Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ, ಗುಜರಾತ್ ಆಸ್ಪತ್ರೆಗಳಲ್ಲಿ...

ರಾಜಸ್ಥಾನ, ಗುಜರಾತ್ ಆಸ್ಪತ್ರೆಗಳಲ್ಲಿ ಡಿಸೆಂಬರ್ ನಲ್ಲಿ 600ಕ್ಕೂ ಅಧಿಕ ಶಿಶುಗಳ ಸಾವು

ವಾರ್ತಾಭಾರತಿವಾರ್ತಾಭಾರತಿ5 Jan 2020 11:14 PM IST
share
ರಾಜಸ್ಥಾನ, ಗುಜರಾತ್ ಆಸ್ಪತ್ರೆಗಳಲ್ಲಿ ಡಿಸೆಂಬರ್ ನಲ್ಲಿ 600ಕ್ಕೂ ಅಧಿಕ ಶಿಶುಗಳ ಸಾವು

 ಜೈಪುರ, ಜ. 6: ಸರಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಜೀವರಕ್ಷಕ ಉಪಕರಣಗಳ ಕೊರತೆ ಆರೋಪಿಸಿ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆ ಗುಜರಾತ್ ಹಾಗೂ ರಾಜಸ್ಥಾನದ 6 ಪ್ರಮಖ ಆಸ್ಪತ್ರೆಯಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ 600ಕ್ಕೂ ಅಧಿಕ ಮಕ್ಕಳು ಮೃತಪಟ್ಟಿವೆ ಎಂದು ವರದಿ ಹೇಳಿವೆ.

 ಒಂದು ತಿಂಗಳ ಅವಧಿಯಲ್ಲಿ 100 ಮಕ್ಕಳು ಸಾವನ್ನಪ್ಪಿದ ಮೊದಲ ವರದಿ ರಾಜಸ್ಥಾನದ ಕೋಟಾದ ಜೆಕೆ ಲೋನ್ ಆಸ್ಪತ್ರೆಯಿಂದ ಹೊರಬಿದ್ದಿದೆ. ಇದಕ್ಕೆ ರಾಜಸ್ಥಾನದ ಆಡಳಿತಾರೂಢ ಕಾಂಗ್ರೆಸ್ ಸರಕಾರ ಕಾರಣ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಗುಜರಾತ್‌ನಲ್ಲಿ ಇದೇ ರೀತಿ ಶಿಶುಗಳ ಸಾವು ಸಂಭವಿಸಿರುವುದು ಬಿಜೆಪಿಗೆ ಮುಜುಗರ ಉಂಟು ಮಾಡಿದೆ.

  ಕೋಟಾದ ಜೆಕೆ ಲೋನ್ ಆಸ್ಪತ್ರೆಯಲ್ಲಿ 100ಕ್ಕೂ ಅಧಿಕ ಮಕ್ಕಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ರಾಜಸ್ಥಾನ ಸರಕಾರಕ್ಕೆ ನೋಟಿಸು ಕಳುಹಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಸಂಸ್ಥೆಯಲ್ಲಿರುವ ಶೇ. 50ರಷ್ಟು ಉಪಕರಣ ಉಪಯೋಗ ರಹಿತವಾಗಿರುವುದು ಪತ್ತೆಯಾಗಿದೆ ಎಂದಿದೆ.

ಮಕ್ಕಳ ಸಾವಿನ ಬಳಿಕ ಡಾ. ಜಗಜೀತ್ ಸಿಂಗ್ ಬದಲಾಗಿ ಡಾ. ಅಮೃತ್‌ ಲಾಲ್ ಬೈರವ ಅವರನ್ನು ಈ ಆಸ್ಪತ್ರೆಯ ಮಕ್ಕಳ ರೋಗ ವಿಭಾಗದ ಮುಖ್ಯಸ್ಥರನ್ನಾಗಿ ನಿಯೋಜಿಸಲಾಗಿದೆ. ನಾಲ್ಕು ಹೆಚ್ಚುವರಿ ಶಿಶು ರೋಗ ತಜ್ಞರನ್ನು ನೇಮಕ ಮಾಡಲಾಗಿದೆ. ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ 9 ಹಾಸಿಗೆಗಳನ್ನು ಹೆಚ್ಚಿಸಲಾಗಿದೆ. ಬಿಕೇನರ್‌ನ ಸರಕಾರಿ ಆಸ್ಪತ್ರೆಗಳಲ್ಲಿ ಡಿಸೆಂಬರ್‌ನಲ್ಲಿ 162 ಶಿಶುಗಳು ಸಾವನ್ನಪ್ಪಿವೆ.

