ಮಂಗಳೂರು : ಕಾರು ಢಿಕ್ಕಿ ; ಸ್ಕೂಟರ್ ಸವಾರರಿಬ್ಬರಿಗೆ ಗಂಭೀರ ಗಾಯ

ಮಂಗಳೂರು : ಕಂಕನಾಡಿಯಿಂದ ಬಲ್ಮಠಕ್ಕೆ ಹೋಗುವ ರಸ್ತೆಯ ಮಧ್ಯೆ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಶನಿವಾರ ರಾತ್ರಿ 11 ಗಂಟೆಯ ಸುಮಾರಿಗೆ ನಡೆದಿದೆ.
ಗಾಯಾಳು ಸ್ಕೂಟರ್ ಸವಾರರನ್ನು ಬಜಾಲ್ ಫೈಝಲ್ ನಗರ ನಿವಾಸಿಗಳಾದ ಅಫ್ತಾಭ್ (21), ಅಮೀನ್ (25) ಎಂದು ಗುರುತಿಸಲಾಗಿದ್ದು, ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.












