ಮಣಿಪಾಲ: ಸುಲಿಗೆ ಪ್ರಕರಣದ ಆರೋಪಿ ಆತ್ಮಹತ್ಯೆ
ಕಾಪು, ಜ.6: ಮಣಿಪಾಲದಲ್ಲಿ ನಡೆದ ಸುಲಿಗೆ ಪ್ರಕರಣದಲ್ಲಿ ಬಂಧಿತನಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಆರೋಪಿಯೊಬ್ಬ ಮಾನಸಿಕವಾಗಿ ನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.5ರಂದು ರಾತ್ರಿ ವೇಳೆ ಕಟಪಾಡಿ ಕೋಟೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಟಪಾಡಿ ಕೋಟೆ ಗ್ರಾಮದ ಮಿಲಾಗ್ರಿಸ್ ಸಾಕಂಬಾಡಿ ನಿವಾಸಿ ಆತೀಶ್ ಡಿಸಿಲ್ವ(23) ಎಂದು ಗುರುತಿಸಲಾಗಿದೆ. ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಈತ, ಸುಮಾರು 5 ತಿಂಗಳ ಹಿಂದೆ ಮಣಿಪಾಲ ಠಾಣೆಯಲ್ಲಿ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದನು.
ಸುಮಾರು ಮೂರು ತಿಂಗಳುಗಳ ಕಾಲ ಜೈಲಿನಲ್ಲಿದ್ದ ಆತೀಶ್, ಕಳೆದ ನವೆಂಬರ್ ತಿಂಗಳಿನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಗೊಂಡಿ ದ್ದನು. ನಂತರ ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದ, ಈತ ಮಾನಸಿಕವಾಗಿ ಖಿನ್ನತೆ ಒಳಗಾಗಿದ್ದನು. ಇದೇ ವಿಚಾರದಲ್ಲಿ ಮನನೊಂದ ಆತ, ಜ.5ರಂದು ರಾತ್ರಿ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





