ಉಡುಪಿ: ಮಕ್ಕಳಲ್ಲಿನ ಅಪೌಷ್ಟಿಕತೆ ಕುರಿತ ವಿಚಾರ ಸಂಕಿರಣ

ಉಡುಪಿ, ಜ.3: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜಿನ ಬಾಲರೋಗ ವಿಭಾಗದ ವತಿಯಿಂದ ಹಾಗೂ ನೆಸ್ಟ್‌ಲೆ ಪ್ರೈ.ಲಿಮಿಟೆಡ್ ಇದರ ಪ್ರಾಯೋಜಕತ್ವದೊಂದಿಗೆ ಮಕ್ಕಳಲ್ಲಿನ ಅಪೌಷ್ಟಿಕತೆ ಎಂಬ ವಿಷಯದ ಕುರಿತ ವಿಚಾರ ಸಂಕಿರಣವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಉಡುಪಿ ಹೈಟೆಕ್ ಆಸ್ಪತ್ರೆಯ ಕನ್ಸಲ್ಟೆಂಟ್ ಮತ್ತು ನಿಯೋನೆಟಾಲಜಿಸ್ಟ್ ಡಾ.ಜನಾರ್ದನ ಪ್ರಭು, ಮಕ್ಕಳಲ್ಲಿನ ಕರುಳು ಸಂಬಂಧಿ ಕಾಯಿಲೆಗಳು, ಶ್ವಾಸಕೋಶದ ತೊಂದರೆಗಳ ಬಗ್ಗೆ ಉಪನ್ಯಾಸ ನೀಡಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಕಾವ್ಯ, ಮಕ್ಕಳಲ್ಲಿನ ಅಪೌಷ್ಟಿಕತೆಯ ಕಾರಣ ಹಾಗೂ ಚಿಕಿತ್ಸೆಯನ್ನು ವಿವರಿಸಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಎ. ಸ್ನಾತಕೋತ್ತರ ವಿಭಾಗದ ಡೀನ್ ಡಾ.ನಿರಂಜನ್ ರಾವ್ ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಸಂಘಟನಾ ಕಾರ್ಯದರ್ಶಿ ಡಾ.ಪೃಥ್ವಿರಾಜ್ ಪುರಾಣಿಕ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ನಾಗರತ್ನ ಎಸ್.ಜೆ. ವಂದಿಸಿದರು. ಸಹಪ್ರಾಧ್ಯಾಪಕ ಡಾ.ಶರಶ್ಚಂದ್ರ ಆರ್. ಸಹಕರಿಸಿದರು. ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗದ ಸಹಪ್ರಾಧ್ಯಾಪಕಿ ಡಾ.ವಿದ್ಯಾಬಲ್ಲಾಳ್ ಉಪಸ್ಥಿತರಿದ್ದರು. ಡಾ.ಕೀರ್ತಿ ನಂಬೂದಿರಿ ಕಾರ್ಯಕ್ರಮ ನಿರೂಪಿಸಿದರು.





