ಪಾರ್ಕ್ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು, ಜ.6: ನಗರದ ಹೃದಯಭಾಗದಲ್ಲಿರುವ ಲಕ್ಷ್ಮೀಶ ನಗರ ಬಡಾವಣೆಯ ಉದ್ಯಾನವನದಲ್ಲಿ ಅಪರಿಚಿತರು ಬಿಟ್ಟು ಹೋಗಿದ್ದ ನವಜಾತ ಹೆಣ್ಣು ಮಗುವನ್ನು ನಗರ ಠಾಣೆಯ ಪೊಲೀಸರು ರಕ್ಷಿಸಿದ್ದಾರೆ.
ಸೋಮವಾರ ಮುಂಜಾನೆ ಉದ್ಯಾನವನಕ್ಕೆ ಆಗಮಿಸಿದ್ದ ವಾಯು ವಿಹಾರಿಗಳು ಪಾರ್ಕ್ನಲ್ಲಿ ಅಳುತ್ತಿದ್ದ ನವಜಾತ ಹೆಣ್ಣು ಶಿಶುವನ್ನು ಗಮನಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪೊಲೀಸರು ಮಕ್ಕಳ ರಕ್ಷಣಾ ಸಮಿತಿಯವರೊಂದಿಗೆ ತೆರಳಿ ಮಗುವನ್ನು ರಕ್ಷಣೆ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆಂದು ತಿಳಿದು ಬಂದಿದೆ.
ಹೆಣ್ಣು ಮಗು ಎಂಬ ಕಾರಣಕ್ಕೆ ಮಗುವನ್ನು ಪೋಷಕರು ಪಾರ್ಕ್ನಲ್ಲಿ ಬಿಟ್ಟು ಹೋಗಿರಬಹುದೆಂದು ಪೊಲೀಸರು ಶಂಕಿಸಿದ್ದು, ಪೋಷಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಮಗು ಆರೋಗ್ಯವಾಗಿದ್ದು, ಸರ್ವೋದಯ ಮಕ್ಕಳ ಆಶ್ರಯ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
Next Story