‘‘ಈ ತಿಂಗಳು ನಾವು ವಿವಿಧ ಆಸ್ಪತ್ರೆಗಳ 2,219 ಮಕ್ಕಳನ್ನು ಇಲ್ಲಿ ದಾಖಲಿಸಿದ್ದೇವೆ. ಸಾವನ್ನಪ್ಪಿದ 162 ಶಿಶುಗಳಲ್ಲಿ ಯಾವುದು ಕೂಡ ಇಲ್ಲಿ ಜನಿಸಿಲ್ಲ’’ ಎಂದು ಎಸ್‌ಪಿ ವೈದ್ಯಕೀಯ ಕಾಲೇಜು, ಪಿಬಿಎಂ ಆಸ್ಪತ್ರೆಯ ಡಾ. ಎಚ್.ಎಸ್. ಕುಮಾರ್ ಹೇಳಿದ್ದಾರೆ. ಇದೇ ತಿಂಗಳಲ್ಲಿ ಜೋಧಪುರದ ಉಮೈದ್ ಹಾಗೂ ಎಂಡಿಎಂ ಆಸ್ಪತ್ರೆಗಳಲ್ಲಿ 145ಕ್ಕೂ ಅಧಿಕ ಮಕ್ಕಳ ಸಾವು ಸಂಭವಿಸಿದೆ. ಆದರೆ, ಇದು ಶಿಶು ಮರಣದ ಅಂತಾರಾಷ್ಟ್ರೀಯ ಮಟ್ಟ ಸೂಚಿಸಿದ ವ್ಯಾಪ್ತಿಯ ಒಳಗೆ ಬರುತ್ತದೆ ಎಂದು ಹಿರಿಯ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ.

‘‘2019ರಲ್ಲಿ ಈ ಎರಡು ಆಸ್ಪತ್ರೆಗಳಲ್ಲಿ ದಾಖಲಿಸಲಾದ ಒಟ್ಟು 47,815 ಮಕ್ಕಳಲ್ಲಿ 754 ಮಕ್ಕಳು ಮೃತಪಟ್ಟಿವೆ’’ ಎಂದು ಎಸ್‌ಎನ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ರಾಥೋಡ್ ತಿಳಿಸಿದ್ದಾರೆ.

ಆದರೆ, ಗುಜರಾತ್‌ನಲ್ಲಿ ಶಿಶುಗಳ ಸಾವು ಬಿಜೆಪಿ ಟೀಕೆಗೆ ಒಳಗಾಗುವಂತೆ ಮಾಡಿದೆ. ಡಿಸೆಂಬರ್‌ನಲ್ಲಿ ರಾಜಕೋಟ್ ಸರಕಾರಿ ಆಸ್ಪತ್ರೆಯಲ್ಲಿ 111 ಮಕ್ಕಳು ಸಾವನ್ನಪ್ಪಿವೆ. ಇದೇ ತಿಂಗಳು ಅಹ್ಮದಾಬಾದ್‌ನ ಸರಕಾರಿ ಆಸ್ಪತ್ರೆಗಳಲ್ಲಿ 85 ಮಕ್ಕಳು ಸಾವನ್ನಪ್ಪಿವೆ.

2019ರ ಕಳೆದ ಮೂರು ತಿಂಗಳಲ್ಲಿ ಚಿಕಿತ್ಸೆಯ ಸಂದರ್ಭ 269 ಮಕ್ಕಳು ಸಾವನ್ನಪ್ಪಿವೆ ಎಂದು ರಾಜ್‌ಕೋಟ್ ಸರಕಾರಿ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X