Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಸಾಹಿತ್ಯ ಸಮ್ಮೇಳನ ವಿರೋಧಿಗಳನ್ನು...

ಕನ್ನಡ ಸಾಹಿತ್ಯ ಸಮ್ಮೇಳನ ವಿರೋಧಿಗಳನ್ನು ಕೂಡಲೇ ಬಂಧಿಸಿ: ಜಿಲ್ಲಾಡಳಿತಕ್ಕೆ ದಸಂಸ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Jan 2020 5:55 PM IST
share
ಕನ್ನಡ ಸಾಹಿತ್ಯ ಸಮ್ಮೇಳನ ವಿರೋಧಿಗಳನ್ನು ಕೂಡಲೇ ಬಂಧಿಸಿ: ಜಿಲ್ಲಾಡಳಿತಕ್ಕೆ ದಸಂಸ ಆಗ್ರಹ

ಚಿಕ್ಕಮಗಳೂರು, ಜ.6: ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿರೋಧಿಸುವವರು ಕನ್ನಡ ಭಾಷೆ, ನೆಲ, ಸಂಸ್ಕೃತಿಯನ್ನೂ ವಿರೋಧಿಸುವವಾಗಿದ್ದಾರೆ. ಸಮ್ಮೇಳನವನ್ನು ವಿರೋಧಿಸುವ ಮೂಲಕ ಕನ್ನಡ ಸಾಹಿತ್ಯ ಪರಂಪರೆಯನ್ನು ಅವಮಾನಿಸಿದ್ದಾರೆ. ನಾಡಿನ ವೈವಿಧ್ಯಮಯ ವಿಚಾರವಂತಿಕೆಯೇ ಕನ್ನಡ ಸಾಹಿತ್ಯದ ಜೀವಾಳ. ಇಂತಹ ವಿಶಿಷ್ಯ ಪರಂಪರೆಯನ್ನು ವಿರೋಧಿಸುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಜಿಲ್ಲಾಡಳಿವನ್ನು ಆಗ್ರಹಿಸಿ ಸೋಮವಾರ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ದಂಟರಮುಕ್ಕಿ ಶ್ರೀನಿವಾಸ್ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಗೆ ಮಾತನಾಡಿ, ಜ.10, 11ರಂದು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಜಿಲ್ಲಾ ಕಸಾಪ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ. ಸಮ್ಮೇಳನದ ಅಧ್ಯಕ್ಷರನ್ನಾಗಿ ಪರಿಸರ ಚಿಂತಕ ಮತ್ತು ಸಾಮಾಜಿಕ ಹೋರಾಟಗಾರ ಹಾಗೂ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಕಲ್ಕುಳಿ ವಿಠಲ್ ಹೆಗ್ಗಡೆ ಅವರನ್ನು ಆಯ್ಕೆ ಮಾಡಿದ್ದಾರೆ. ಸಾಹಿತಿಯಾಗಿರುವ ಕಲ್ಕುಳಿ ವಿಠಲ್ ಹೆಗ್ದೆ ತಮ್ಮ ಸಾಹಿತ್ಯದ ಮೂಲಕ ಮಲೆನಾಡಿನ ವಿಶಿಷ್ಟ ಆಚಾರ ವಿಚಾರ, ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸಿದ್ದಾರೆ. 

