ದಂಪತಿ ನಡುವಿನ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ, ಜ. 3: ದಂಪತಿಯ ನಡುವಿನ ಕಲಹ, ಪತ್ನಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ನಡೆದಿದೆ.
ರುಕ್ಮಿಣಿ ಬಾಯಿ (45) ಕೊಲೆಯಾದ ಪತ್ನಿ ಎಂದು ಗುರುತಿಸಲಾಗಿದೆ. ಪತಿ ಆನಂದನಾಯ್ಕ ಆರೋಪಿತ ಪತಿಯಾಗಿದ್ದಾನೆ. ಘಟನೆಯ ನಂತರ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೌಟಂಬಿಕ ವಿಚಾರಗಳಿಗೆ ಸಂಬಂಧಿಸಿದಂತೆ ದಂಪತಿ ನಡುವೆ ಕಲಹ ಏರ್ಪಟ್ಟಿದೆ. ಇದು ವಿಕೋಪಕ್ಕೆ ತಿರುಗಿದೆ. ಕೋಪದಲ್ಲಿ ಪತಿಯು, ಪತ್ನಿಯ ಹತ್ಯೆ ನಡೆಸಿದ್ದಾನೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Next Story





