ದಾವಣಗೆರೆ ಬಂದ್ ಇಲ್ಲ: ಡಿಸಿ ಸ್ಪಷ್ಟನೆ
ದಾವಣಗೆರೆ, ಜ.7: ಜಿಲ್ಲೆಯಲ್ಲಿ ಯಾವುದೇ ಬಂದ್ ಇಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟಪಡಿಸಿದ್ದಾರೆ.
ಕಾರ್ಮಿಕ ಸಂಘಟನೆಗಳು ಜ.8ರಂದು ಭಾರತ್ ಬಂದ್ ಕರೆ ನೀಡಿರುವ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ. ವಿವಿಧ ಕಾರ್ಮಿಕ ಸಂಘಟನೆಗಳು ಮುಷ್ಕರ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾ1ಡಳಿತ ಹಾಗೂ ಪೋಲಿಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಷ್ಕರನಿರತರು ವರ್ತಿಸಬೇಕು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮತರಾಯ, ನಗರದ ಪ್ರಮುಖ ಭಾಗಗಳಲ್ಲಿ 4 ಕೆಎಸ್‌ಆರ್‌ಪಿ ತುಕಡಿ, ಡಿಎಆರ್‌ನ 8 ತುಕಡಿಗಳು, 5ಡಿವೈಎಸ್ಪಿಗಳು, 10ವೃತ್ತ ನಿರೀಕ್ಷಕರು, 40ಪಿಎಸ್ಸೈಗಳು, 500 ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿ ತಾಲೂಕಿನಲ್ಲಿ 1 ಡಿಎಆರ್ ನಿಯೋಜನೆ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ನಗರದೆಲ್ಲೆಡೆ ಪೋಲಿಸರು ಗಸ್ತು ನಡೆಸಲಿದ್ದಾರೆ. ಕೆಎಸ್ಸಾರ್ಟಿಸಿ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟುಮಾಡಿದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.