ಮಲೆನಾಡಿನ ಮೇಲೆ ಬಂಡವಾಳಶಾಹಿಗಳು ಅರಣ್ಯ ಕಾನೂನುಗಳನ್ನು ಮುಂದಿಟ್ಟುಕೊಂಡು ಕಾಡಿನಿಂದ ಜನರನ್ನು ಹೊರಹಾಕಲು ಪ್ರಯತ್ನಿಸಿದಾಗ, ಇಲ್ಲಿನ  ಸಂಪತ್ತನ್ನು ದೋಚಲು ಮುಂದಾದಾಗ ತಮ್ಮ ಹೋರಾಟ, ಬರಹಗಳ ಮೂಲಕ ಜನಜಾಗೃತಿ ಮೂಡಿಸುವಲ್ಲಿ, ಪ್ರಜ್ಞಾವಂತರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಕಸಾಪ ಕಾರ್ಯಕಾರಿಣಿ ಮಂಡಳಿಯದ್ದು ಅತ್ಯುತ್ತಮ ನಿರ್ಧಾರವಾಗಿದೆ ಎಂದು ತಿಳಿಸಿದ ಅವರು, ಕಲ್ಕುಳಿ ಅವರನ್ನು ಆಯ್ಕೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಂದೂರು ಅಶೋಕ್‍ರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಅವರು ಹೇಳಿದರು.

ಆದರೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ವಿಠಲ್ ಹೆಗ್ಡೆ ಅವರ ಆಯ್ಕೆ ಸಂಬಂಧ ಜಿಲ್ಲೆಯ ಕೆಲವು ಸಂಘ ಪರಿಹಾರದ ಮುಖಂಡರು ಮತ್ತು ಶಾಸಕ ಸಿ.ಟಿ.ರವಿ ಅವರು ಸಮ್ಮೇಳನ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ಸಂಘಪರಿವಾರದವರಿಗೆ ಕನ್ನಡ ನಾಡು, ನುಡಿಯ ಬಗ್ಗೆ ಗೌರವ ಇಲ್ಲ, ಅವರಿಗೆ ಗೌರವ ಇರುವುದು ಮನುವಾದ, ಕೋಮುವಾದದ ಮೇಲೆ ಮಾತ್ರ, ಇನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರಿಗೆ ಸಂಸ್ಕೃತಿಯೇ ಇಲ್ಲ. ಇಂತವರಿಂದ ಕನ್ನಡದ ಅಭಿವೃದ್ಧಿಗೆ, ಸಾಹಿತ್ಯದ ಬೆಳವಣಿಗೆಗೆ ಕಿಂಚಿತ್ ಕೊಡುಗೆ ಇಲ್ಲ, ಸಮ್ಮೇಳನಕ್ಕೆ ವಿರೋಧ ವ್ಯಕ್ತಪಡಿಸಿ, ಅನುದಾನವನ್ನೂ ತಡೆ ಹಿಡಿದಿರುವುದರಿಂದ ಸಿ.ಟಿ.ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವರಾಗಿರಲು ಯಾವುದೇ ಅರ್ಹತೆ ಇಲ್ಲ. ಜಿಲ್ಲಾ ಸಾಹಿತ್ಯ ಸಮ್ಮೇಳನದ ವಿಚಾರವಾಗಿ ಅವರ ನಡವಳಿಕೆಯನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತಿದ್ದು, ಸಾಹಿತ್ಯ ಸಮ್ಮೇಳನವನ್ನು ವಿವಾದವನ್ನಾಗಿಸುತ್ತಿರುವು ಅವರು ತಮ್ಮ ಖಾತೆಗೆ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಉಸ್ತುವಾರಿ ಸಚಿವ ಸಿ.ಟಿ.