Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ ವಿಶೇಷ...

ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ರೂಪಿಸಲು ಚಿಂತನೆ :ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಘೋಷಣೆ

ಪತ್ರಕರ್ತರ ಗ್ರಾಮವಾಸ್ತವ್ಯ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ5 Jan 2020 11:26 PM IST
share
ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ರೂಪಿಸಲು ಚಿಂತನೆ  :ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಘೋಷಣೆ

ಸುಳ್ಯ, ಜ.5:ಸುಳ್ಯ ತಾಲೂಕಿನ ಹಿಂದುಳಿದ ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಚಿಂತನೆ ನಡೆಸಲಾಗುವುದು  ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸುಳ್ಯ, ಜ.5:

ಅವರು ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳೊಂದಿಗೆ ಸಂವಾದ ಮತ್ತು ಸಮಾರೋಪ ಸಮಾರಂಭದಲ್ಲಿ ಜನರ ಪ್ರಶ್ನೆಗಳಿಗುತ್ತರಿಸಿದರು. ವಿಶೇಷ ಪ್ಯಾಕೆಜ್ ನಿಟ್ಟಿನಲ್ಲಿ ಏನು ಮಾಡಲು ಸಾಧ್ಯವೇ ಎನ್ನುವುದರ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕೃಷಿಕ ವಲಯದಲ್ಲಿರುವ ಅಡಿಕೆ ಹಳದಿ ರೋಗ, ಕಾಡು ಪ್ರಾಣಿಗಳ ಹಾವಳಿ, ಕೋವಿ ಪರವಾನಿಗೆ ನಿಯಮ ಸೇರಿದಂತೆ ಕೃಷಿಕರ ಸಮಸ್ಯೆ ಪರಿಹಾರಕ್ಕೆ ಜ. 15 ರೊಳಗೆ ಜಿಲ್ಲಾ ಮಟ್ಟದಲ್ಲಿ ಸಭೆ ಕರೆಯಲಾಗುವುದು. ಆ ಬಳಿಕ ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಸುಳ್ಯ ಶಾಸಕ ಎಸ್.ಅಂಗಾರ ಮಾತನಾಡಿ, ಮಡಪ್ಪಾಡಿ ಗ್ರಾಮದಲ್ಲಿ 64 ಕಿಮೀ ಗ್ರಾಮೀಣ ರಸ್ತೆಗಳಿಗೆ. ಇದರಲ್ಲಿ ಪ್ರಮುಖವಾದ ರಸ್ತೆಗಳನ್ನು ಗುರುತಿಸಿ ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿ ನಾನಾ ಯೋಜನೆಗಳು ಫಲಾನುಭವಿಗಳಿಗೆ ವ್ಯಯಕ್ತಿಕವಾಗಿ ಲಭಿಸಿದ್ದ ಬಗ್ಗೆ ಸಮಗ್ರ ಮಾಹಿತಿಯನ್ನು ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಗ್ರಾ.ಪಂ.ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯ ಉದಯ ಕೊಪ್ಪಡ್ಕ, ಗ್ರಾ.ಪಂ.ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಎ.ಪಿ.ಎಂ.ಸಿ.ನಿರ್ದೇಶಕ ವಿನಯಕುಮಾರ್ ಮುಳುಗಾಡು, ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಂ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಸುಳ್ಯ ತಹಸೀಲ್ದಾರ್ ಕುಂಞಿ ಅಹಮ್ಮದ್, ಪುತ್ತೂರು ಡಿವೈಎಸ್‌ಪಿ ದಿನಕರ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಹಾಗೂ ಉಸ್ತುವಾರಿ ಸಚಿವರನ್ನು ಸನ್ಮಾನಿಸಲಾಯಿತು.ಜಿಲ್ಲಾ ಕಾರ್ಯಕಾರಣಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ವಂದಿಸಿದರು. ಪತ್ರಕರ್ತ ಬಿ.ಎನ್.ಪುಷ್ಪಾರಾಜ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X