ಮಾನಸಿಕ ಆರೋಗ್ಯದ ಕುರಿತು ತರಬೇತಿ ಕಾರ್ಯಾಗಾರ
ಉಡುಪಿ, ಜ.7: ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಗಳ ಹಾಗೂ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಮಾನಸಿಕ ಆರೋಗ್ಯ ಕುರಿತು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಸಮಾದೇಷ್ಠ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಒತ್ತಡದ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹದಂತಹ ರೋಗಗಳು ಹಾಗೂ ಮಧ್ಯಪಾನ, ದೂಮಪಾನ ಗಳಂತಹ ದುಶ್ಚಟಗಳಿಗೆ ಒಳಗಾಗುತ್ತಿದ್ದು, ಮಾನಸಿಕ ಒತ್ತಡ ಹೆಚ್ಚಾಗುತ್ತಿವೆ. ಇಂತಹ ಕಾರ್ಯಾಗಾರದಿಂದ ಒತ್ತಡ ನಿವಾರಣೆಗೆ ಸೂಕ್ತ ಮಾರ್ಗದರ್ಶನ ಸಿಗಲಿದ್ದು ಇದರ ಸದುಪಯೋಗವನ್ನು ಗೃಹರಕ್ಷಕರು ಪಡೆದು ಕೊಳ್ಳುವಂತೆ ಸೂಚಿಸಿದರು.
ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಮನೋರೋಗ ತಜ್ಞ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ. ಮಾನಸ್, ಮಾನಸಿಕ ಒತ್ತಡ ನಿವಾರಣೆಯ ಕುರಿತು ವಿವಿದ ಚಟುವಟಿಕೆಗಳ ಮೂಲಕ ಮಾಹಿತಿ ನೀಡಿ ಪರಿಹಾರೋಪಾಯ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಘಟಕಾಧಿಕಾರಿ ಕುಮಾರ್ ಹಾಗೂ ಮಣಿಪಾಲ ಘಟಕಾಧಿಕಾರಿ ಸರಸ್ವತಿ ಹಾಗೂ ಸುಮಾರು 50 ಮಂದಿ ಗೃಹರಕಕ್ಷ/ಗೃಹರಕ್ಷಕಿಯರು ಭಾಗವಹಿಸಿದ್ದರು.
ಜಿಲ್ಲಾ ಗೃಹರಕ್ಷಕದಳ ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಸ್ವಾಗತಿಸಿ, ಕಚೇರಿ ಅಧೀಕ್ಷಕಿ ಕವಿತಾ ಕೆ.ಸಿ ವಂದಿಸಿದರು.







