆ...

‘ಉತ್ತರ ಕೊಡಿ ಮೋದಿ’: ಪ್ರಧಾನಿಗೆ ಟ್ವಿಟರ್‌ನಲ್ಲಿ ಕಾಂಗ್ರೆಸ್ ಸರಣಿ ಸವಾಲು

ವಾರ್ತಾಭಾರತಿವಾರ್ತಾಭಾರತಿ2 Jan 2020 7:53 PM IST
share
‘ಉತ್ತರ ಕೊಡಿ ಮೋದಿ’: ಪ್ರಧಾನಿಗೆ ಟ್ವಿಟರ್‌ನಲ್ಲಿ ಕಾಂಗ್ರೆಸ್ ಸರಣಿ ಸವಾಲು

ಬೆಂಗಳೂರು, ಜ.2: ರಾಜ್ಯಕ್ಕೆ ಎರಡು ದಿನಗಳ ಭೇಟಿಗೆ ಗುರುವಾರ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷವು ಟ್ವಿಟರ್‌ನಲ್ಲಿ ‘ಉತ್ತರ ಕೊಡಿ ಮೋದಿ’ ಎಂದು ಸರಣಿ ಸವಾಲುಗಳನ್ನು ಹಾಕಿದೆ.

ಅನೈತಿಕ ಆಪರೇಷನ್ ಕಮಲ, ಶಾಸಕರ ಕುದುರೆ ವ್ಯಾಪಾರಕ್ಕೆ ಬಳಕೆಯಾದ ಕೋಟ್ಯಂತರ ರೂಪಾಯಿ ಹಣ ಯಾವುದು? ನ್ಯಾಯಾಂಗ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ‘ರಾಜಕಾರಣದ’ ಮೌಲ್ಯಗಳನ್ನು ನಾಶಗೊಳಿಸುತ್ತಿಲ್ಲವೇ? ಇದು ಸಂವಿಧಾನ, ಪ್ರಜಾಪ್ರಭುತ್ವದ ಆಶಯಗಳಿಗೆ ಎಸಗುವ ಅಪಚಾರವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನರೇಂದ್ರ ಮೋದಿ ಅವರೆ, ಸಿದ್ದರಾಮಯ್ಯ ಅವರ ಸರಕಾರ ಪ್ರಸ್ತಾವನೆ ಸಲ್ಲಿಸಿದ್ದ ‘ಕನ್ನಡ ಧ್ವಜ’ಕ್ಕೆ ಮಾನ್ಯತೆ ನೀಡಲಿಲ್ಲ ಏಕೆ? ಬ್ಯಾಂಕ್ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶ ಕಸಿದುಕೊಂಡಿದ್ದು ಏಕೆ? ಹಿಂದಿ ಹೇರಿಕೆ ಏಕೆ? ಬಿಜೆಪಿ ನಾಯಕರು ಹಿಂದಿ ‘ರಾಷ್ಟ್ರ ಭಾಷೆ’ ಎಂದು ಸುಳ್ಳು ಹೇಳುತ್ತಿರುವುದೇಕೆ? ಎಂದು ಕಾಂಗ್ರೆಸ್ ಕೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರೆ, ಚುನಾವಣೆಗೂ ಮೊದಲು ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ನಿಮ್ಮ ಜಲ ಸಂಪನ್ಮೂಲ ಸಚಿವರು ವಿವಾದ ಬಗೆಹರಿಸಿಯೇ ಬಿಟ್ಟೆವೆಂಬಂತೆ ‘ಪ್ರಹಸನ’ ಸೃಷ್ಟಿಸಿದ್ದರು. ಈಗ ‘ಮಹಾದಾಯಿ’ ಯೋಜನೆಯನ್ನು ತಡೆದು ದ್ರೊಹ ಮಾಡಿದ್ದೀರಿ, 25 ಸಂಸದರನ್ನು ಕೊಟ್ಟ ರಾಜ್ಯಕ್ಕೆ ಯಾಕಿಂತಾ ಅನ್ಯಾಯ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನರೇಂದ್ರ ಮೋದಿ ಅವರೆ, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರಹಳ್ಳ ಕಾವಲ್‌ನಲ್ಲಿ ಎಚ್‌ಎಎಲ್ ಲಘು ಯುದ್ಧ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ, 2018ರ ಅಂತ್ಯಕ್ಕೆ ಮೊದಲ ಸ್ವದೇಶಿ ಹೆಲಿಕಾಪ್ಟರ್ ಹಾರಲಿದೆ ಎಂದಿರಿ, 3 ವರ್ಷ ಕಳೆದರೂ ಇನ್ನೂ ಒಂದೂ ಹೆಲಿಕಾಪ್ಟರ್ ತಯಾರಾಗಿಲ್ಲ ಏಕೆ? ಎಂದು ಕಾಂಗ್ರೆಸ್ ಕೇಳಿದೆ.

