Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ.ನಾ.ಮೊಗಸಾಲೆ ಅವರಿಗೆ ಕನ್ನಡದ ಕಲ್ಹಣ...

ಡಾ.ನಾ.ಮೊಗಸಾಲೆ ಅವರಿಗೆ ಕನ್ನಡದ ಕಲ್ಹಣ ದಿ.ನೀರ್ಪಾಜೆ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ4 Jan 2020 11:21 PM IST
share
ಡಾ.ನಾ.ಮೊಗಸಾಲೆ ಅವರಿಗೆ ಕನ್ನಡದ ಕಲ್ಹಣ ದಿ.ನೀರ್ಪಾಜೆ ಪ್ರಶಸ್ತಿ ಪ್ರದಾನ

ಬಂಟ್ವಾಳ, ಜ. 4: ದಿ.ನೀರ್ಪಾಜೆ ಭೀಮ ಭಟ್ಟರ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ಘಟಕದ ವತಿಯಿಂದ ಶನಿವಾರಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡದ ಕಲ್ಹಣ ದಿ.ನೀರ್ಪಾಜೆ ಪ್ರಶಸ್ತಿಯನ್ನು ಹಿರಿಯ ಸಾಹಿತಿ, ಸಂಘಟಕ ಡಾ. ನಾ.ಮೊಗಸಾಲೆ ಅವರಿಗೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ದಿ.ನೀರ್ಪಾಜೆ ಅವರ ಬದುಕು, ಸಾಧನೆ ಹಾಗೂ ಅವರೊಂದಿಗಿನ ಒಡನಾಟಗಳನ್ನು ಸ್ಮರಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಮೊಗಸಾಲೆ, ದಿ.ನೀರ್ಪಾಜೆ ಭೀಮ ಭಟ್ಟರ ಬರೆಹ ಬೇರೆಯಲ್ಲ, ಬದುಕು ಬೇರೆಯಲ್ಲ, ಅವರು ಬರೆದಂತೆ ಬದುಕಿದವರು. ಬಹುತೇಕ ಸಾಹಿತಿಗಳು ಕೇವಲ ಬರಹಗಳಿಗೆ ಮಾತ್ರ ಸೀಮಿತರಾಗಿದ್ದರೆ, ನೀರ್ಪಾಜೆ ಅವನ್ನೆಲ್ಲ ಮೀರಿ ಸಾಹಿತ್ಯ ಲೋಕದಲ್ಲಿ ಮಿಂಚಿದವರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುವೆಂಪು ಭಾಷಾ ಪ್ರಾಧಿಕಾರದ ಅಧ್ಯಕ್ಷ ಡಾ. ಗಿರೀಶ ಭಟ್ಟ ಅಜಕ್ಕಳ ಮಾತನಾಡಿ, ಸಂಸ್ಕೃತಿ ಜೊತೆ ಸಂಬಂಧಗಳನ್ನು ಬೆಸೆಯುವ ಕೆಲಸವನ್ನು ಅನುವಾದಕರು ಮಾಡುತ್ತಾರೆ. ಸಾಹಿತ್ಯ ಸಂಘಟನೆ ಚಟುವಟಿಕೆಗಳನ್ನು ನಡೆಸುವ ಮೂಲಕ ಹಲವು ಸಾಹಿತ್ಯಾಭಿರುಚಿ ಇರುವ ಮನಸ್ಸುಗಳನ್ನು ಒಂದೆಡೆ ಸೇರಿಸುವ ಮಹತ್ತರ ಜವಾಬ್ದಾರಿ ಸಂಘಟಕರದ್ದಾಗಿರುತ್ತದೆ ಎಂದರು.

ಉಪನ್ಯಾಸಕಿ ಗೀತಾ ಕೊಂಕೋಡಿ ಡಾ. ನಾ.ಮೊಗಸಾಲೆ ಅವರ ಕುರಿತು ಮಾತನಾಡಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಸನ್ಮಾನಪತ್ರ ವಾಚಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮೋಹನ್ ರಾವ್, ನೀರ್ಪಾಜೆ ಭೀಮ ಭಟ್ಟರ ಪತ್ನಿ ಶಂಕರಿ ಭೀಮ ಭಟ್ ಉಪಸ್ಥಿತರಿದ್ದರು.

ನೀರ್ಪಾಜೆ ಭೀಮಭಟ್ಟರ ಅಭಿಮಾನಿ ಬಳಗ ಅಧ್ಯಕ್ಷ ಸುದರ್ಶನ್ ಜೈನ್ ಸ್ವಾಗತಿಸಿದರು. ಸಂಘಟಕ ಕೊಳಕೆ ಗಂಗಾಧರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಭಿಮಾನಿ ಬಳಗ ಬೆಳೆದುಬಂದ ದಾರಿ ಕುರಿತು ವಿವರಿಸಿದರು. ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು. ರಾಜಾರಾಮ ವರ್ಮ ವಿಟ್ಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X