Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಟರ್‌ನೆಟ್ ಸಂಪರ್ಕ ಆಡಳಿತಾತ್ಮಕ...

ಇಂಟರ್‌ನೆಟ್ ಸಂಪರ್ಕ ಆಡಳಿತಾತ್ಮಕ ಉದ್ದೇಶಕ್ಕೆ ಮಾತ್ರ ಲಭ್ಯ: ಕಾಶ್ಮೀರದ ವೈದ್ಯರ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ5 Jan 2020 11:18 PM IST
share
ಇಂಟರ್‌ನೆಟ್ ಸಂಪರ್ಕ ಆಡಳಿತಾತ್ಮಕ ಉದ್ದೇಶಕ್ಕೆ ಮಾತ್ರ ಲಭ್ಯ: ಕಾಶ್ಮೀರದ ವೈದ್ಯರ ಹೇಳಿಕೆ

ಶ್ರೀನಗರ, ಜ.5: ಐದು ತಿಂಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಯರ್‌ಲೈನ್ ಬ್ರಾಡ್‌ ಬ್ಯಾಂಡ್ ಇಂಟರ್‌ನೆಟ್ ವ್ಯವಸ್ಥೆಯನ್ನು ಮರುಸ್ಥಾಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.

ರಾಜ್ಯದ 80 ಸರಕಾರಿ ಆಸ್ಪತ್ರೆಗಳಲ್ಲಿ ಇಂಟರ್‌ನೆಟ್ ಸಂಪರ್ಕ ಸ್ಥಾಪಿಸಲಾಗಿದೆ. ಆದರೆ ಕೇವಲ ಆಡಳಿತಾತ್ಮಕ ಉದ್ದೇಶಕ್ಕೆ ಮಾತ್ರ ಇಂಟರ್‌ನೆಟ್ ಸಂಪರ್ಕ ಲಭ್ಯವಾಗಿದೆ ಎಂದು ಕಾಶ್ಮೀರದ ಅತ್ಯಂತ ದೊಡ್ಡ ಮಕ್ಕಳ ಆಸ್ಪತ್ರೆ ಜಿಬಿ ಪಂತ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ವೈದ್ಯಕೀಯ ಸಂಶೋಧನೆ ಮತ್ತು ಇತರ ಶೈಕ್ಷಣಿಕ ಉದ್ದೇಶಕ್ಕೆ ಇಂಟರ್‌ನೆಟ್ ವ್ಯವಸ್ಥೆ ಒದಗಿಸಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಇಂಟರ್‌ನೆಟ್ ವ್ಯವಸ್ಥೆಯ ಸೀಮಿತ ಪುನಸ್ಥಾಪನೆ ಬಡಜನತೆಗೆ ನೆರವಾಗಲಿದೆ. ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಆನ್‌ಲೈನ್ ಗೋಲ್ಡನ್ ಕಾರ್ಡ್ ಬಳಸಿ ಉಚಿತ ವೈದ್ಯಕೀಯ ನೆರವು ಪಡೆಯುವ ಸೌಲಭ್ಯ ಹಲವು ತಿಂಗಳಿಂದ ಅಲಭ್ಯವಾಗಿತ್ತು. ಇಂಟರ್‌ನೆಟ್ ಸ್ಥಗಿತದಿಂದ ಹಲವು ರೋಗಿಗಳಿಗೆ ಸರಕಾರದ ಯೋಜನೆಯ ಸೌಲಭ್ಯ ಪಡೆಯಲು ಅಸಾಧ್ಯವಾಗಿತ್ತು ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ಆಗಸ್ಟ್ 5ರಂದು ಇಂಟರ್‌ನೆಟ್ ಸ್ಥಗಿತವಾಗಿದ್ದು, ಮುಂದಿನ 25 ದಿನ ಆನ್‌ಲೈನ್ ಮೂಲಕ ಆಯುಷ್ಮಾನ್ ಭಾರತ್ ಯೋಜನೆಯ ಪ್ರಕರಣಗಳ ಪ್ರಕ್ರಿಯೆ ಸಾಧ್ಯವಾಗಿರಲಿಲ್ಲ. 25 ದಿನಗಳ ಬಳಿಕ ಆಫ್‌ಲೈನ್ ಮೂಲಕ ಈ ಕಾರ್ಯ ನಡೆಸಿದ್ದೇವೆ. ಅಲ್ಲದೆ ಇಂಟರ್‌ನೆಟ್ ಸೌಲಭ್ಯ ಹೊಂದಿದ್ದ ಜಿಲ್ಲಾಧಿಕಾರಿ ಕಚೇರಿಯ ಮೂಲಕ ಆನ್‌ಲೈನ್ ಪ್ರಕ್ರಿಯೆ ನಡೆಸಿದ್ದೇವೆ ಎಂದು ಜಿಬಿ ಪಂತ್ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ ಮುಝಫರ್ ಹೇಳಿದ್ದಾರೆ.

