Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಹೋರಾತ್ರಿ ಧರಣಿ ಆರಂಭಿಸಿದ ಆಶಾ...

ಅಹೋರಾತ್ರಿ ಧರಣಿ ಆರಂಭಿಸಿದ ಆಶಾ ಕಾರ್ಯಕರ್ತೆಯರು: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

ಗೌರವ ಧನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 Jan 2020 2:01 PM IST
share
ಅಹೋರಾತ್ರಿ ಧರಣಿ ಆರಂಭಿಸಿದ ಆಶಾ ಕಾರ್ಯಕರ್ತೆಯರು: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

ಬೆಂಗಳೂರು, ಜ.3: ಮಾಸಿಕ ಗೌರವ ಧನದ ಮೊತ್ತವನ್ನು 12 ಸಾವಿರಕ್ಕೆ ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಶುಕ್ರವಾರ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ಮೈದಾನದವರೆಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಟಿಯುಸಿ) ಮತ್ತು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸಹಭಾಗಿತ್ವದಲ್ಲಿ ಬೃಹತ್ ಜಾಥಾ ನಡೆಸಿದ ಆಶಾ ಕಾರ್ಯಕರ್ತೆಯರು, ಗೌರವ ಧನ ಪಾವತಿಗೆ ಹೊಸ ಸಾಫ್ಟ್‌ವೇರ್ ಬಳಕೆ ಕೈಬಿಡುವಂತೆ ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ನೀಡುವ ಗೌರವ ಧನವನ್ನು ಒಟ್ಟು ಸೇರಿಸಿ ಕನಿಷ್ಠ ಮಾಸಿಕ 12 ಸಾವಿರ ನಿಗದಿಪಡಿಸಬೇಕು. ನಿವೃತ್ತರಾಗುವ ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು. ಅದೇ ರೀತಿ, ಪ್ರತಿ ತಿಂಗಳು ನಿಗದಿತ ದಿನದಂದು ಗೌರವಧನ ಪಾವತಿಸಬೇಕು. ಸಮೀಕ್ಷೆ ಮತ್ತು ಸಭೆಗಳಿಗೆ ಪ್ರತ್ಯೇಕ ಭತ್ಯೆ ನೀಡಬೇಕು ಎಂಬುದು ಸೇರಿದಂತೆ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕೆಂದು ಧರಣಿ ನಿರತರು ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರ ನೇಮಕಾತಿಯ ಬಳಿಕ ತಾಯಿ ಮತ್ತು ಶಿಶುಗಳ ಮರಣ ಪ್ರಮಾಣ ಇಳಿದಿದೆ. ಆರೋಗ್ಯಕ್ಕೆ ಸಂಬಂಧಿಸಿದ ಸೂಚ್ಯಂಕಗಳಲ್ಲಿ ಏರಿಕೆಯಾಗಿದೆ. ತಿಂಗಳಲ್ಲಿ ಮೂರರಿಂದ ನಾಲ್ಕು ಸಮೀಕ್ಷೆ ಮಾಡಿಸುತ್ತಿದ್ದಾರೆ. ಕುಟುಂಬ ಮತ್ತು ಮಕ್ಕಳಿಗೆ ಸಮಯ ನೀಡಲಾಗದ ಪರಿಸ್ಥಿತಿ ಇದೆ. ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡಬೇಕಾದ ಸ್ಥಿತಿ ಇದೆ. ಆದರೆ, ಆಶಾ ಕಾರ್ಯಕರ್ತೆಯರ ಸುರಕ್ಷತೆಯ ಬಗ್ಗೆ ಸರಕಾರ ಯಾವ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ದೂರಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಸಂಘ ರಾಜ್ಯ ಸಮಿತಿಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ, ಜನರ ಜೀವ ಮತ್ತು ಆರೋಗ್ಯ ರಕ್ಷಣೆಗೆ ಸದಾ ಶ್ರಮಿಸುವ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸುವ ತಂತ್ರಾಂಶಗಳನ್ನು ಆಗಾಗ ಬದಲಾವಣೆ ಮಾಡಲಾಗುತ್ತದೆ. ಈಗ ಆಶಾ ಸಾಫ್ಟ್ ಎಂಬ ಹೊಸ ತಂತ್ರಾಂಶ ತರಲು ಹೊರಟಿದ್ದಾರೆ. ಹಲವು ತಿಂಗಳ ಕಾಲ ಮಾಡಿದ ಕೆಲಸಗಳ ವಿವರಗಳನ್ನು ಆಶಾ ಕಾರ್ಯಕರ್ತೆಯರೇ ದಾಖಲಿಸಬೇಕೆಂಬ ಸೂಚನೆ ನೀಡಿದ್ದಾರೆ. ಹೊಸ ತಂತ್ರಾಂಶ ಅಳವಡಿಕೆಯ ನಿರ್ಧಾರವನ್ನು ತಕ್ಷಣವೇ ಆರೋಗ್ಯ ಇಲಾಖೆ ವಾಪಸು ಪಡೆಯಬೇಕು ಎಂದು ಒತ್ತಾಯಿಸಿದರು.

