Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಜೆಎನ್‌ಯು ದಾಳಿ ಖಂಡಿಸಿ...

ಬೆಂಗಳೂರು: ಜೆಎನ್‌ಯು ದಾಳಿ ಖಂಡಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Jan 2020 7:47 PM IST
share
ಬೆಂಗಳೂರು: ಜೆಎನ್‌ಯು ದಾಳಿ ಖಂಡಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು, ಜ.6: ದಿಲ್ಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ರವಿವಾರ ರಾತ್ರಿ ಮುಸುಕುಧಾರಿ ಗೂಂಡಾಗಳ ಗುಂಪೊಂದು ಕ್ಯಾಂಪಸ್ ಒಳ ಪ್ರವೇಶಿಸಿ ವಿದ್ಯಾರ್ಥಿಗಳು, ಅಧ್ಯಾಪಕರ ಮೇಲೆ ಮಾಡಿದ ದಾಳಿ ಹಾಗೂ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ನಗರದಲ್ಲಿಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ನಗರದ ಪುರಭವನದ ಬಳಿ ಎಸ್‌ಎಫ್‌ಐ, ಎಐಡಿಎಓ, ಎಐಎಸ್‌ಎಫ್, ಕೆವಿಎಸ್, ಎಐಎಸ್‌ಎ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ಸಾವಿರಾರು ವಿದ್ಯಾರ್ಥಿಗಳು, ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡು, ವಿದ್ಯಾರ್ಥಿ ಮತ್ತು ಅಧ್ಯಾಪಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಹಾಗೂ ಎಸ್‌ಎಫ್‌ಐ ನಾಯಕಿ ಐಶೆ ಘೋಷ್, ಪ್ರಾಧ್ಯಾಪಕಿ ಸುಚರಿತಾ ಸೇರಿದಂತೆ ವಿದ್ಯಾರ್ಥಿಗಳ ಮೇಲೆ ಗೂಂಡಾ ಪಡೆ ಹಲ್ಲೆ ನಡೆಸಿದ್ದಾರೆ. ಶುಲ್ಕ ಹೆಚ್ಚಳ, ಸಂವಿಧಾನ ವಿರೋಧಿ ಕಾಯ್ದೆ ಎನ್‌ಆರ್‌ಸಿ, ಸಿಎಎ ವಿರುದ್ಧ ನಡೆದ ಬೃಹತ್ ಪ್ರತಿಭಟನೆಯನ್ನು ಸಹಿಸದ ಬಿಜೆಪಿ, ಆರೆಸ್ಸೆಸ್ ಈ ಕೃತ್ಯ ನಡೆಸಿದೆ. ವಿವಿಯ ಎಬಿವಿಪಿ ಕಾರ್ಯಕರ್ತರೇ ಈ ಕೃತ್ಯ ನಡೆಸಿದ್ದಾರೆ. ಈ ಸಂಬಂಧ ಹಲವು ಪುರಾವೆಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸುತ್ತಿವೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು. ವಿಶ್ವವಿದ್ಯಾಲಯದೊಳಗೆ ಹೊರಗಡೆಯಿಂದ ಪ್ರವೇಶಿಸಿದ ಗೂಂಡಾಗಳ ಗುಂಪು, ಶಸ್ತ್ರಾಸ್ತ್ರಗಳ ಸಮೇತ ಆಗಮಿಸಿದ್ದರು. ವಿವಿಯ ಹೊರಗಡೆಯಿದ್ದ ಪೊಲೀಸ್ ಸಿಬ್ಬಂದಿ ಇದನ್ನು ನೋಡಿಯೂ, ನೋಡದಂತೆ ಇದ್ದರು. ಎಲ್ಲವನ್ನೂ ಪೂರ್ವನಿಯೋಜಿತವಾಗಿ ನಡೆಸಿದ್ದು, ಕ್ಯಾಂಪಸ್ ಪ್ರವೇಶಿಸಿದ ಕೂಡಲೇ ಹಾಸ್ಟೆಲ್‌ಗಳಿಗೆ ನುಗ್ಗಿ ಮನಬಂದಂತೆ ಹೊಡೆದಿದ್ದಾರೆ. ಇದು ಅತ್ಯಂತ ಅಮಾನವೀಯ ಕೃತ್ಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಎಫ್‌ಐ ರಾಜ್ಯಾಧ್ಯಕ್ಷ ವಿ.ಅಂಬರೀಶ್ ಮಾತನಾಡಿ, ಜೆಎನ್‌ಯುನಲ್ಲಿ ಎಲ್ಲ ವರ್ಗದ ಜನರಿಗೂ ಶಿಕ್ಷಣ ಸಿಗುತ್ತಿದೆ. ಇದನ್ನು ಗುರಿಯಾಗಿಸಿಕೊಂಡಿರುವ ಕೇಂದ್ರ ಸರಕಾರ, ವಿವಿಯ ಮೇಲೆ ದಾಳಿಗೆ ಯತ್ನಿಸುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ಕನ್ಹಯ್ಯ ಕುಮಾರ್ ವಿರುದ್ಧ ದೇಶದ್ರೋಹ ಪಟ್ಟ ಕಟ್ಟಿದರು. ಅದು ವಿಫಲವಾಯಿತು. ವಿದ್ಯಾರ್ಥಿ ಸಂಘದ ಚುನಾವಣೆಗಳಲ್ಲಿಯೂ ಸೋತಿದ್ದರು. ಹೀಗಾಗಿ, ಇದೀಗ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆಗಳು ನಡೆಸಲು ಮುಂದಾಗಿದ್ದಾರೆ ಎಂದು ದೂರಿದರು.

