ಬಂಟ್ವಾಳ: ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ

ಬಂಟ್ವಾಳ, ಜ. 3: ಶಾಸ್ತ್ರೀಯ ನೃತ್ಯ, ಸಂಗೀತಗಳ ಸಾಂಸ್ಕೃತಿಕ ಪರಂಪರೆಗಳ ಬಗ್ಗೆ ಇಂದಿನ ಮಕ್ಕಳಿಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಕಲ್ಲಡ್ಕದ ಕಲಾನಿಕೇತನ ನಾಟ್ಯ ಸಂಸ್ಥೆಯ ನಿರ್ದೇಶಕಿ, ವಿಧುಷಿ ವಿದ್ಯಾ ಮನೋಜ್ ಹೇಳಿದ್ದಾರೆ.
ಅವರು ಬಂಟ್ವಾಳದ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ಸಂಸ್ಕೃತಿಯನ್ನು ಉದ್ಘಾಟಿಸಿ ಮಾತನಾಡಿದರು.
ಶಾಲಾ ಸಂಚಾಲಕ ಭಾಮೀ ವಿಠ್ಠಲದಾಸ್ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಶಾಲಾ ಆಡಳಿತ ಮಂಡಳಿಯ ಸದಸ್ಯ ಹರೀಶ್ ಮಾಂಬಾಡಿ, ಪ್ರಾಂಶುಪಾಲೆ ರಮಾಶಂಕರ್ ಸಿ, ಆಡಳಿತಾಧಿಕಾರಿ ಐತಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳ ಬಹುಮಾನ ವಿತರಣೆ ನಡೆಯಿತು. ಅಂತರ್ ಶಾಲಾ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಅಭಿನಂದಿಸಲಾಯಿತು. ಬಿ. ನಿಧಿ ಬಾಳಿಗಾ, ಅನಲ ಜೆ ಶೆಟ್ಟಿ, ಪ್ರಜ್ಞಾ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.





