Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ದರಾಮಯ್ಯ ಮನೆಗೆ ದಿಢೀರ್ ಭೇಟಿ ಬಗ್ಗೆ...

ಸಿದ್ದರಾಮಯ್ಯ ಮನೆಗೆ ದಿಢೀರ್ ಭೇಟಿ ಬಗ್ಗೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ5 Jan 2020 2:58 PM IST
share
ಸಿದ್ದರಾಮಯ್ಯ ಮನೆಗೆ ದಿಢೀರ್ ಭೇಟಿ ಬಗ್ಗೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು: ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಎಷ್ಟು ಪ್ರೀತಿ ಕೊಡಬೇಕೋ ಅಷ್ಟು ‌ಪ್ರೀತಿ ಕೊಟ್ಟಿದೆ. ಸಿದ್ದರಾಮಯ್ಯ ನಮ್ಮ ವಿಪಕ್ಷ ನಾಯಕರು ಹೀಗಾಗಿ ಅವರ ಮನೆ ಬಂದಿದ್ದೇನೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ’ ಎಂದರು.

ಈ ವೇಳೆ ಅವರು ಹೇಳಿದ್ದಿಷ್ಟು…

ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು, ಹೀಗಾಗಿ ಭೇಟಿ ಮಾಡಿ ಮಾತಾಡಿದ್ದೇನೆ. ಈ ಭೇಟಿಯಲ್ಲಿ ಯಾವುದೇ ವಿಶೇಷ ಉದ್ದೇಶವಿಲ್ಲ. ನಾನು ಒಬ್ಬರ ಕೆಳಗೆ ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ಕುಮಾರಸ್ವಾಮಿ ಜೊತೆ ಎಷ್ಟೇ ಭಿನ್ನಾಭಿಪ್ರಾಯ ಇದ್ದರು ಹೈಕಮಾಂಡ್ ಹೇಳಿದ್ದಕ್ಕೆ ಅವರ ಕೆಲಸ ಮಾಡಿದೆ. ಈಗ ಅವರೊಂದಿಗೆ ಕೆಲಸ ಮಾಡುತ್ತಿಲ್ಲ ಎಂದು ಅವರ ಬಗ್ಗೆ ಕೀಳಾಗಿ ಮಾತನಾಡಲು ಆಗುತ್ತಾ? ನಾನು ಅಷ್ಟು ಗೌರವ ಇಟ್ಟುಕೊಂಡಿದ್ದೇನೆ. ಎಸ್ ಎಂ ಕೃಷ್ಣ ಸೇರಿದಂತೆ ನಾನು ಯಾರ ಬಳಿ ಕೆಲಸ ಮಾಡಿದ್ದೇನೋ ಅವರೆಲ್ಲರ ಮೇಲೆ ಗೌರವ ಇದೆ.

ಸಿದ್ದರಾಮಯ್ಯ ನಮ್ಮ ‌ಲೀಡರ್, ಅಧಿಕಾರ ಇರಲಿ‌ ಇಲ್ಲದೆ‌ ಇರಲಿ ಅವರು ನಮ್ಮ ನಾಯಕರು. ವಿರೋಧ ಮಾಡೋದು ನನ್ನ ರಕ್ತದಲ್ಲಿ ಇಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು. ಅದಕ್ಕೆ ನಾನು ಅವರ ಜೊತೆ ಮಾತಾಡಿದ್ದೇನೆ. ಪ್ರಸಕ್ತ ರಾಜಕೀಯ ವಿದ್ಯಮಾನ, ಪಕ್ಷದ ಬಗ್ಗೆ ಚರ್ಚೆ ಮಾಡಿದ್ದೇನೆ.

ನಾನು ಯಾವುದೇ ಹುದ್ದೆ ಕೇಳುವುದಿಲ್ಲ. ಕೇಳಿ ಪಡೆಯೋ ಕಾಲ ಹೋಗಿದೆ. ಯಾರು ಬೇಕಾದ್ರು ಯಾವ ಹುದ್ದೆ ಬೇಕಾದ್ರು ಕೇಳಲಿ. ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿದ್ದೇನೆ, ಪಕ್ಷದ ಹೈಕಮಾಂಡ್, ನಮ್ಮ ಅಧ್ಯಕ್ಷರು ಏನು ಹೇಳ್ತಾರೋ ಆ ಕೆಲಸ ಮಾಡುತ್ತೇನೆ. ಪಕ್ಷದ ಅಧ್ಯಕ್ಷರು, ವಿಪಕ್ಷ ನಾಯಕರು ಏನು ತೀರ್ಮಾನ ಮಾಡ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಇಲ್ಲಿ ಯಾರು ಏನೋ ಮಾತಾಡಿದರೂ ಅದು ಗೌಣ. ಹೈಕಮಾಂಡ್, ಪಕ್ಷದ ಅಧ್ಯಕ್ಷರು, ವಿಪಕ್ಷ ನಾಯಕರು ಹೇಳೋದು ಮಾತ್ರ ಫೈನಲ್. ನನ್ನ ಮಾತು ಕೂಡಾ ಗೌಣ.

ನಮ್ಮ ‌ಪಕ್ಷದಲ್ಲಿ ಒಗ್ಗಟ್ಟು ಇದೆ. ಪಕ್ಷ ಅನ್ನೋದು ಮದುವೆ ಮಾಡಿಕೊಂಡ ಹಾಗೆ. ನಾವೇನು ಎನಿಮಿಗಳು ಅಲ್ಲ. ನಮ್ಮ‌ ಪಕ್ಷದಲ್ಲಿ ನಾವು ಯಾರು ಕಿತ್ತಾಡಿಕೊಂಡಿಲ್ಲ. ನಾವು ಎಲ್ಲರೂ ಒಟ್ಟಾಗಿಯೇ ಇದ್ದೇವೆ. ನನಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನು ಕೊಟ್ಟಿದೆ. ಎಷ್ಟು ಪ್ರೀತಿ ಕೊಡಬೇಕೋ ಅಷ್ಟು ‌ಪ್ರೀತಿ ಕೊಟ್ಟಿದೆ. ಸಿದ್ದರಾಮಯ್ಯ ನಮ್ಮ ವಿಪಕ್ಷ ನಾಯಕರು ಅವರ ಮನೆಗೆ  ನಾನು ಬಂದಿದ್ದೇನೆ ಅಷ್ಟೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಹೈಕಮಾಂಡ್ ಆಯ್ಕೆ ಮಾಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿ, ‘ಆ ಬಗ್ಗೆ ನನಗೇನು‌ ಗೊತ್ತಿಲ್ಲ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X