Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಎಎ-ಎನ್‌ಆರ್‌ಸಿ ವಿರುದ್ಧ...

ಸಿಎಎ-ಎನ್‌ಆರ್‌ಸಿ ವಿರುದ್ಧ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ: ಸಾಗರೋಪಾದಿಯಲ್ಲಿ ಜಮಾಯಿಸಿದ ಜನ

ವಾರ್ತಾಭಾರತಿವಾರ್ತಾಭಾರತಿ3 Jan 2020 7:40 PM IST
share
ಸಿಎಎ-ಎನ್‌ಆರ್‌ಸಿ ವಿರುದ್ಧ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ: ಸಾಗರೋಪಾದಿಯಲ್ಲಿ ಜಮಾಯಿಸಿದ ಜನ

ಬೆಂಗಳೂರು, ಜ.3: ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಪ್ರಕ್ರಿಯೆ ವಿರೋಧಿಸಿ ರಾಜಧಾನಿ ಬೆಂಗಳೂರಿನ ಆಲ್ ಮಜ್ಜಿದ್ ಕಮಿಟಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಶುಕ್ರವಾರ ಇಲ್ಲಿನ ಮೈಸೂರು ರಸ್ತೆಯ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ನಡೆದ ‘ಭಾರತ ಉಳಿಸಿ, ಸಂವಿಧಾನ ರಕ್ಷಿಸಿ’ ಪ್ರತಿಭಟನೆಯಲ್ಲಿ ಜನರ ದಂಡು ಸಾಗರೋಪಾದಿಯಲ್ಲಿ ಹರಿದುಬಂದಿತು.

ತಮ್ಮ ಅಂಗಡಿ, ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ ಸಾವಿರಾರು ಪ್ರತಿಭಟನಾಕಾರರು, ಮಧ್ಯಾಹ್ನ 2ಗಂಟೆ ಸುಮಾರಿಗೆ ಮೈದಾನಕ್ಕೆ ಜಮಾಯಿಸಿದರು. ಸುಡು ಬಿಸಿಲಿನಲ್ಲಿಯೇ ಧರ್ಮಗುರುಗಳ, ಹೋರಾಟಗಾರರ ಮಾತುಗಳಿಗೆ ಜೈಕಾರ ಕೂಗಿದ ದೃಶ್ಯಗಳು ಕಂಡುಬಂದವು.

ಕೇಂದ್ರ ಸರಕಾರ ಜಾರಿ ಮಾಡಿದ ಪೌರತ್ವ ತಿದ್ದುಪಡಿ ಕಾಯ್ದೆ ನೋಡಿದರೆ ಭಾರತದಲ್ಲಿ ಜಾತ್ಯತೀತ ಮೌಲ್ಯಗಳನ್ನು ಬುಡಮೇಲು ಮಾಡುವ ಹುನ್ನಾರ ನಡೆಯುತ್ತಿರುವುದು ಸ್ಪಷ್ಟವಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ಕಾಯ್ದೆ ಜಾರಿ ಮಾಡುತ್ತಿರುವ ಕೇಂದ್ರ ಸರಕಾರ ಪಾಕಿಸ್ತಾನ, ಅಫಘಾನಿಸ್ತಾನ ಮತ್ತು ಬಾಂಗ್ಲಾ ದೇಶಗಳ ಮುಸ್ಲಿಮೇತರರ ಬಗ್ಗೆ ಕಾಳಜಿ ವಹಿಸುತ್ತಿದೆ. ಇದರ ಹಿಂದೆ ಭಾರತವನ್ನು ಹಿಂದೂ ರಾಷ್ಟ್ರವಾಗಿಸುವ ಹುನ್ನಾರವಿದೆ. ಇದರಿಂದ ದೇಶಕ್ಕೆ ಗಂಡಾಂತರವಿದೆ ಎಂದರು.

ಬಿಗಿ ಬಂದೋಬಸ್ತ್: ಇಲ್ಲಿನ ಚಾಮರಾಜಪೇಟೆ ವ್ಯಾಪ್ತಿಯ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಲಾಗಿತ್ತು.

ಸಂಚಾರ ದಟ್ಟಣೆ: ಈದ್ಗಾ ಮೈದಾನದಲ್ಲಿ ಮಧ್ಯಾಹ್ನದ ಸುಮಾರಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದ ಪರಿಣಾಮ, ಮೈಸೂರು ರಸ್ತೆ, ಬಾಲಗಂಗಾಧರನಾಥ ಮೇಲ್ಸುತುವೆ ಮಾರ್ಗ, ಕೆಆರ್ ಮಾರ್ಕೆಟ್ ರಸ್ತೆ, ಹಳೇ ಗುಡ್ಡದಹಳ್ಳಿ ಮಾರ್ಗ ಸೇರಿದಂತೆ ನಾನಾ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿತ್ತು. 

ಮೊಳಗಿದ ರಾಷ್ಟ್ರಗೀತೆ...

ಸರ್ವ ಸಮಾಜಗಳ ಒಕ್ಕೂಟದ ಹೆಸರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ರಾಷ್ಟ್ರಗೀತೆ ಮೊಳಗಿತು. ಬಹಿರಂಗ ಸಭೆ ಆರಂಭಿಸುವ ಮೊದಲು ಎಲ್ಲರೂ ಸಾಮೂಹಿಕವಾಗಿ ಎದ್ದು ನಿಂತು ರಾಷ್ಟ್ರಗೀತೆ ಹಾಡಿದರು. ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ತ್ರಿವರ್ಣ ಧ್ವಜಗಳು ರಾರಾಜಿಸಿದವು. ಪ್ರತಿಭಟನಾಕಾರರಲ್ಲಿ ಅನೇಕರ ಭುಜದಲ್ಲಿ ಕಪ್ಪುಪಟ್ಟಿ ಮತ್ತು ಕೈಯಲ್ಲಿ ಕಪ್ಪುಬಾವುಟ ಕಾಣಿಸಿತು.

‘ನಮ್ಮದು ರಾಜ್ಯಾಂಗ ದೇಶ’

ಜಾತಿ, ಧರ್ಮದ ಮೇಲೆ ಪಾಕಿಸ್ತಾನ ರಚನೆಯಾದರೆ, ನಮ್ಮದು ರಾಜ್ಯಾಂಗದ ಆಧಾರದ ಮೇಲೆ ರಚಿಸಿದ ದೇಶವಾಗಿದೆ. ಅಲ್ಲದೆ, ಈ ದೇಶದ ಸ್ವಾತಂತ್ರಕ್ಕಾಗಿ ಎಲ್ಲ ವರ್ಗದವರು ಪ್ರಾಣ ಕೊಟ್ಟಿದ್ದಾರೆ. ಈಗ, ಪೌರತ್ವ ನೆಪದಲ್ಲಿ ಹಿಂಸೆ ನೀಡುವುದು, ಭಾರತೀಯರನ್ನು ಪ್ರಶ್ನಿಸುವ ಪ್ರಮಾದ ಬೇಡ.

-ಎಚ್.ಎಸ್.ದೊರೆಸ್ವಾಮಿ, ಸ್ವಾತಂತ್ರ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X