ಆಸ್ಪತ್ರೆಯ ದಾಖಲೆಗಳ ಪ್ರಕಾರ ಪ್ರತೀ ತಿಂಗಳೂ ಆಯುಷ್ಮಾನ್ ಭಾರತ್ ಯೋಜನೆಯಡಿ 20ಕ್ಕೂ ಹೆಚ್ಚು ಬಡಜನರು ಉಚಿತ ವೈದ್ಯಕೀಯ ಸೌಲಭ್ಯ ಪಡೆಯುತ್ತಾರೆ. ಆದರೆ ಆಗಸ್ಟ್ 1ರಿಂದ ಅಕ್ಟೋಬರ್ 18ರ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಒಂದೇ ಒಂದು ಆಯುಷ್ಮಾನ್ ಭಾರತ್ ಯೋಜನೆಯ ಪ್ರಕರಣ ದಾಖಲಾಗಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸುದೀರ್ಘಾವಧಿಯಲ್ಲಿ ಇಂಟರ್‌ನೆಟ್ ವ್ಯವಸ್ಥೆ ಸ್ಥಗಿತಗೊಂಡ ಕಾರಣ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಕಾರ್ಡ್‌ಗಳನ್ನು ಸ್ವೀಕರಿಸಲು ನಿರಾಕರಿಸಲಾಗಿದೆ ಎಂದು ಹಲವರು ದೂರಿದ್ದಾರೆ.

ರಾಜ್ಯದಲ್ಲಿ ಇಂಟರ್‌ನೆಟ್ ಬಳಕೆಯನ್ನು ಆಡಳಿತಾತ್ಮಕ ಉದ್ದೇಶಕ್ಕೆ ಮಾತ್ರ ಸೀಮಿತಗೊಳಿಸಿರುವುದಕ್ಕೆ ವಿದ್ಯಾರ್ಥಿಗಳೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕ್ಷಣ ಮಾತ್ರದಲ್ಲಿ ಸಿದ್ಧಪಡಿಸುತ್ತಿದ್ದ ಸಂಶೋಧನಾ ಲೇಖನಗಳನ್ನು ಸಿದ್ಧಪಡಿಸಲು ಈಗ ಮೂರು ತಿಂಗಳಿಗೂ ಹೆಚ್ಚಿನ ಸಮಯ ಬೇಕಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ವೈದ್ಯಕೀಯ ಸಂಶೋಧನೆ, ಶೈಕ್ಷಣಿಕ ಉದ್ದೇಶಕ್ಕೆ ತನಗೆ ಇಂಟರ್‌ನೆಟ್ ಅತೀ ಅಗತ್ಯವಾಗಿದೆ. ಆದರೆ ಸುದೀರ್ಘಾವಧಿ ಇಂಟರ್‌ನೆಟ್ ಸ್ಥಗಿತದಿಂದ ತನಗೆ ಬಹಳ ಸಮಸ್ಯೆಯಾಗಿದೆ. ಆದ್ದರಿಂದ ಕೆಲವು ಅಗತ್ಯದ ಸ್ಥಳಗಳಿಗೂ ಇಂಟರ್‌ನೆಟ್ ವ್ಯವಸ್ಥೆ ಮರು ಸ್ಥಾಪಿಸಬೇಕು ಎಂದು ಜಿಬಿ ಪಂತ್ ಆಸ್ಪತ್ರೆಯ ವೈದ್ಯ ಡಾ ಸಂಜೀವ್ ಸಿಂಗ್ ಸರಕಾರವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X