'ರಜೆ ಘೋಷಣೆ' ನಕಲಿ ಆದೇಶ: ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ

ನಕಲಿ ಆದೇಶದ ಪ್ರತಿ
ಮಂಗಳೂರು: ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜ.8ರಂದು ರಜೆ ಘೋಷಿಸಿರುವ ಬಗ್ಗೆ ಜಿಲ್ಲಾಧಿಕಾರಿಯ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದೆ. ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಸ್ಪಷ್ಟನೆ ನೀಡಿದ್ದಾರೆ.
ರಜೆ ಘೋಷಿಸಿದ ನಕಲಿ ಆದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಯಾವುದೇ ರಜೆ ಘೋಷಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಜ.8ರಂದು ದ.ಕ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳು ಎಂದಿನಂತೆ ಇರಲಿವೆ. ಸಾರ್ವಜನಿಕರು ಸಹಕರಿಸಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
Next Story