ಈ ಸಂದರ್ಭದಲ್ಲಿ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್, ಲೇಖಕ ಯೋಗೇಶ್ ಮಾಸ್ಟರ್, ಚಿಂತಕ ಶ್ರೀಪಾದ ಭಟ್, ಲೇಖಕಿ ಡಾ.ವಿಜಯಮ್ಮ, ಮಹಿಳಾ ಸಂಘಟನೆಯ ಜ್ಯೋತಿ, ಗೌರಮ್ಮ, ಎಸ್‌ಎಫ್‌ಐನ ಗುರುರಾಜ್ ದೇಸಾಯಿ, ಕೆವಿಎಸ್‌ನ ಸರೋವರ ಬೆಂಕಿಕೆರೆ ಸೇರಿದಂತೆ ಹಲವರಿದ್ದರು.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಸರಕಾರ ದೇಶದ ಜನರ ಮೇಲೆ ಬಲವಂತವಾಗಿ ತನ್ನ ನೀತಿಗಳನ್ನು ಹೇರಿಕೆ ಮಾಡುತ್ತಿದೆ. ಇದನ್ನು ವಿರೋಧಿಸಿ ವಿದ್ಯಾರ್ಥಿಗಳಿಂದು ಬೀದಿಗೆ ಇಳಿದಿದ್ದಾರೆ. ಇದನ್ನು ಸಹಿಸದೇ ವಿದ್ಯಾರ್ಥಿಗಳ ಮೇಲೆ ದಾಳಿಗೆ ಮುಂದಾಗಿದೆ. ಮೊನ್ನೆ ಜಾಮಿಯಾ ವಿವಿ, ಇಂದು ಜೆಎನ್‌ಯು, ನಾಳೆ ಎಲ್ಲಿ ಬೇಕಾದರೂ ಮಾಡಬಹುದು. ಇದು ಅತ್ಯಂತ ಖಂಡನೀಯವಾದ ಕೆಲಸ.

-ಆತಿಯಾ, ವಿದ್ಯಾರ್ಥಿನಿ

ದೇಶದಲ್ಲಿ ಮುಸ್ಲಿಮ್, ಆದಿವಾಸಿಗಳನ್ನು ಇಲ್ಲವಾಗಿಸುವುದು ಆರೆಸ್ಸೆಸ್‌ನ ಪ್ರಮುಖ ಅಜೆಂಡವಾಗಿದೆ. ಜೆಎನ್‌ಯುನಲ್ಲಿ ನಡೆದ ಪ್ರತಿಭಟನೆಗಳು, ಹೋರಾಟ, ವಿಜಯವನ್ನು ಸಹಿಸಲಾಗದೇ, ವಿದ್ಯಾರ್ಥಿ ನಾಯಕರ ಮೇಲೆ ಗೂಂಡಾಗಳನ್ನು ಛೂಬಿಡಲಾಗಿದೆ.

-ಪಾರಿತೋಷ, ಜೆಎನ್‌ಯು ಮಾಜಿ ಸಂಶೋಧನಾ ವಿದ್ಯಾರ್ಥಿ

ಕೇಂದ್ರ ಸರಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಇಂತಹ ಹೇಯ ಕೃತ್ಯಕ್ಕೆ ಕೈ ಹಾಕಿದೆ. ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸಬೇಕಾದ ಸರಕಾರ, ಅವರನ್ನೇ ಪೋಷಿಸುತ್ತಿದೆ. ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೀನಾಯವಾಗಿ ನೋಡುವಂತೆ ಮಾಡುತ್ತಿದ್ದಾರೆ. ಇಂತಹ ದೇಶದಲ್ಲಿ ನಾನಿದ್ದೇನೆಂದು ಹೇಳಿಕೊಳ್ಳಲು ನಾಚಿಕೆಯಾಗುತ್ತದೆ. ಇದು ಮುಂದೆ ನಾಗರಿಕ ದಂಗೆಗೆ ಕಾರಣವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

-ಯೋಗೇಶ್ ಮಾಸ್ಟರ್, ಲೇಖಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X