‘ಶೋಷಣೆ ನಡೆಯುತ್ತಿದೆ’

ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಶೋಷಣೆ ನಡೆಯುತ್ತಿದೆ. ಎರಡು ಗಂಟೆ ಕೆಲಸ ಮಾಡಿದರೆ ಸಾಕು ಎಂಬ ಭರವಸೆಯಲ್ಲಿ ನೇಮಕಾತಿ ಮಾಡಲಾಗಿತ್ತು. ಈಗ ಎರಡು ಗಂಟೆ ವಿಶ್ರಾಂತಿಯೂ ಇಲ್ಲವಾಗಿದೆ. ಕೆಲಸಕ್ಕೆ ತಕ್ಕ ಗೌರವಧನ ಕೂಡ ನೀಡುತ್ತಿಲ್ಲ. ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನವನ್ನೂ ನಮಗೆ ನೀಡುತ್ತಿಲ್ಲ.

-ಪದ್ಮಾ ನಾಯಕನಹಳ್ಳಿ, ಧರಣಿ ನಿರತ ಆಶಾ ಕಾರ್ಯಕರ್ತೆ

ಆರ್ಥಿಕ ಸ್ಥಿತಿಗತಿಗಳನ್ನು ನೋಡಿಕೊಂಡು ತೀರ್ಮಾನ

ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಮುಂದಾಗಿದೆ. ನ.1ರಿಂದಲೇ ಆಶಾ ಕಾರ್ಯಕರ್ತೆಯರ ಗೌರವ ಧನವನ್ನು 4ಸಾವಿರ ರೂ.ಗೆ ಹೆಚ್ಚಿಸಲಾಗಿದೆ. 12ಸಾವಿರ ರೂ.ವೇತನ ನಿಗದಿ ಪಡಿಸಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಇಲಾಖೆಯ ಆರ್ಥಿಕ ಸ್ಥಿತಿಗತಿಗಳನ್ನು ನೋಡಿಕೊಂಡು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಅವರ ಮೊತ್ತೊಂದು ಬೇಡಿಕೆಯಾದ ವಿಮಾ ಸೌಲಭ್ಯವನ್ನು ಒದಗಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಹಾಗೂ ಅವರಿಗೆ ಬಾಕಿ ಇರುವ 15ತಿಂಗಳ ಬಾಕಿ ವೇತನವನ್ನು ಮಾರ್ಚ್ ಒಳಗೆ ಒದಗಿಸಲಾಗುವುದು.

-ಜಾವೇದ್ ಅಖ್ತರ್, ಪ್ರಧಾನ ಕಾರ್ಯದರ್ಶಿ, ಆರೋಗ್ಯ ಇಲಾಖೆ

ಧರಣಿ ವಾಪಸ್‌ಗೆ ಮನವಿ

ಆಶಾ ಕಾರ್ಯಕರ್ತೆಯರ 10ಬೇಡಿಕೆಗಳಲ್ಲಿ ಏಳು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ವೇತನವನ್ನು 10ಸಾವಿರ ರೂ.ಗೆ ಏರಿಸಲು ಸರಕಾರದ ಮುಂಗಡ ಪತ್ರದಲ್ಲಿ ಸೇರಿಸಬೇಕಾಗುತ್ತದೆ. ಇದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಸರಕಾರ ಬದ್ಧವಾಗಿದ್ದು, ಧರಣಿ ವಾಪಸ್ ಪಡೆದುಕೊಳ್ಳಬೇಕೆಂದು ಮನವಿ ಮಾಡುತ್ತೇನೆ.

-ಶ್ರೀರಾಮುಲು, ಸಚಿವ, ಆರೋಗ್ಯ ಇಲಾಖೆ

ಆಶಾ ಕಾರ್ಯಕರ್ತೆಗೆ ಗಾಯ

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಸುಮಾರು 30ಸಾವಿರಕ್ಕೂ ಹೆಚ್ಚು ಮಂದಿ ಆಶಾ ಕಾರ್ಯಕರ್ತೆಯರು ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಪ್ರತಿಭಟನಾ ಧರಣಿ ನಡೆಸಿದರು. ಈ ವೇಳೆ ಕಾಲುಜಾರಿ ನಿರ್ಮಲಾ ಶಿರುಗುಪ್ಪೆ ಎಂಬ ಮಹಿಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಜ.3, 4 ಎರಡು ದಿನ ಅಹೋರಾತ್ರಿ ಧರಣಿಯನ್ನು ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ, ಪೊಲೀಸರು ಜ.3(ಇಂದು)ಕ್ಕೆ ಮಾತ್ರ ಅನುಮತಿ ನೀಡಿದ್ದಾರೆ. ಆದರೂ ಆಶಾ ಕಾರ್ಯಕರ್ತೆಯರು ನಾಳೆಯಿಂದ ಕೆಲಸಕ್ಕೆ ಹಾಜರಾಗದೆ ಮನೆಯಲ್ಲಿಯೇ ಅನಿರ್ದಿಷ್ಟಾವಧಿ ಧರಣಿಯನ್ನು ಮುಂದುವರೆಸಲಿದ್ದಾರೆ.

-ನಾಗಲಕ್ಷ್ಮಿ, ಕಾರ್ಯದರ್ಶಿ, ಆಶಾ ಕಾರ್ಯಕರ್ತೆಯರ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X