ರವಿ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಲು ಪರಿಷತ್ ಅಧ್ಯಕ್ಷರು ಮತ್ತು ಕಸಾಪ ಮುಖಂಡರು ಹೋದಾಗ, ನಾನು ಸಮ್ಮೇಳನಕ್ಕೆ ಬರುವುದಿಲ್ಲ, ಸಮ್ಮೇಳನದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ಹೇಳಿರುವುದು ಖಂಡನೀಯ ಎಂದು ತಿಳಿಸಿರುವ ಅವರು, ಒಂದು ಆಡಳಿತ ವ್ಯವಸ್ಥೆಯನ್ನು ಗೌರವಿಸದ ಹಾಗೂ ಜನರ ಹಣವನ್ನು ತನ್ನ ಮನೆಯ ಹಣವೆಂದು ಭಾವಿಸಿರುವ ಸಚಿವರು ಈ ಕೂಡಲೆ ರಾಜೀನಾಮೆ ನೀಡಬೇಕು. ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿರೋಧ ಮಾಡುವವರನ್ನು ಜಿಲ್ಲಾ ಪೊಲೀಸ್ ಇಲಾಖೆ ಕೂಡಲೇ ಬಂಧಿಸಿ, ಸಮ್ಮೇಳನದ ಎಲ್ಲ ಕಾರ್ಯಕ್ರಮಗಳಿಗೆ ಯಾವುದೆ ರೀತಿ ತೊಂದರೆ ಆಗದಂತೆ ಜಿಲ್ಲಾಡಳಿತ ಸೂಕ್ತ ರಕ್ಷಣೆ ಒದಗಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಲ್ಲೂರು ಪುಟ್ಟಸ್ವಾಮಿ ಎಂ.ಎಸ್.ಶೇಖರ್, ಕೆರೆಮಕ್ಕಿ ಈರೇಶ್, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಕಲ್ಕುಳಿ ವಿಠಲ್ ಹೆಗ್ಡೆ ಮಲೆನಾಡಿನ ನೆಲ, ಜಲ ಮತ್ತು ಜನರ ಉಳಿವಿಗಾಗಿ ಹೋರಾಟ ಮಾಡಿದ್ದಾರೆ. ತಮ್ಮ ಸಾಹಿತ್ಯ, ಬರವಣಿಗೆಗೆಳ ಮೂಲಕ ಅವರು ರಾಜ್ಯಾದ್ಯಂತ ಅಪಾರ ಅಭಿಮಾನಿಗಳನ್ನೂ ಹೊಂದಿದ್ದಾರೆ. ಅವರು ನಕ್ಸಲ್ ಬೆಂಬಲಿಗರೆಂಬ ವಾದದಲ್ಲಿ ಹುರುಳಿಲ್ಲ. ನಕ್ಸಲ್ ಹೋರಾಟವನ್ನು ವಿರೋಧಿಸಿ ಈ ಹಿಂದೆ ಅವರು ಸಾಕಷ್ಟು ಹೇಳಿಕೆಗಳನ್ನೂ ನೀಡಿದ್ದಾರೆ. ಆದಿವಾಸಿ ದಲಿತರು, ಗಿರಿಜನರನ್ನು ಕಾಡಿನಿಂದ ಹೊರ ಹಾಕುವ ಸಂಚಿನ ವಿರುದ್ಧ ಅವರ ಬದ್ಧತೆ, ಹೋರಾಟವನ್ನು ಇಡೀ ರಾಜ್ಯ ಕಂಡಿದೆ. ಕನ್ನಡ ಸಾಹಿತ್ಯಾಭಿಮಾನಿಗಳಿಗೆ ಅವರ ಮಂಗನಬ್ಯಾಟೆ ಕೃತಿ ಮೂಲಕ ಅಪಾರ ವಿಚಾರಧಾರೆಗಳನ್ನು ತಿಳಿಸಿಕೊಟ್ಟಿದ್ದಾರೆ. ಅವರನ್ನು ವಿರೋಧಿಸುವವರು ಕೋಮುವಾದ ಹರಡಿ ಸಮಾಜ ಒಡೆಯುವ ಸಮಾಜಘಾತುಕ ಶಕ್ತಿಗಳು ಮಾತ್ರ. ರಾಜ್ಯ ಸರಕಾರ ಹಾಗೂ ಕೇಂದ್ರ ಸಾಹಿತ್ಯ ಪರಿಷತ್ ತಡ ಮಾಡದೇ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡಬೇಕು. ಕನ್ನಡ ಸಾಹಿತ್ಯ ಸಮ್ಮೇಳನದ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಲು ಸರಕಾರ ಅವಕಾಶ ನೀಡಬಾರದು.
- ದಂಟರಮಕ್ಕಿ ಶ್ರೀನಿವಾಸ್, ದಸಂಸ ರಾಜ್ಯ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X