ನರೇಂದ್ರ ಮೋದಿ ಅವರೆ, ತುಮಕೂರಿನ ವಸಂತ ನರಸಾಪುರದಲ್ಲಿ ದೇಶದ ಮೊದಲ ‘ಫುಡ್ ಪಾರ್ಕ್’ ಉದ್ಘಾಟನೆಯಾಗಿ 6 ವರ್ಷ ಕಳೆದಿದೆ, ಕೊಟ್ಟ ಭರವಸೆಯಂತೆ 10 ಸಾವಿರ ನೇರ, 25 ಸಾವಿರ ಪರೋಕ್ಷ ಉದ್ಯೋಗ ಸೃಷ್ಟಿಯಾಗಿಲ್ಲ ಏಕೆ? 12 ಜಿಲ್ಲೆಗಳ ರೈತರ ಹೆಸರಿನಲ್ಲಿ ಉತ್ತರ ಭಾರತದ ಮಾಲಕನಿಗೆ ಲಾಭ ಮಾಡಿಕೊಡುವುದು ನಿಮ್ಮ ಉದ್ದೇಶವಾಗಿತ್ತೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನರೇಂದ್ರ ಮೋದಿ ಅವರೆ, ಅಧಿಕಾರಕ್ಕೆ ಬಂದರೆ ರೈತರ ಆದಾಯ ದುಪ್ಪಟ್ಟು ಮಾಡಿ, ಆತ್ಮಹತ್ಯೆ ತಡೆಯುವುದಾಗಿ ಚುನಾವಣೆ ಪ್ರಚಾರದ ವೇಳೆ ಹೇಳಿದಿರಿ, ರಾಜ್ಯದಲ್ಲಿ ಕಳೆದ 8 ತಿಂಗಳಲ್ಲಿ 453 ರೈತರು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆ ತಡೆಗೆ ಕೇಂದ್ರ ಸರಕಾರ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುತ್ತಿಲ್ಲ ಏಕೆ? ಎಂದು ಕಾಂಗ್ರೆಸ್ ಕೇಳಿದೆ.

ನರೇಂದ್ರ ಮೋದಿ ಅವರೆ, ಅಚ್ಚೇ ದಿನ್ ಎಲ್ಲಿ? ವಿಕಾಸ್ ಎಲ್ಲಿ? ಕಪ್ಪುಹಣ ಎಲ್ಲಿ? ಉದ್ಯೋಗ ಸೃಷ್ಟಿ ಎಲ್ಲಿ? ರೈತರ ಆದಾಯ ದ್ವಿಗುಣ ಎಲ್ಲಿ? ಮಹಿಳಾ ಸಬಲೀಕರಣ ಎಲ್ಲಿ? ನಿಮ್ಮ ಮೊದಲ ಪತ್ರಿಕಾಗೋಷ್ಠಿ ಎಲ್ಲಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನರೇಂದ್ರ ಮೋದಿ ಅವರೆ, ಈ ಹಿಂದೆ ತುಮಕೂರಿಗೆ ಭೇಟಿ ನೀಡಿ, ಹೇಮಾವತಿ-ನೇತ್ರಾವತಿ ನದಿ ಜೋಡಣೆ ಮಾಡಿ 8 ಜಿಲ್ಲೆಗಳಿಗೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದಿರಿ, ನದಿ ಜೋಡಣೆ ಪ್ರಕ್ರಿಯೆ ಆರಂಭವಾಗಿದೆಯೇ? ಈಗ ಯಾವ ಹಂತದಲ್ಲಿದೆ? ಆಗಿರುವ ಖರ್ಚು ವೆಚ್ಚಗಳೇನು? ಯೋಜನೆ ಪೂರ್ಣಗೊಳ್ಳುವುದು ಯಾವಾಗ? ಎಂದು ಕಾಂಗ್ರೆಸ್ ಕೇಳಿದೆ.

