ವಿಕಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅವಂತಿ ಸ್ಕೂಲ್ ಒಲಿಂಪಿಯಾಡ್ ಪರೀಕ್ಷೆ

ಮಂಗಳೂರು: ನಗರದ ವಿಕಾಸ್ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಅವಂತಿ ಸ್ಕೂಲ್ ಒಲಿಂಪಿಯಾಡ್ ಪರೀಕ್ಷೆಯನ್ನು ನಡೆಸಲಾಯಿತು. ಈ ಪರೀಕ್ಷೆಯಲ್ಲಿ ನಗರದ ವಿವಿಧ ಶಾಲೆಗಳ 180 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅವಂತಿ ಹುಬ್ಬಳ್ಳಿ ಘಟಕದ ಸಮನ್ವಯಾಧಿಕಾರಿ ಪ್ರದೀಪ್ ವಿಜ್ಞಾನ ಶಿಕ್ಷಣದ ಬಗ್ಗೆ ಹಾಗೂ ಸಿಎ ಸೋನಿತ್ ಶೆಟ್ಟಿ ಕಾಮರ್ಸ್ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು.
ಇದೇ ಹೊತ್ತಿನಲ್ಲಿ ವಿದ್ಯಾರ್ಥಿಗಳ ಹೆತ್ತವರಿಗೆ ಇಂದಿನ ಶಿಕ್ಷಣ, ಎಸ್‍ಎಸ್‍ಎಲ್‍ಸಿ ನಂತರದ ವಿದ್ಯಾಭ್ಯಾಸದ ಆಯ್ಕೆಯ ಬಗ್ಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಈ ಪರೀಕ್ಷೆಯ ಫಲಿತಾಂಶವನ್ನು ಜ.12ರಂದು ತಿಳಿಸಲಾಗುವುದು. ಈ ಪರೀಕ್ಷೆಯಲ್ಲಿ ಪ್ರಥಮ ಮೂರು ಸ್ಥಾನಗಳನ್ನು ಪಡೆದ ಶಾಲೆಗಳಿಗೆ ತಲಾ 15,000, 10,000 ಮತ್ತು 5000 ರೂ. ನಗದು ಬಹುಮಾನಗಳನ್ನು ನೀಡಲಾಗುವುದು. ಆಕರ್ಷಕ ಬಹುಮಾನದ ರೂಪದಲ್ಲಿ ಲ್ಯಾಪ್‍ಟಾಪ್, ಸ್ಮಾರ್ಟ್ ಫೋನ್ ಹಾಗೂ ಟ್ಯಾಬ್‍ಗಳನ್ನು ವಿತರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.









