ಲಕ್ಷಾಂತರ ರೂ. ಮೌಲ್ಯದ ಅಡಕೆ ಕಳವು
ಶಿವಮೊಗ್ಗ, ಜ. 2: ಲಕ್ಷಾಂತರ ರೂ. ಮೌಲ್ಯದ ಅಡಕೆಯನ್ನು ಕಳ್ಳರು ಅಪಹರಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಫಾಲಾಕ್ಷಪ್ಪ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಕೊಠಡಿಯ ಕಿಟಕಿ ಬಾಗಿಲು ಮುರಿದು ಒಳ ಪ್ರವೇಶಿಸಿದ ಕಳ್ಳರು, ಸುಮಾರು 1.15 ಲಕ್ಷ ರೂ. ಮೌಲ್ಯದ ನಾಲ್ಕು ಮೂಟೆ ಒಣ ಅಡಕೆ ಚೀಲಗಳನ್ನು ಹೊತ್ತೊಯ್ದಿದ್ದಾರೆ.
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Next Story





