Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯ ಅಭಿವೃದ್ಧಿಗೆ ಸರಕಾರಿ ನೌಕರರ...

ಜಿಲ್ಲೆಯ ಅಭಿವೃದ್ಧಿಗೆ ಸರಕಾರಿ ನೌಕರರ ಸೇವಾ ಮನೋಭಾವ ಕಾರಣ: ದಿನಕರ ಬಾಬು

ವಾರ್ತಾಭಾರತಿವಾರ್ತಾಭಾರತಿ2 Jan 2020 8:28 PM IST
share
ಜಿಲ್ಲೆಯ ಅಭಿವೃದ್ಧಿಗೆ ಸರಕಾರಿ ನೌಕರರ ಸೇವಾ ಮನೋಭಾವ ಕಾರಣ: ದಿನಕರ ಬಾಬು

ಉಡುಪಿ, ಜ.2: ಉಡುಪಿ ಜಿಲ್ಲೆಯ ಪ್ರಗತಿ ಮತ್ತು ಅಭಿವೃದ್ಧಿಗೆ ಜಿಲ್ಲೆಯ ಸರಕಾರಿ ನೌಕರರಲ್ಲಿರುವ ಸೇವಾ ಮನೋಭಾವ ಕಾರಣ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಗುರುವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇತರ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಉಡುಪಿ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಮುಂದಿದ್ದು, ಇದಕ್ಕೆ ಜಿಲ್ಲೆಯ ಸರಕಾರಿ ನೌಕರರ ಸೇವಾ ಮನೋಭಾವವೇ ಕಾರಣ. ಜಿಲ್ಲೆಯ ನೌಕರರು ಮತ್ತು ಹೊರ ಜಿಲ್ಲೆಯಿಂದ ವರ್ಗಾವಣೆಯಾಗಿ ಬರುವ ನೌಕರರ ಕೆಲಸದ ಶೈಲಿ ಜಿಲ್ಲೆಯ ಪ್ರಗತಿಗೆ ಕೊಡುಗೆ ನೀಡುತ್ತಿದೆ. ಜಿಲ್ಲೆಯ ಮಣ್ಣಿನ ಗುಣ ಸಹ ಇದಕ್ಕೆ ಕಾರಣ. ನೌಕರರು ಕ್ರೀಡಾಕೂಟದಲ್ಲಿ ಸಂಭ್ರಮದಿಂದ ಬಾಗವಹಿಸಬೇಕೆಂದು ದಿನಕರ ಬಾಬು ಕರೆ ನೀಡಿದರು.

ಜಿಲ್ಲಾಧಿಕಾರಿ ಜಿ ಜಗದೀಶ್ ಮಾತನಾಡಿ, ಸರಕಾರಿ ನೌಕರರಿಗೆ ವರ್ಷ ಪೂರ್ತಿ ಕಚೇರಿ ಕೆಲಸವಿರುವುದರಿಂದ ಒತ್ತಡವನ್ನು ಅನುಭವಿಸುತ್ತಿರುತ್ತಾರೆ. ಇಂಥ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ನೌಕರರ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಸರಕಾರಿ ನೌಕರರು ತಮ್ಮ ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡಿದ್ದರೆ ಉತ್ತಮ ರೀತಿಯಲ್ಲಿ ಸಾರ್ವಜನಿಕ ಸೇವೆ ಮಾಡಲು ಸಾಧ್ಯ. ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವದರ್ಜೆಯ ಸೌಲಭ್ಯಗಳಿದ್ದು, ನೌಕರರು ಇದರ ಸದುಪಯೋಗ ಪಡೆಯಬೇಕು. ನೌಕರರು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡದೆ ನಿಗದಿತ ಸಮಯದೊಳಗೆ ಕೆಲಸ ಮುಗಿಸಿ ವೈಯಕ್ತಿಕ ಜೀವನಕ್ಕೂ ಸಮಯ ಮೀಸಲಿಡಬೇಕು ಎಂದು ಹೇಳಿದರು.

ಉಡುಪಿ ಜಿಲ್ಲೆಯ ಸಿಬ್ಬಂದಿಯ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಹೊಗಳಿದ ಜಿಲ್ಲಾಧಿಕಾರಿ, ರಾಜ್ಯಮಟ್ಟದಲ್ಲಿ ಜಿಲ್ಲೆಯ ಮೇಲೆ ಹೆಚ್ಚು ನಿರೀಕ್ಷೆಗಳಿದ್ದು, ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಂತಾಗಬೇಕು. ಜಿಲ್ಲೆಯ ಸರಕಾರಿ ನೌಕರರಿಗೆ ಕೆಲಸದ ಸಂದರ್ಭದಲ್ಲಿ ಒತ್ತಡ ನಿವಾರಣೆ ಕುರಿತಂತೆ ಆಧ್ಯಾತ್ಮಿಕ ಚಿಂತಕರಾದ ಶಿವಾನಿ ಅವರಿಂದ ಫೆಬ್ರವರಿಯಲ್ಲಿ ಉಪನ್ಯಾಸವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ಕ್ರೀಡಾಪಟು ಉದ್ಕುಮಾರ್ ಶೆಟ್ಟಿ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕ್ರೀಡಾಧಿಕಾರಿ ಮಧುಕರ್, ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಅಧ್ಯಕ್ಷ ಕಿರಣ್ ಹೆಗ್ಡೆ, ಖಜಾಂಚಿ ಚಂದ್ರಶೇಖರ್, ಕ್ರೀಡಾ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಕಾರ್ಕಳ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೊಕಿಂ ಪಿಂಟೋ, ಹೆಬ್ರಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ ಉಪಸ್ಥಿತರಿದ್ದರು.

ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ನಿರೂಪಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X