Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ಲಿಮರಿಂದ ಹಿಂದೂ ಪೂರ್ವಜರು ಎಂದಿಗೂ...

ಮುಸ್ಲಿಮರಿಂದ ಹಿಂದೂ ಪೂರ್ವಜರು ಎಂದಿಗೂ ಹಿಂಸೆ ಅನುಭವಿಸಿಲ್ಲ: ಮಹೇಂದ್ರ ಕುಮಾರ್

ಮೂಡುಬಿದಿರೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Jan 2020 8:41 PM IST
share
ಮುಸ್ಲಿಮರಿಂದ ಹಿಂದೂ ಪೂರ್ವಜರು ಎಂದಿಗೂ ಹಿಂಸೆ ಅನುಭವಿಸಿಲ್ಲ: ಮಹೇಂದ್ರ ಕುಮಾರ್

ಮೂಡುಬಿದಿರೆ: ಕೇವಲ ಬಿಜೆಪಿಗರಿಗೆ ಇಷ್ಟವಾಗುವಂತೆ ಭಾರತದ ಆಡಳಿತವನ್ನು ನಡೆಸಲು ಈ ದೇಶ ಅವರ ಪೂರ್ವಿಕರ ಆಸ್ತಿಯಲ್ಲ. ಮುಸ್ಲಿಮರಿಂದ ಹಿಂದೂ ಪೂರ್ವಜರು ಹಿಂಸೆ ಎಂದಿಗೂ ಅನುಭವಿಸಿಲ್ಲ. ಭಾರತೀಯ ಜನರು ಯಾರಿಂದ ಅನ್ಯಾಯವನ್ನು ಅನುಭವಿಸಿದ್ದರೋ ಅವರಿಗೇ ಮತ ಹಾಕಿ ಗೆಲ್ಲಿಸುತ್ತಿದ್ದಾರೆ. ಗುಂಡು ಬೀಳುವುದಾದರೆ ನನ್ನ ಎದೆಗೆ ಬೀಳಲಿ, ಅಮಾಯಕರನ್ನು ಗೋಲಿಬಾರ್ ನೆಪದಲ್ಲಿ ಬಲಿ ಪಡೆಯುವುದು ಸರಿಯಲ್ಲ ಎಂದು ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಕೇಂದ್ರ ಸರಕಾರದ ವಿರುದ್ದ ಹರಿಹಾಯ್ದರು. 

ಅವರು ಸಂವಿಧಾನ ರಕ್ಷಣಾ ಸಮಿತಿ ಮೂಡುಬಿದಿರೆ ವತಿಯಿಂದ ಕೇಂದ್ರ ಸರಕಾರದ ಸಂವಿದಾನ ಮತ್ತು ಜನವಿರೋಧಿ ನೀತಿಗಳ ವಿರುದ್ದ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಯವರು ಪ್ರಾದೇಶಿಕ ಸ್ಥಿತಿಗತಿಯನ್ನು ಗಮನಿಸಿ ಸ್ಥಳಕ್ಕೆ ತಕ್ಕಂತೆ ಮಾತು ಬದಲಾಯಿಸುತ್ತಾರೆ. ದೇಶಭಕ್ತಿ, ಹಿಂದುತ್ವ, ಸಂವಿಧಾನ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ಬಗ್ಗೆ ಗೌರವ ಇಲ್ಲದ ಬಿಜೆಪಿಯ ನಾಟಕಗಳು ಬುದ್ದಿ ಇರುವವರಿಗೆ ಅರ್ಥವಾಗದಿರುವುದು ದುರಂತ. ದೇಶ ಭಕ್ತಿಯ ಹೆಸರಲ್ಲಿ ನಡೆಯುತ್ತಿರುವ ಅನಾಚಾರಗಳು ಜನರಿಗೆ ತಿಳಿಯುವುದೇ ಇಲ್ಲ ಎಂದು ಕಿಡಿಕಾರಿದರು.

