ಬಂದ್ ಯಾವುದೇ ಪರಿಣಾಮ ಬೀರದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಜ. 7: ನಾಳೆ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
“ರಾಜ್ಯದ ಎಲ್ಲಾ ನಗರಗಳು, ಅದರಲ್ಲೂ ಬೆಂಗಳೂರಿನಲ್ಲಿ ಜನಜೀವನ ಎಂದಿನಂತೇ ಸಾಮಾನ್ಯವಾಗಿರುತ್ತದೆ ಮತ್ತು ಅವರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇರುವುದಿಲ್ಲ.
ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಸಾರಿಗೆ ಕೂಡ ಸಾಮಾನ್ಯವಾಗಿರುತ್ತದೆ. ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಪೊಲೀಸ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ.
ಬಂದ್ ಗಳು ಜನವಿರೋಧಿಯೆಂದು ಹಿಂದೆ ಸವೋಚ್ಛ ನ್ಯಾಯಾಲಯ ಹೇಳಿದೆ. ಈ ವಿಷಯ ಬಂದ್ ಗೆ ಕರೆ ಕೊಟ್ಟವರ ಗಮನದಲ್ಲಿ ಇರಬೇಕು.
ಜನರು ಯವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದು ನನ್ನ ಕಳಕಳಿಯ ಮನವಿ” ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





