Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಧ್ಯಾತ್ಮಿಕ ಸಂಸ್ಥೆ ಕಾನೂನಿಗಿಂತ...

ಆಧ್ಯಾತ್ಮಿಕ ಸಂಸ್ಥೆ ಕಾನೂನಿಗಿಂತ ಮೇಲಲ್ಲ: ಜಗ್ಗಿ ವಾಸುದೇವ್ ರ ಇಷಾ ಫೌಂಡೇಶನ್ ಗೆ ಹೈಕೋರ್ಟ್ ತರಾಟೆ

ಕಾವೇರಿ ಕಾಲಿಂಗ್ ಯೋಜನೆಯಲ್ಲಿ ಜನರಿಂದ ಸಂಗ್ರಹಿಸಿದ ಹಣದ ಮಾಹಿತಿ ನೀಡಲು ವಿಫಲ

ವಾರ್ತಾಭಾರತಿವಾರ್ತಾಭಾರತಿ7 Jan 2020 11:47 PM IST
share
ಆಧ್ಯಾತ್ಮಿಕ ಸಂಸ್ಥೆ ಕಾನೂನಿಗಿಂತ ಮೇಲಲ್ಲ: ಜಗ್ಗಿ ವಾಸುದೇವ್ ರ ಇಷಾ ಫೌಂಡೇಶನ್ ಗೆ ಹೈಕೋರ್ಟ್ ತರಾಟೆ

ಬೆಂಗಳೂರು,ಜ.7: ತನ್ನ ‘ ಕಾವೇರಿ ಕಾಲಿಂಗ್ ’ ಯೋಜನೆಗಾಗಿ ಜನರಿಂದ ಎಷ್ಟು ಹಣವನ್ನು ಸಂಗ್ರಹಿಸಲಾಗಿದೆ ಎನ್ನುವುದನ್ನು ಘೋಷಿಸಲು ವಿಫಲಗೊಂಡಿದ್ದಕ್ಕಾಗಿ ಸದುರು ಜಗ್ಗಿ ವಾಸುದೇವ ಅವರ ಇಷಾ ಪ್ರತಿಷ್ಠಾನವನ್ನು ಮಂಗಳವಾರ ತೀವ್ರ ತರಾಟೆಗೆತ್ತಿಕೊಂಡ ಕರ್ನಾಟಕ ಉಚ್ಚ ನ್ಯಾಯಾಲಯವು,ಪ್ರತಿಷ್ಠಾನವು ಸಂಗ್ರಹಿಸಿರುವ ಹಣದ ವಿವರ ಮಾತ್ರವಲ್ಲ,ಅದನ್ನು ಸಂಗ್ರಹಿಸಲು ಅನುಸರಿಸಿದ ವಿಧಾನಗಳ ಬಗ್ಗೆಯೂ ತಿಳಿಸಬೇಕು ಎಂದು ಹೇಳಿತು.

 ‘ನಿಮ್ಮದು ಆಧ್ಯಾತ್ಮಿಕ ಸಂಸ್ಥೆಯಾಗಿರುವುದರಿಂದ ಕಾನೂನಿಗೆ ನೀವು ಅತೀತರಾಗಿದ್ದೀರಿ ಎಂಬ ಭಾವನೆ ಬೇಡ ’ ಎಂದು ಮುಖ್ಯ ನ್ಯಾಯಾಧೀಶ ಅಭಯ ಓಕಾ ಮತ್ತು ನ್ಯಾ.ಹೇಮಂತ ಚಂದನಗೌಡರ ಅವರ ವಿಭಾಗೀಯ ಪೀಠವು ಚಾಟಿ ಬೀಸಿತು.

ನ್ಯಾಯವಾದಿ ಎ.ವಿ.ಅಮರನಾಥ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿದೆ. ಜನರಿಂದ ಹೆಚ್ಚು ಹಣವನ್ನು ಸಂಗ್ರಹಿಸದಂತೆ ಪ್ರತಿಷ್ಠಾನಕ್ಕೆ ಸೂಚನೆ ನೀಡುವಂತೆ ಅರ್ಜಿದಾರರು ಕೋರಿಕೊಂಡಿದ್ದರು.