ಇದು ಭಾರತ ಗಣರಾಜ್ಯ, ಭಾರತದ ಸಂವಿಧಾನದಲ್ಲಿ ಯಾವ ಭಾಷೆಯೂ ರಾಷ್ಟ್ರ ಭಾಷೆಯಲ್ಲ. ಹಾಗಿದ್ದರೂ, ಸಂವಿಧಾನದ 8ನೇ ಪರಿಚ್ಚೇಧದಲ್ಲಿನ ಎಲ್ಲಾ ಭಾಷೆಗಳಿಗೂ ಅಧಿಕೃತ, ಸಮಾನ ಸ್ಥಾನಮಾನ ನೀಡುತ್ತಿಲ್ಲ ಏಕೆ? ಜನ ಜೀವನದ ಮಾತೃ ಭಾಷೆಗಳನ್ನು, ಪ್ರಾದೇಶಿಕ ಭಾಷೆಗಳನ್ನ ಕಡೆಗಣಿಸಿ ‘ಹಿಂದಿ’ ಭಾಷೆಯನ್ನು ಹೇರುತ್ತಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗಡಿ ವಿವಾದದಲ್ಲಿ ಮಹಾರಾಷ್ಟ್ರ-ಕರ್ನಾಟಕ ಬಿಜೆಪಿ ನಾಯಕರು ತದ್ವಿರುದ್ಧ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವುದೇಕೆ? ಉಭಯ ರಾಜ್ಯಗಳ ನಡುವೆ ಶಾಂತಿ ಸ್ಥಾಪಿಸಬೇಕಾದ ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರಕಾರಗಳು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ತಮ್ಮದೇ ಪಕ್ಷದ ಶಾಸಕರ ಹೇಳಿಕೆಯನ್ನು ಖಂಡಿಸುತ್ತಿಲ್ಲ ಏಕೆ? ಎಂದು ಕಾಂಗ್ರೆಸ್ ಕೇಳಿದೆ.

ರಾಜ್ಯಕ್ಕೆ ಕೇಂದ್ರದಿಂದ ನೀಡಬೇಕಾದ ತೆರಿಗೆಯ (ಜಿ.ಎಸ್.ಟಿ) ಪಾಲು ಸಮರ್ಪಕವಾಗಿ ನೀಡುತ್ತಿಲ್ಲ ಏಕೆ? ರಾಜ್ಯಕ್ಕೆ ಬರಬೇಕಾದ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಬಾಕಿಯನ್ನು ಇದುವರೆಗೂ ಏಕೆ ನೀಡಿಲ್ಲ? ಅನುದಾನ ಹಂಚಿಕೆಯಲ್ಲಿ ಕರ್ನಾಟಕವನ್ನು ಕಡೆಗಣಿಸಿರುವುದು ಏಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿಲ್ಲ ಏಕೆ? 1 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾದರೂ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿಲ್ಲ ಏಕೆ? ಮಧ್ಯಂತರ ಪರಿಹಾರ ನೀಡಲಿಲ್ಲ ಏಕೆ? ರಾಜ್ಯ ಸರಕಾರವೇ 35 ಸಾವಿರ ಕೋಟಿ ರೂ.ನಷ್ಟ ಆಗಿದೆ ಎಂದು ವರದಿ ನೀಡಿದರೂ ಕೇವಲ 1200 ಕೋಟಿ ರೂ.ನೀಡಿ ಸುಮ್ಮನಾಗಿದ್ದು ಏಕೆ? ಎಂದು ಕಾಂಗ್ರೆಸ್ ಕೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ‘ಶಿವಕುಮಾರ ಸ್ವಾಮೀಜಿ’ ಅವರು ಲಿಂಗೈಕ್ಯರಾದಾಗ ತುಮಕೂರಿಗೆ ಏಕೆ ಬರಲಿಲ್ಲ? ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ(ಮಾಜಿ ಸಿಎಂ ಸಿದ್ದರಾಮಯ್ಯ ಅವರು 2018ರ ಜನವರಿ 24 ರಂದು ಪತ್ರ ಬರೆದಿದ್ದರು) ಇದುವರೆಗೂ ನೀಡಿಲ್ಲ ಏಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X