ಪ್ರಸಕ್ತ ರಾಜಕೀಯ ವಿದ್ಯಮಾನಗಳು ದೇಶಕ್ಕೆ ಬೆಂಕಿ ಇಡುತ್ತಿದ್ದು, ಧರ್ಮಗಳೊಳಗಿನ ಬೆಂಕಿ ದೇಶವನ್ನೇ ಸುಡಲು ಮುಂದಾಗುತ್ತಿದೆ. ಅಲ್ಪಸಂಖ್ಯಾತರು, ಬಹುಸಂಖ್ಯಾತರು ಎಂದು ಒಡೆದು ಆಳುವ ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲ ಪಕ್ಷಗಳು ಸಮಾನ ಪಾತ್ರಧಾರಿಗಳು. ಹಿಂದೂ ಸಂಘಟನೆಗಳು ತಮ್ಮ ಧರ್ಮದ ಆಂತರಿಕ ಸಮಸ್ಯೆಗಳನ್ನು ಯೋಚಿಸದೆ ಮುಸ್ಲಿಂ ಧರ್ಮವನ್ನು ದೂರುವ ಮೂಲಕ ರಾಜಕೀಯ ಬೇಳೆ ಬೇಯಿಸುತ್ತಿದೆ. ಗಾಂಧಿ ತತ್ವದಿಂದ ಬಿಜೆಪಿ ಬೇಳೆ ಬೇಯುವುದಿಲ್ಲ. ತಾಲಿಬಾನ್ ಮನಸ್ಥಿತಿ ಮತ್ತು ಕೃತ್ಯಕ್ಕಾಗಿ ಬಿಜೆಪಿ ಗಾಂಧಿ ಮತ್ತು ಅವರ ತತ್ವಗಳನ್ನು ದ್ವೇಷಿಸುತ್ತಿದೆ ಎಂದು ಪ್ರಗತಿ ಪರ ಚಿಂತಕ ಮಹೇಂದ್ರ ಕುಮಾರ್ ಕೇಂದ್ರ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಶಾಸಕ ಐವನ್ ಡಿಸೋಜಾ ಮಾತನಾಡಿ, ನಮ್ಮ ದೇಶದ ಮುಸ್ಲಿಂ ಸಮುದಾಯಕ್ಕೆ ತೊಂದರೆ ನೀಡಿ ಬಹುಸಂಖ್ಯಾತರ ಮತಗಳನ್ನು ಪಡೆಯುವ ಸಂಚಿನೊಂದಿಗೆ ಕೇಂದ್ರ ಸರಕಾರ ಜನ ವಿರೋಧಿ ಕಾನೂನನ್ನು ಜಾರಿಗೆ ತಂದಿದೆ. ಕೇಂದ್ರದ ಸದನಗಳಲ್ಲಿ ಅಂಗೀಕಾರ ಪಡೆದರೂ ದೇಶದಲ್ಲಿ ಅನುಷ್ಠಾನಗೊಳಿಸಿದ ರಾಜ್ಯಗಳ ಪೈಕಿ ಅನುಪಾತ ಹೊಂದಾಣಿಕೆಯಿಂದ ಈ ಕಾಯ್ದೆ ಜನವಿರೋಧಿ ಎಂದು ಸಾಬೀತಾಗಿದೆ ಎಂದರು.

ಎಸ್‍ಡಿಪಿಐ ಮುಖಂಡ ಎ.ಕೆ ಅಶ್ರಫ್ ಮಾತನಾಡಿ, ಅನೇಕ ಸವಾಲುಗಳು ಬಂದರೂ ಸಂವಿಧಾನ ಹಿತದೃಷ್ಟಿಯಿಂದ ಮುಸ್ಲಿಮರು ಈವರೆಗೆ ಮೌನಿಯಾಗಿದ್ದರು. ಕಾಯ್ದೆ ನಿಷೇಧವೇ ಗೋಲಿಬಾರ್ ನಲ್ಲಿ ಬಲಿಯಾದ ಅಮಾಯಕರಿಗೆ ಪರಿಹಾರವಾಗಬೇಕು. ಸರ್ಕಾರದ ಜುಜುಬಿ ಹಣಕ್ಕೆ ಕೈಚಾಚುವ ಅವಶ್ಯಕತೆಯಿಲ್ಲ. ಅಗತ್ಯ ಬಿದ್ದರೆ ಗುಂಡಿಗೆ ಎದೆಯೊಡ್ಡಿ ಪ್ರಾಣತ್ಯಾಗಕ್ಕೂ ಸಿದ್ದರಾಗಿದ್ದು, ನಮಗೆ ಯಾವುದನ್ನೂ ಸಾಬೀತುಪಡಿಸುವ ಅವಶ್ಯಕತೆ ಇಲ್ಲ. ದೇಶದ ರಕ್ಷಣೆಯೇ ಮುಖ್ಯ ಎಂದರು.

ಪ್ರತಿಭಟನೆಯಲ್ಲಿ ಅಬ್ದುಲ್ ಸಲೀಂ, ಸಲೀಂ ಹಂಡೇಲು, ಯಾದವ ಶೆಟ್ಟಿ, ಆನಂದ ಮಿತ್ತಬೈಲ್, ದಿನೇಶ್ ಹೆಗ್ಡೆ, ಅಮೃತ್ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X