ಹಣವನ್ನು ಜನರಿಂದ ಸ್ವಯಂಪ್ರೇರಿತ ದೇಣಿಗೆಯಾಗಿ ಸಂಗ್ರಹಿಸಲಾಗಿದೆಯೇ ಎನ್ನುವುದನ್ನೂ ತನಗೆ ತಿಳಿಸುವಂತೆ ನ್ಯಾಯಾಲಯವು ಪ್ರತಿಷ್ಠಾನಕ್ಕೆ ನಿರ್ದೇಶ ನೀಡಿತು.

  ‘ಕಾವೇರಿ ಕಾಲಿಂಗ್’ ಯೋಜನೆಯು ಗಿಡಗಳನ್ನು ನೆಡುವ ಮೂಲಕ ಕಾವೇರಿ ನೀರಿನ ಹರಿವು ಕಡಿಮೆಯಾಗುವುದನ್ನು ಮತ್ತು ರೈತರ ಸಂಕಷ್ಟಗಳನ್ನು ತಡೆಯುವ ಅವಳಿ ಉದ್ದೇಶಗಳನ್ನು ಹೊಂದಿದೆ. 242 ಕೋಟಿ ಗಿಡಗಳನ್ನು ನೆಡುವುದು ತನ್ನ ಗುರಿಯಾಗಿದ್ದು,ಈವರೆಗೆ 4,66,93,937 ಗಿಡಗಳ ಕೊಡುಗೆ ಸ್ವೀಕರಿಸಿದ್ದೇನೆ. ಈ ಪೈಕಿ 3.07 ಗಿಡಗಳು ಸರಕಾರ ಮತ್ತು ಇತರ ನರ್ಸರಿಗಳ ಕೊಡುಗೆಯಾಗಿದೆ ಎಂದು ಯೋಜನೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ. ಪ್ರತಿಷ್ಠಾನವು ಪ್ರತಿ ಗಿಡಕ್ಕೆ 42 ರೂ.ನಂತೆ ದೇಣಿಗೆಯನ್ನು ಸಂಗ್ರಹಿಸುತ್ತಿದೆ.

ನಟ ಲಿಯೊನಾರ್ಡೊ ಡಿಕ್ಯಾಪ್ರಿಯೊ ಅವರಂತಹ ಹವಾಮಾನ ಕಾರ್ಯಕರ್ತರು ಯೋಜನೆಯನ್ನು ಬೆಂಬಲಿಸಿದ್ದಾರೆ. ಆದರೆ ಅದಕ್ಕಾಗಿ ಹಣ ಸಂಗ್ರಹಿಸುತ್ತಿರುವ ವಿಧಾನವನ್ನು ನಾಗರಿಕ ಸಮಾಜದ ಗುಂಪುಗಳು ವಿರೋಧಿಸಿದ್ದು,ಇದರಿಂದಾಗಿ ಯೋಜನೆಯು ವಿವಾದಾತ್ಮಕವಾಗಿದೆ.

ಪುನಃಶ್ಚೇತನ ಚಟುವಟಿಕೆಯ ಬಗ್ಗೆ ಯಾರಾದರೂ ಅರಿವು ಮೂಡಿಸುತ್ತಿದ್ದರೆ ಅದು ಅತ್ಯಂತ ಸ್ವಾಗತಾರ್ಹ,ಆದರೆ ಬಲವಂತದಿಂದ ಹಣವನ್ನು ಸಂಗ್ರಹಿಸಬಾರದು ಎಂದೂ ಪೀಠವು ಹೇಳಿತು.

ಪ್ರತಿಷ್ಠಾನವು ಬಲವಂತದಿಂದ ಹಣವನ್ನು ಸಂಗ್ರಹಿಸುತ್ತಿದೆ ಎಂಬ ದೂರುಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸದ್ದಕ್ಕೆ ರಾಜ್ಯ ಸರಕಾರವನ್ನೂ ಉಚ್ಚ ನ್ಯಾಯಾಲಯವು ತರಾಟೆಗೆತ್ತಿಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X