ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಶಿವಮೊಗ್ಗ, ಜ. 2: ನವ ವಿವಾಹಿತೆಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಹುಲ್ಕೋಡು ಗ್ರಾಮದಲ್ಲಿ ನಡೆದಿದೆ.
ಚಂದನಾ (21) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ ಎಂದು ಗುರುತಿಸಲಾಗಿದೆ. ಕಳೆದ ಏಳು ತಿಂಗಳ ಹಿಂದಷ್ಟೆ ಅವರ ವಿವಾಹ ನಡೆದಿತ್ತು. ತಂದೆ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇತ್ತೀಚೆಗೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





