ವೇಶ್ಯಾವಾಟಿಕೆ ದಂಧೆ: ಸೆರೆ
ಬೆಂಗಳೂರು, ಜ.7: ಹಣದ ಆಸೆಗಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಹತೆನಲ್ ಚೊಂಗ್, ಸಟ್ಜೇಸಿ ಹೊವುಮ್, ರಾಬರ್ಟ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಈಶಾನ್ಯ ಭಾರತೀಯ ಯುವತಿಯರನ್ನು ಮಾನವ ಕಳ್ಳ ಸಾಗಾಣಿಕೆ ಮಾಡಿ ಹಣದ ಸಹಾಯ ಮಾಡುವುದಾಗಿ ಆಸೆ ಹುಟ್ಟಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಸಂಬಂಧ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ನಗದು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಿ, ಇಲ್ಲಿನ ಜೀವನ್‌ಭೀಮಾನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
Next Story





