Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ ಸಮಸ್ಯೆಗಳಿಗೆಲ್ಲಾ ಸೂಕ್ತ...

ಉಡುಪಿ ಜಿಲ್ಲೆಯ ಸಮಸ್ಯೆಗಳಿಗೆಲ್ಲಾ ಸೂಕ್ತ ಪರಿಹಾರ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ7 Jan 2020 8:30 PM IST
share
ಉಡುಪಿ ಜಿಲ್ಲೆಯ ಸಮಸ್ಯೆಗಳಿಗೆಲ್ಲಾ ಸೂಕ್ತ ಪರಿಹಾರ: ಬಸವರಾಜ ಬೊಮ್ಮಾಯಿ

ಉಡುಪಿ, ಜ.7: ಜಿಲ್ಲೆಯಲ್ಲಿರುವ ಮರಳು ಸಮಸ್ಯೆ, ಕ್ವಾರಿ ಸಮಸ್ಯೆ ಮತ್ತು ಡೀಮ್ಡ್ ಫಾರೆಸ್ಟ್ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಸರಕಾರದ ವತಿಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಅಂಬೇಡ್ಕರ್ ನಿಗಮ, ವಾಲ್ಮೀಕಿ ನಿಗಮ ಮತ್ತು ದೇವರಾಜ್ ಅರಸು ನಿಗಮದ ವತಿಯಿಂದ ಅನುಮೋದನೆಯಾಗಿರುವ ಎಲ್ಲಾ ವಸತಿ ಯೋಜನೆ ಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
 ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತ ಮತ್ತು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ 2018-19ನೇ ಸಾಲಿನ ಬಾಕಿ ಇರುವ ಬೋರ್‌ವೆಲ್ ಕೊರೆಸುವ, ಪಂಪ್‌ಸೆಟ್ ಹಾಕಿ ವಿದ್ಯುತ್ ಸಂಪರ್ಕ ಒದಗಿಸುವ ಕಾಮಗಾರಿ ಗಳನ್ನು ಮಾ.31ರೊಳಗೆ ಪೂರ್ಣಗೊಳಿಸುವಂತೆ ಹಾಗೂ ಈ ಕಾಮಗಾರಿಗಳ ಜೊತೆಜೊತೆಗೆ 2019-2020ನೇ ಸಾಲಿನ ಕಾಮಗಾರಿಗಳನ್ನು ಸಹ ಕೈಗೆತ್ತಿಕೊಳ್ಳುವಂತೆ ಸೂಚಿಸಿದ ಸಚಿವರು, ಜಿಲ್ಲಾಧಿಕಾರಿಗಳ ಮೇಲುಸ್ತುವಾರಿ ಯಲ್ಲಿ ಈ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ನೋಡಿ ಕೊಳ್ಳಬೇಕು ಎಂದು ಆದೇಶಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತ ಮತ್ತು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ 2018-19ನೇ ಸಾಲಿನ ಬಾಕಿ ಇರುವ ಬೋರ್‌ವೆಲ್ ಕೊರೆಸುವ, ಪಂಪ್‌ಸೆಟ್ ಹಾಕಿ ವಿದ್ಯುತ್ ಸಂಪರ್ಕ ಒದಗಿಸುವ ಕಾಮಗಾರಿ ಗಳನ್ನು ಮಾ.31ರೊಳಗೆ ಪೂರ್ಣಗೊಳಿಸುವಂತೆ ಹಾಗೂ ಈ ಕಾಮಗಾರಿಗಳ ಜೊತೆಜೊತೆಗೆ 2019-2020ನೇ ಸಾಲಿನ ಕಾಮಗಾರಿಗಳನ್ನು ಸಹ ಕೈಗೆತ್ತಿಕೊಳ್ಳುವಂತೆ ಸೂಚಿಸಿದ ಸಚಿವರು, ಜಿಲ್ಲಾಧಿಕಾರಿಗಳ ಮೇಲುಸ್ತುವಾರಿ ಯಲ್ಲಿ ಈ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ನೋಡಿ ಕೊಳ್ಳಬೇಕು ಎಂದು ಆದೇಶಿಸಿದರು. ನಿಗಮದ ವತಿಯಿಂದ ನಡೆಸಲಾಗುವ ಎಲ್ಲಾ ಯೋಜನೆಗಳು ಮತ್ತು ಕಾಮಗಾರಿಗಳ ಮೂರು ವರ್ಷಗಳ ಪ್ರಗತಿಯ ವರದಿಯನ್ನು ಸಲ್ಲಿಸಬೇಕು. ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯ ಪ್ರವೃತ್ತಾಗಬೇಕು ಎಂದವರು ಸೂಚಿಸಿದರು.

