Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಯಕ್ಷಋಷಿ’ ಹೊಸ್ತೋಟ ಮಂಜುನಾಥ ಭಾಗವತ...

‘ಯಕ್ಷಋಷಿ’ ಹೊಸ್ತೋಟ ಮಂಜುನಾಥ ಭಾಗವತ ನಿಧನ

ವಾರ್ತಾಭಾರತಿವಾರ್ತಾಭಾರತಿ7 Jan 2020 8:09 PM IST
share
‘ಯಕ್ಷಋಷಿ’ ಹೊಸ್ತೋಟ ಮಂಜುನಾಥ ಭಾಗವತ ನಿಧನ

ಶಿರಸಿ, ಜ.7: ಯಕ್ಷಗಾನ ಲೋಕದ ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತ (80) ಮಂಗಳವಾರ ನಿಧನರಾಗಿದ್ದಾರೆ.

15 ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದು ಬಂದಿದೆ.

ಭಾಗವತರು 1940ರಲ್ಲಿ ತಾಲೂಕಿನ ಹನುಮಂತಿ ಗ್ರಾಮದ ಹೊಸ್ತೋಟದಲ್ಲಿ ಜನಿಸಿದರು. ಸಣ್ಣ ವಯಸ್ಸಿನಲ್ಲೇ ಯಕ್ಷಗಾನನದಲ್ಲಿ ಅತೀವ ಆಸಕ್ತ ಬೆಳೆಸಿಕೊಂಡುದ ಅವರು, ಕೆರೆಮನೆ ಶಿವರಾಮ ಹೆಗಡೆ ಅವರ ಬಳಿ ಯಕ್ಷಗಾನ ಶಿಕ್ಷಣ ಪಡೆದಿದ್ದರು.

ಬಳಿಕ ಕೆರೆಮನೆ ಮೇಳದಲ್ಲಿ ಕಲಾವಿದರಾಗಿ ಪಾತ್ರ ನಿರ್ವಹಿಸಿದರು. ಯಕ್ಷಗಾನದ ಭಾಗವತಿಕೆ, ನೃತ್ಯ, ಚಂಡೆ, ಮದ್ದಲೆ ವಾದನ, ವೇಷಗಾರಿಕೆ, ಅರ್ಥಗಾರಿಕೆ ಹೀಗೆ ಎಲ್ಲ ವಿಭಾಗಗಳಲ್ಲೂ ಪರಿಣತಿ ಪಡೆದಿದ್ದ ಇವರು, ರಾಮಯಣ, ಶ್ರೀರಾಮ ಮಹಿಮೆ, ಶ್ರೀಕೃಷ್ಣ ಮಹಿಮೆ, ಮಹಾಭಾರತ, ಹನುಮಾಯಣ, ಗೋಮಹಿಮೆ, ರಾಮಕೃಷ್ಣ ಚರಿತೆ, ಭಾಸವತಿ, ಮೇಘದೂತ, ಉತ್ತರರಾಮ ಚರಿತೆ, ಪ್ರತಿಜ್ಞಾಯೌಗಂಧರಾಯಣ, ಚಂಡ ಮಹಾಸೇನ, ಸುಹಾಸಿನಿ ಪರಿಣಯ ಮೊದಲಾದ 300ಕ್ಕೂ ಹೆಚ್ಚು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ ಹಿರಿಮೆ ಅವರಿಗೆ ಸಲ್ಲುತ್ತದೆ.

ಶ್ರೀ ಲಕ್ಷ್ಮೀನರಸಿಂಹ ಪ್ರಸಾದಿತ ಯಕ್ಷಗಾನ ಮಂಡಳಿ ಸೋಂದಾ, ಸಮಯ ಸಮೂಹ ಶಿರಸಿ, ವನಶ್ರೀ ಶಿಕ್ಷಣ ಸಂಸ್ಥೆ ಸಾಗರ, ಯಕ್ಷಕೂಟ ಮೈಸೂರು ಮೊದಲಾದ ಯಕ್ಷಗಾನ ಮಂಡಳ ಯಕ್ಷಗಾನ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.

1990ರಲ್ಲಿ ಶಿವಮೊಗ್ಗದ ಶ್ರೀಶಾರದಾದೇವಿ ಅಂಧರ ವಿಕಾಸ ಕೇಂದ್ರದ ಅಂಧ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡಿ, ದಾಖಲೆ ಬರೆದಿರುವ ಹೊಸ್ತೋಟ ಭಾಗವತರು, ಸುಮಾರು 75ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಯಕ್ಷಗಾನ ತರಬೇತಿ ಕೇಂದ್ರಗಳನ್ನು ನಡೆಸಿ, 1,600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಕೀರ್ತಿ ಇವರದು.

ಯಕ್ಷಗಾನ ತಾಳಸೂತ್ರ, ಯಕ್ಷಗಾನ ಮಟ್ಟುಗಳ ಸಂಗ್ರಹ, ಯಕ್ಷಗಾನ ಮದ್ದಲೆ ನುಡಿಗಟ್ಟುಗಳು, ಪವಾಡವಲ್ಲ ವಿಸ್ಮಯ, ಒಡಲಿನ ಮಡಿಲು-ಯಕ್ಷತಾರೆ, ಅನುಭವ ಕಥನಗಳನ್ನು ರಚಿಸಿದ್ದಾರೆ.ಇವರ ಯಕ್ಷ ಪ್ರಾವೀಣ್ಯತೆಗೆ ರಾಷ್ಟ್ರಪತಿ ಪ್ರಶಸ್ತಿ 1987ರಲ್ಲಿ ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

2012ರಲ್ಲಿ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ, ಜಾನಪದ ಅಕಾಡಮಿಯ ವಿಶೇಷ ಪುರಸ್ಕಾರ, 2014ರಲ್ಲಿ ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ, ಹಾರಾಡಿ ರಾಮ ಗಾಣಿಗ ಮತ್ತು ವೀರಭದ್ರ ನಾಯಕ ಪ್ರಶಸ್ತಿ, ರಾಮವಿಠ್ಠಲ ಪುರಸ್ಕಾರ, 2015ರಲ್ಲಿ ಯಕ್ಷಗಾನ ಕಲಾರಂಗ ಕೊಡಮಾಡಿದ ಉಪ್ಪೂರು ನಾರಾಯಣ ಭಾಗವತ ಪ್ರಶಸ್ತಿ, 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ ಸೇರಿದಂತೆ ಅಗ್ನಿ ಸೇವಾ ಟ್ರಸ್ಟ್‌ನ ಪರಮದೇವ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪುರಸ್ಕಾರ, ಸೀತಾನದಿ ಗಣಪಯ್ಯ ಭಾಗವತ ಪುರಸ್ಕಾರಗಳನ್ನು ತನ್ನದಾಗಿಸಿಕೊಂಡಿದ್ದರು.

ಅಲ್ಲದೆ, ಯಕ್ಷ ಋಷಿ, ಷಷ್ಠ್ಯಬ್ಧಿ, ಬಹುಮುಖ ಸೇರಿದಂತೆ ಹಲವು ಅಭಿನಂದನಾ ಗ್ರಂಥಗಳು ಪ್ರಕಟಗೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X