ನಿಗಮದ ವತಿಯಿಂದ ನಡೆಸಲಾಗುವ ಎಲ್ಲಾ ಯೋಜನೆಗಳು ಮತ್ತು ಕಾಮಗಾರಿಗಳ ಮೂರು ವರ್ಷಗಳ ಪ್ರಗತಿಯ ವರದಿಯನ್ನು ಸಲ್ಲಿಸಬೇಕು. ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯ ಪ್ರವೃತ್ತರಾಗಬೇಕು ಎಂದವರು ಸೂಚಿಸಿದರು.

ಕೊರಗರ ಅಭಿವೃದ್ಧಿಗಾಗಿ ಈಗಾಗಲೇ 10 ಕೋಟಿ ರೂ. ಬಿಡುಗಡೆ ಯಾಗಿದ್ದು, ಇವುಗಳಲ್ಲಿ ಈಗಾಗಲೇ 6.36 ಕೋಟಿ ರೂ. ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. 27 ಕಾಮಗಾರಿಗಳು ಪೂರ್ಣಗೊಂಡಿದ್ದು, 25 ಕಾಮಗಾರಿಗಳು ಪ್ರಗತಿಯಲ್ಲಿವೆ. ಇದರಲ್ಲಿ 16 ಕಾಮಗಾರಿಗಳನ್ನು ಜನವರಿ ಅಂತ್ಯದೊಳಗೆ ಮತ್ತು ಉಳಿದ 9 ಕಾಮಗಾರಿಗಳನ್ನು ಏಪ್ರಿಲ್ ಅಂತ್ಯದೊಳಗೆ ಮುಗಿಸುವುದಾಗಿ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಕಿಂಡಿ ಅಣೆಕಟ್ಟು ಮತ್ತು ವೆಂಟೆಂಡ್ ಡ್ಯಾಂಗಳಿಂದ ಹೊರತೆಗೆದ ಹೂಳಿನಿಂದ ಮರಳನ್ನು ಪ್ರತ್ಯೇಕಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ನೀಡುವ ಜವಾಬ್ದಾರಿ ಮೂರೂ ತಾಲೂಕಿನ ಇಓಗಳದಾಗಿದ್ದು, ಮರಳಿನ ಮಾರಾಟದಿಂದ ಬಂದ ಆದಾಯವನ್ನು ನದಿಗಳಿಂದ ಹೂಳು ತೆಗೆಯಲು ಉಪಯೋಗಿಸುವಂತೆ ಇಓಗಳಿಗೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಕಾಮಗಾರಿಗಳು ಪ್ರಗತಿ ಯಲ್ಲಿದ್ದು, 3 ಕಾಮಗಾರಿಗಳು ಪೂರ್ಣಗೊಂಡಿವೆ. ರಾಜ್ಯ ಹೆದ್ದಾರಿಗಳ ಅಗಲೀಕರಣ ಕಾರ್ಯಗಳು ನಡೆಯಲಿದ್ದು, ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದೆ. ಎಲ್ಲಾ ಕಾಮಗಾರಿಗಳನ್ನು ಫೆಬ್ರವರಿ ಅಂತ್ಯದೊಳಗೆ ಪೂರ್ಣ ಗೊಳಿಸುವುದಾಗಿ ಲೋಕೋಪಯೋಗಿ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.

ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಕೂರಿಸುವ ಕೆಲಸಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು, ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರವನ್ನು ಕೂಡಲೇ ಕೊಡಲು ಬೇಕಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಸಚಿವರು, ಪ್ರವಾಹದಿಂದ ಹಾನಿಗೊಳಗಾದ ಶಾಲಾ ಕಟ್ಟಡಗಳ ರಿಪೇರಿ ಕಾಮಗಾರಿಗಳ ಬಗ್ಗೆ ಮಾಹಿತಿ ಕೇಳಿದರು. ಒಟ್ಟು 166 ಕಟ್ಟಡಗಳು ಬಾಗಶಃ ಹಾನಿ ಗೊಳಗಾಗಿದ್ದು, 40 ಶಾಲೆಗಳ ರಿಪೇರಿ ಕಾರ್ಯ ಪೂರ್ಣಗೊಂಡಿದೆ. ಬಾಕಿ ಇರುವ ಕಾಮಗಾರಿಗಳನ್ನು ಪೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸಭೆಗೆ ತಿಳಿಸಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಜಿಲ್ಲೆಯಲ್ಲಿ 1,39,000 ರೈತರು ಹೆಸರು ನೋಂದಾಯಿಸಿದ್ದು ಇವರಲ್ಲಿ ಫಲಾನುಭವಿ ರೈತರಿಗೆ 3 ಕಂತುಗಳಲ್ಲಿ ಪಿಂಚಣಿ ಪಾವತಿಯಾಗಿದೆ.ನಾಲ್ಕನೇ ಕಂತು ಬಿಡುಗಡೆಯಾಗಲಿದೆ. 1191 ರೈತರಿಗೆ ಬೆಳೆ ಪರಿಹಾರ ನೀಡಲು ಫಲಾನುಭವಿಗಳ ಹೆಸರನ್ನು ನೊಂದಾ ಯಿಸಲಾಗಿದೆ ಎಂದು ಕೃಷಿ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.

2019-20ನೇ ಸಾಲಿನಲ್ಲಿ ನೆರೆ ಪರಿಹಾರಕ್ಕಾಗಿ 20 ಕೋಟಿ ರೂ. ಬಿಡುಗಡೆ ಯಾಗಿದ್ದು, ಇದರಲ್ಲಿ 485 ಗ್ರಾಮೀಣಾಭಿವೃದ್ಧಿ ಕಾಮಗಾರಿಗಳು, 201 ನಿರ್ಮಾಣ ಕಾಮಗಾರಿಗಳು, 128 ನಗರಾಭಿವೃದ್ಧಿ ಕಾಮಗಾರಿ ಹಾಗೂ ಎ, ಬಿ ಮತ್ತು ಸಿ ವರ್ಗದಲ್ಲಿ ಕ್ರಮವಾಗಿ 46, 144 ಮತ್ತು 112 ಮನೆಗಳ ಕಾಮಗಾರಿಗಳಿಗೆ ಹಣಕಾಸು ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಡ್ರಗ್ಸ್ ಮಾದಕ ಜಾಲದ ಮೇಲೆ ಶೂನ್ಯ ಸಹಿಷ್ಣುತೆಯನ್ನು ಹೊಂದಬೇಕು. ಡ್ರಗ್ಸ್ ಮಾಫಿಯಾದ ಮೇಲೆ ಯುದ್ಧ ಸಾರಿ ಸಮರೋಪಾದಿ ಯಲ್ಲಿ ಕಾರ್ಯನಿರ್ವಹಿಸಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಿ, ಈ ಜಾಲದಲ್ಲಿ ತೊಡಗಿರುವ ಕಿಂಗ್‌ಪಿನ್‌ಗಳನ್ನು ಕೂಡಾ ಬಂಧಿಸಿ ಜಾಲವನ್ನು ನಿಷ್ಕ್ರಿಯಗೊಳಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶ ನೀಡಿದರು.

ಸಭೆಯಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ವಿಧಾನಸಬೆಯ ಮುಖ್ಯ ಸಚೇತಕ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಎಸ್ಪಿ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರು, ಡಿಎಫ್‌ಓ ಕಮಲ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಕೌಡೂರು, ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಬಾ ಜಿ ಪುತ್ರನ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X